ಸೌಲಭ್ಯ ನೀಡಲು ಫಲಾನುಭವಿಗಳನ್ನು ಅಲೆಸದಿರಿ


Team Udayavani, Jul 13, 2022, 3:20 PM IST

14facility

ರಾಯಚೂರು: ಜಿಲ್ಲೆಯಲ್ಲಿ ಕೊರೊನಾ ಸಂಕಷ್ಟದ ವೇಳೆ ಬೀದಿ ಬದಿ ವ್ಯಾಪಾರಿಗಳಿಗೆ ನೆರವಾಗಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನಮಂತ್ರಿ ಸ್ವನಿಧಿ ಸಾಲ ಸೌಲಭ್ಯ ಯೋಜನೆ ಅರ್ಹ ಫಲಾನುಭವಿಗಳಿಗೆ ತಲುಪಿಸುವಂತೆ ಅಪರ ಜಿಲ್ಲಾಧಿಕಾರಿ ಡಾ| ಕೆ.ಆರ್‌.ದುರುಗೇಶ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ವಿವಿಧ ಯೋಜನೆಗಳ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಧಾನಮಂತ್ರಿ ಸ್ವನಿಧಿ ಯೋಜನೆಯು ನಗರ ಸ್ಥಳೀಯ ಸಂಸ್ಥೆಗಳಾದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಪಂ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳ ಉತ್ತೇಜನ ನೀಡುವ ಸಲುವಾಗಿ ಜಾರಿಗೊಳಿಸಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳಲ್ಲಿ ಗುರುತಿನ ಚೀಟಿ ಪಡೆದವರಿಗೆ ಸಾಲ ನೀಡಲು ಅಗತ್ಯ ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು.

ಡಿಜಿಟಲ್‌ ವಹಿವಾಟು ನಡೆಸುವ ವ್ಯಾಪಾರಿಗಳಿಗೆ ಪ್ರತಿ ತಿಂಗಳು 50ರಿಂದ 100 ರೂ. ವರೆಗೆ ಪ್ರೋತ್ಸಾಹಧನ ನೀಡಲಾಗುತ್ತಿದೆ. ಹೀಗಾಗಿ ಹೆಚ್ಚಿನ ಮಟ್ಟದಲ್ಲಿ ವ್ಯಾಪಾರಿಗಳಿಗೆ ಡಿಜಿಟಲ್‌ ವಹಿವಾಟು ಮಾಡುವಂತೆ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಅಲ್ಲದೇ ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ನೀಡುವುದರಲ್ಲಿ ಜಿಲ್ಲೆಗೆ ಉತ್ತಮ ಸ್ಥಾನ ಬರುವಂತೆ ಮಾಡಬೇಕು ಎಂದರು.

ಡೇ-ನಲ್ಮ್ ಯೋಜನೆಯಡಿ ನಗರದ ಬಡಜನರ ಜೀವನೋಪಾಯಕ್ಕಾಗಿ ಸಾಲ ಸೌಲಭ್ಯ ನೀಡಲಾಗುವುದು. ಫಲಾನುಭವಿಗಳು ಪದೇ ಪದೇ ಬ್ಯಾಂಕ್‌ಗಳಿಗೆ ಅಲೆದಾಡದಂತೆ ತ್ವರಿತವಾಗಿ ಸಾಲ ಮಂಜೂರು ಮಾಡಬೇಕು. ಬ್ಯಾಂಕ್‌ಗಳು ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ತ್ವರಿತವಾಗಿ ಸಾಲ ನೀಡಿದ್ದಲ್ಲಿ ನಿರುದ್ಯೋಗಿ ಯುವಸಮೂಹ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಸಹಕಾರಿ ಆಗಲಿದೆ ಎಂದರು.

ಬ್ಯಾಂಕ್‌ ಅಧಿಕಾರಿಗಳು ಸರ್ಕಾರದ ಯೋಜನೆಗಳ ಅನುಷ್ಠಾನದ ವೇಳೆ ಆಯ್ಕೆಯಾದ ಎಲ್ಲ ಅರ್ಹ ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಬೇಕು. ಇದರಿಂದ ಸರ್ಕಾರ ರೂಪಿಸುವ ಸಾಲ ಯೋಜನೆಗಳು ಯಶಸ್ವಿಯಾಗಲು ಸಾಧ್ಯ ಎಂದರು. ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ| ಸುರೇಂದ್ರ ಬಾಬು, ನಗರಸಭೆ ಪೌರಾಯುಕ್ತ ಗುರುಲಿಂಗಪ್ಪ, ಜಿಲ್ಲಾ ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ ಬಾಬು ಬಳಗಾನೂರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಅರುಣ್‌ ಕುಮಾರ್‌, ಡಿಡಿಪಿಐ ವೃಷಭೇಂದ್ರಯ್ಯ ಸ್ವಾಮಿ, ದೇವದುರ್ಗ ಪುರಸಭೆ ಮುಖ್ಯಾಧಿಕಾರಿ ಸಾಬಣ್ಣ ಕಟ್ಟಿಮನಿ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.