ಎಂಎನ್‌ಪಿ ಕಾಲುವೆ ಆಧುನೀಕರಣಕ್ಕೆ ಚಾಲನೆ
Team Udayavani, Jun 7, 2022, 2:27 PM IST
ಮಸ್ಕಿ: ತಾಲೂಕಿನ ಮಾರಲದಿನ್ನಿ ಜಲಾಶಯದ ಎಂಎನ್‌ಪಿ ಕಾಲುವೆಗಳ ಆಧುನೀಕರಣಕ್ಕೆ ಶಾಸಕ ಆರ್.ಬಸನಗೌಡ ತುರುವಿಹಾಳ ಸೋಮವಾರ ಚಾಲನೆ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸ್ಕಿ ನಾಲಾ ಯೋಜನೆ ಜಲಾಶಯವು ಮಸ್ಕಿ ಭಾಗದ ರೈತರ ಪಾಲಿನ ಜೀವನಾಡಿಯಾಗಿದೆ. ಹಲವು ವರ್ಷಗಳಿಂದ ಇಲ್ಲಿನ ಕಾಲುವೆಗಳು ಆಧುನೀಕರಣ ಇಲ್ಲದೇ ಹಾಳಾಗಿದ್ದವು. ಅಚ್ಚುಕಟ್ಟು ಪ್ರದೇಶದ ಕೆಳಭಾಗಕ್ಕೆ ಸಮರ್ಪಕ ನೀರು ತಲುಪದಾಗಿದ್ದವು. ಹೀಗಾಗಿ ಕಾಲುವೆಗಳ ಆಧುನೀಕರಣಕ್ಕೆ 53 ಕೋಟಿ ರೂ. ಮಂಜೂರಾಗಿದ್ದು, ಇಲ್ಲಿನ ಮುಖ್ಯ ಮತ್ತು ವಿತರಣಾ ಕಾಲುವೆಗಳ ಆಧುನೀಕರಣದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ವರದಾನವಾಗಲಿದೆ ಎಂದರು.
ಯೋಜನೆಯ ಆಧುನೀಕರಣ ಕಾಮಗಾರಿ ಬಹಳ ದಿನಗಳಿಂದ ನನೆಗುದಿಗೆ ಬಿದ್ದಿತ್ತು. ಇದೀಗ ಈ ಭಾಗದ ರೈತರು ಬಹುದಿನದ ಬೇಡಿಕೆ ಈಡೇರಿದೆ. ಸಣ್ಣ ಜಲಾಶಯವಾದರೂ ಬಲ ಮತ್ತು ಎಡದಂಡೆ ಭಾಗದ ರೈತರ ಜಮೀನುಗಳಿಗೆ ಅನುಕೂಲವಾಗಿದೆ. ಯೋಜನೆ ವ್ಯಾಪ್ತಿಯ ರೈತರು ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸಹಕಾರ ನೀಡಿ ತಮ್ಮದೇ ಕಾಮಗಾರಿ ಎಂಬಂತೆ ಉತ್ತಮ ಕೆಲಸ ಮಾಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಗುತ್ತಿಗೆದಾರರ ಅಮರಗುಂಡಪ್ಪ ಮೇಟಿ, ಆದನಗೌಡ ದಳಪತಿ, ಸಿದ್ದನಗೌಡ ಮಾಟೂರು, ಶ್ರೀಶೈಲಪ್ಪ ಬ್ಯಾಳಿ, ಹನುಮಂತಪ್ಪ ಮುದ್ದಾಪೂರ, ಮೈಬೂಸಾಬ ಮುದ್ದಾಪೂರ, ಮಲ್ಲಪ್ಪ ನಾಗರಬೆಂಚಿ, ಬಸನಗೌಡ ಮಾರಲದಿನ್ನಿ, ಯೋಜನೆಯ ಎಇಇ ಗುರುಮೂರ್ತಿ, ಎಂಜನಿಯರ್ ದಾವುದ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.