ಕುಡಿವ ನೀರು ನೀಡುವುದು ಪುಣ್ಯ ಕಾರ್ಯ
ಸಮಾಜಪರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸದಾ ತೊಡಗಬೇಕು.
Team Udayavani, Apr 20, 2021, 6:39 PM IST
ರಾಯಚೂರು: ಪ್ರತಿಯೊಂದು ಜೀವ ಸಂಕುಲಕ್ಕೂ ನೀರು ಜೀವಾಳವಿದ್ದಂತೆ. ನೀರನ್ನು ಕೊಡುವವರು ಸ್ವರ್ಗ ಸೇರುತ್ತಾರೆ ಎಂಬ ವಾಡಿಕೆ ಇದೆ. ವಿಶ್ವವಿದ್ಯಾಲಯದ ಜೀವಾಳ ಎತ್ತಿ ಹಿಡಿಯುವ ಒಂದು ಮಹತ್ತರ ಕಾರ್ಯ ಇಲ್ಲಿನ ಅರ್ಥಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಮಾಡಿದ್ದಾರೆ ಎಂದು ರಾಯಚೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಹರೀಶ ರಾಮಸ್ವಾಮಿ ಹರ್ಷ ವ್ಯಕ್ತಪಡಿಸಿದರು.
ರಾಯಚೂರು ವಿವಿ ಆವರಣದಲ್ಲಿ ಅರ್ಥಶಾಸ್ತ್ರ ವಿಭಾಗದ ಸ್ಥಾಪಿಸಿದ ಕುಡಿವ ನೀರಿನ ಅರವಟಿಗೆ ಚಾಲನೆ ನೀಡಿ ಮಾತನಾಡಿದರು. ರಾಯಚೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿಗಳು ಪಕ್ಷಿಗಳಿಗೆ ನೀರಿನ ದಾಹ ತೀರಿಸುವ ಮಹತ್ತರ ಕಾರ್ಯ ಮಾಡಿದ್ದರು. ಈಗ ಅರ್ಥಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಿಂದ ವಿವಿ ಆವರಣದಲ್ಲಿ ಶುದ್ಧ ಕುಡಿವ ನೀರಿನ ಅರವಟಿಗೆ ಸ್ಥಾಪಿಸಿರುವುದು ಉತ್ತಮ ಕಾರ್ಯ. ಕೇವಲ ಅಧ್ಯಯನವೊಂದೆ ಅಲ್ಲದೇ ಇಂಥ ಸಮಾಜಪರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸದಾ ತೊಡಗಬೇಕು. ಜಿಪಂ ಸಹಯೋಗದಲ್ಲಿ ಶುದ್ಧ ಕುಡಿವ ನೀರಿನ ವ್ಯವಸ್ಥೆ ಪಡೆಯುವ ನಿಟ್ಟಿನಲ್ಲಿ ವಿವಿ ಕೆಲಸ ಮಾಡುತ್ತಿದೆ ಎಂದರು.
ಕುಲಸಚಿವ ಪ್ರೊ| ವಿಶ್ವನಾಥ ಎಂ. ಮಾತನಾಡಿ, ಯಾವುದೇ ಕೆಲಸ ಆರಂಭಿಸುವುದು ಮುಖ್ಯವಲ್ಲ. ಅದನ್ನು ನಿರಂತರವಾಗಿ ನಡೆಸಿಕೊಂಡು ಹೋಗುವುದು ಮುಖ್ಯ. ಇಂದು ಶುರುವಾದ ಈ ಕಾರ್ಯ ಮುಂದೆಯೂ ನಡೆದುಕೊಂಡು ಹೋಗಬೇಕು. ಮುಂಬರುವ ವಿದ್ಯಾರ್ಥಿಗಳಿಗೆ ಇದು ಮಾದರಿಯಾಗಿರಲಿ. ಇದರ ಜತೆಗೆ ಬೇರೆ-ಬೇರೆ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತೊಡಗಬೇಕು ಎಂದರು. ಸ್ನಾತಕೋತ್ತರ ಕೇಂದ್ರದ ವಿಶೇಷಾಧಿಕಾರಿ ಪ್ರೊ| ಪಾರ್ವತಿ ಸಿ.ಎಸ್, ಪ್ರೊ| ನುಸ್ರತ್ ಫಾತೀಮಾ, ಪ್ರೊ| ಪಿ.ಭಾಸ್ಕರ್, ಡಾ| ಜಿ.ಎಸ್. ಬಿರಾದಾರ ಹಾಗೂ ವಿವಿಧ ವಿಭಾಗಗಳ ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Perth test: ಜೈಸ್ವಾಲ್-ರಾಹುಲ್ ಅಜೇಯ ಆಟ; ಪರ್ತ್ ನಲ್ಲಿ ಭಾರತದ ಮೇಲಾಟ
Mother: ಅಮ್ಮನ ಜೀವನವೇ ಆದರ್ಶ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.