ಡಾ| ಅಂಬೇಡ್ಕರ್ ಚಿಂತನೆ ಪಾಲಿಸಿ: ಪ್ರೊ| ಹರೀಶ
Team Udayavani, Dec 9, 2021, 4:35 PM IST
ರಾಯಚೂರು: ಅಂಬೇಡ್ಕರ್ ಅವರನ್ನು ಸಂವಿಧಾನ ಶಿಲ್ಪಿ, ನಿಯಮಗಳ ಅನುಷ್ಠಾನಕಾರ, ಸಮಾನತೆಯ ಹರಿಕಾರ ಹೀಗೆ ಅನೇಕ ರೀತಿಯಲ್ಲಿ ಬಣ್ಣಿಸಲಾಗುತ್ತಿದೆ. ಅವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬದಲಾವಣೆ ಹೊಂದುವ ಅನಿವಾರ್ಯತೆ ಇದೆ ಎಂದು ರಾಯಚೂರು ವಿವಿ ಕುಲಪತಿ ಪ್ರೊ| ಹರೀಶ ರಾಮಸ್ವಾಮಿ ಅಭಿಪ್ರಾಯ ಪಟ್ಟರು.
ರಾಯಚೂರು ವಿಶ್ವವಿದ್ಯಾಲಯದಲ್ಲಿ ಡಾ| ಬಿ.ಅರ್.ಅಂಬೇಡ್ಕರ್‌ರ 65ನೇ ಪರಿನಿರ್ವಾಣ ನಿಮಿತ್ತ ಭಾವಚಿತ್ರಕ್ಕೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ಮಾತನಾಡಿ, ಅಂಬೇಡ್ಕರ್ ಬೋಧನೆಗಳು, ಸಂದೇಶಗಳನ್ನು ಯುವ ಸಮುದಾಯಕ್ಕೆ ತಲುಪಿಸುವ ನಿಟ್ಟಿನಲ್ಲಿ ಅಭ್ಯಸಿಸುವುದು, ಅವಲೋಕಿಸುವುದು, ವಿಮರ್ಶಿಸುವುದು ಅಗತ್ಯವಾಗಿದೆ. ಅವರ ವಿಚಾರ, ಸಮಾಜ ಸುಧಾರಣೆ, ಸಾಮಾಜಿಕ ಸಿದ್ಧಾಂತಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಜೊತೆಗೆ ಬದಲಾವಣೆ ಕಂಡುಕೊಳ್ಳಬೇಕಿದೆ ಎಂದರು.
ರಾಯಚೂರು ವಿವಿ ಕುಲಸಚಿವ ಪ್ರೊ| ವಿಶ್ವನಾಥ ಎಂ. ಮಾತನಾಡಿ, ಭಾರತರತ್ನ ಡಾ| ಭೀಮರಾವ್ ಅಂಬೇಡ್ಕರ್ ದೇಶದ ಸಂವಿಧಾನ ಶಿಲ್ಪಿ ಮಾತ್ರವಲ್ಲದೇ, ನ್ಯಾಯ ಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಸಮಾಜ ಸುಧಾರಕರಾಗಿ, ಅಸಮಾನತೆಯ ವಿರುದ್ಧ ದಿಟ್ಟತನದಿಂದ ಹೋರಾಡಿದ ದಿಟ್ಟ ವ್ಯಕ್ತಿ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತೆ ಮಾಡಿದ ಮೇರು ವ್ಯಕ್ತಿ ಎಂದು ಬಣ್ಣಿಸಿದರು.
ರಾಯಚೂರು ವಿವಿ ವಿತ್ತಾಧಿಕಾರಿ ಪ್ರೊ| ಪಾರ್ವತಿ ಸಿ.ಎಸ್., ಉಪಕರಣಾತ್ಮಕ ತಂತ್ರಜ್ಞಾನ ವಿಭಾಗ ಪ್ರಾಧ್ಯಾಪಕ ಪ್ರೊ| ಪಿ.ಭಾಸ್ಕರ್, ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರು ಪ್ರೊ| ನುಸ್ರತ್ ಫಾತೀಮಾ, ದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ವಾಸುದೇವ ಜೇವರ್ಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.