ಬೇಸಿಗೆ ಮುನ್ನವೇ ಬರಿದಾಗುತ್ತಿದೆ ಕೃಷ್ಣೆ ಒಡಲು
Team Udayavani, Feb 8, 2019, 10:00 AM IST
ದೇವದುರ್ಗ: ದೇವದುರ್ಗ ಪಟ್ಟಣ ಸೇರಿ ತಾಲೂಕಿನ ಬಹುತೇಕ ಹಳ್ಳಿಗಳ ಜೀವನದಿಯಾದ ಕೃಷ್ಣೆಯ ಒಡಲು ಬೇಸಿಗೆ ಮುನ್ನವೇ ಬತ್ತುತ್ತಿದೆ. ಬೇಸಿಗೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಆತಂಕ ಕಾಡುತ್ತಿದೆ.
ಕಳೆದ ನಾಲ್ಕು ವರ್ಷಗಳಿಂದ ಸತತ ಬರ ಎದುರಿಸಿದ ತಾಲೂಕಿನಲ್ಲಿ ಅಂತರ್ಜಲ ಮಟ್ಟ ಕುಸಿದಿದೆ. ಕೃಷ್ಣಾ ಕಣಿವೆ ಪ್ರದೇಶದಲ್ಲಿ ವ್ಯಾಪಕ ಮಳೆ ಆಗಿದ್ದರಿಂದ ಆಲಮಟ್ಟಿ ಜಲಾಶಯ ಮತ್ತು ನಾರಾಯಣಪುರ ಜಲಾಶಯ ತುಂಬಿ ಕೃಷ್ಣಾ ನದಿಗೆ ನೀರು ಹರಿದಿತ್ತು. ಇದೀಗ ಬೇಸಿಗೆ ಆರಂಭಕ್ಕೂ ಮುನ್ನವೇ ಕೃಷ್ಣೆಯ ಒಡಲು ಬತ್ತುತ್ತಿದೆ. ಕೃಷ್ಣಾ ನದಿಯಲ್ಲಿ ಹಗಲು ರಾತ್ರಿ ಎನ್ನದೇ ಅಕ್ರಮ ಮರಳು ಸಾಗಣೆ ಮಾಡಿದ್ದೂ ಕೂಡ ನದಿಯಲ್ಲಿ ನೀರಿಲ್ಲದಂತಾಗಲು ಕಾರಣವಾಗುತ್ತಿದೆ. ಕುಡಿಯುವ ನೀರಿಗಾಗಿ ಕೃಷ್ಣೆಯನ್ನೇ ನೆಚ್ಚಿಕೊಂಡ ನದಿ ದಡದ ಗ್ರಾಮಗಳು ಮತ್ತು ದೇವದುರ್ಗ ಪಟ್ಟಣದಲ್ಲಿ ನೀರಿನ ಸಮಸ್ಯೆ ತಲೆದೋರಿದೆ. ಇನ್ನು ಬೇಸಿಗೆಯ ನಾಲ್ಕು ತಿಂಗಳನ್ನು ಹೇಗೆ ಕಳೆಯುವುದೆಂಬ ಆತಂಕ ಗ್ರಾಮಸ್ಥರು ಹಾಗೂ ಪಟ್ಟಣದ ನಿವಾಸಿಗಳನ್ನು ಕಾಡುತ್ತಿದೆ.
ಎರಡು ದಿನಕ್ಕೊಮ್ಮೆ ನೀರು: ತಾಲೂಕಿನ ಹೂವಿನಹೆಡಗಿ ಗ್ರಾಮದ ಬಳಿ ಹರಿದಿರುವ ಕೃಷ್ಣಾ ನದಿ ಬರಿದಾಗಿದೆ. ಅಲ್ಲಲ್ಲಿ ತಗ್ಗುಗಳಲ್ಲಿ ಅಲ್ಪಸ್ವಲ್ಫ ನೀರು ನಿಂತಿದ್ದು ಬಿಟ್ಟರೆ ನದಿ ಬಯಲಿನಂತೆ ಕಾಣುತ್ತಿದೆ. ಕೃಷ್ಣಾ ನದಿಯಿಂದ ನೀರು ಎತ್ತುವಳಿ ಮಾಡಿ ಗೂಗಲ್ ಗ್ರಾಮದಲ್ಲಿ ಸಂಗ್ರಹಿಸಿ ದೇವದುರ್ಗ ಪಟ್ಟಣದ 23 ವಾರ್ಡ್‌ಗಳಿಗೆ ನೀರು ಸರಬರಾಜು ಮಾಡಲಾಗುತ್ತಿದೆ. ಈಗ ನದಿ ಬತ್ತಿದ್ದರಿಂದ ಪುರಸಭೆ ಅಧಿಕಾರಿಗಳು ಎರಡು ದಿನಕ್ಕೊಮ್ಮೆ ಪಟ್ಟಣಕ್ಕೆ ನೀರು ಪೂರೈಸುವ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ರಾಜೀವ ಗಾಂಧಿ ಟೆಕ್ನಾಲಜಿ ಯೋಜನೆಯಡಿ ಚಿಕ್ಕಬೂದೂರು, ಸಲಿಕ್ಯಾಪುರು, ಜೇರಬಂಡಿ ಗ್ರಾಮಗಳಿಗೆ ನದಿ ನೀರು ಪೂರೈಸುವ ಯೋಜನೆ ಹಳ್ಳ ಹಿಡಿದಿದೆ. ಹೀಗಾಗಿ ಗ್ರಾಮಸ್ಥರು ಪ್ರತಿವರ್ಷ ಬೇಸಿಗೆಯಲ್ಲಿ ನೀರಿಗಾಗಿ ಪರದಾಡುವ ಸ್ಥಿತಿ ತಪ್ಪುತ್ತಿಲ್ಲ. ಈಗಾಗಲೇ ನೀರಿನ ಸಮಸ್ಯೆ ತೀವ್ರಗೊಂಡಿದೆ. ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ವಾರದ ಹಿಂದೆ ಗ್ರಾಮಸ್ಥರು ತಹಶೀಲ್ದಾರ್ ಕಚೇರಿ ಎದುರು ಹೋರಾಟ ನಡೆಸಿದ್ದರು. ಆದರೆ ಅಧಿಕಾರಿಗಳು ಎಚ್ಚೆತ್ತುಕೊಂಡು ನೀರು ಪೂರೈಕೆಗೆ ಮುಂದಾಗುತ್ತಿಲ್ಲ ಎಂದು ಗ್ರಾಮಸ್ಥ ಸಂಗಮೇಶ ಆರೋಪಿಸಿದ್ದಾರೆ.
ಕೊಳವೆಬಾವಿಗಳಲ್ಲೂ ನೀರಿಲ್ಲ: ಪಟ್ಟಣದ ಬಹುತೇಕ ವಾರ್ಡ್‌ಗಳಲ್ಲಿ ಕೈಪಂಪ್, ಕೊಳವೆಬಾವಿಗಳಿವೆ. ಆದರೆ ಅಂತರ್ಜಲ ಮಟ್ಟ ಕುಸಿದಿದ್ದರಿಂದ ಸಮರ್ಪಕವಾಗಿ ನೀರು ಬರುತ್ತಿಲ್ಲ. ದುರಸ್ತಿಗೀಡಾದ ಕೊಳವೆಬಾವಿಗಳ ದುರಸ್ತಿಗೆ ಪುರಸಭೆ ಮುಂದಾಗುತ್ತಿಲ್ಲ. ಪುರಸಭೆ ಈಗಲೇ ಎಚ್ಚೆತ್ತುಕೊಂಡು ಕೊಳವೆಬಾವಿಗಳ ದುರಸ್ತಿಗೆ ಮುಂದಾಗದಿದ್ದರೆ ಮುಂಬರುವ ದಿನಗಳಲ್ಲಿ ಪಟ್ಟಣದಲ್ಲಿ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆ ಇದೆ ಎನ್ನುತ್ತಾರೆ ಕರವೇ ಮುಖಂಡ ಎಚ್. ಶಿವರಾಜ.
ಬೇಸಿಗೆಯಲ್ಲಿ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಗಮನಹರಿಸಬೇಕು. ನೀರು ಪೂರೈಕೆಯಲ್ಲಿ ವ್ಯತ್ಯಯವಾದರೆ ಟ್ಯಾಂಕರ್ ಮೂಲಕ ವಾರ್ಡ್‌ಗಳಿಗೆ ನೀರು ಒದಗಿಸಬೇಕು.
•ಚಂದ್ರಶೇಖರ ಕುಂಬಾರ, ಪುರಸಭೆ ಸದಸ್ಯ
ಕುಡಿಯುವ ನೀರಿಗಾಗಿ ಅನುದಾನ ಬಿಡುಗಡೆ ಆಗಿದೆ. ದೊಡ್ಡಿಗಳಲ್ಲಿ ನೀರಿನ ಸಮಸ್ಯೆ ಪರಿಹರಿಸಲು ಹಾಗೂ 23 ವಾರ್ಡ್‌ಗಳಲ್ಲಿ ಬೇಸಿಗೆಯಲ್ಲಿ ಸಮರ್ಪಕ ನೀರು ಪೂರೈಕೆಗೆ ಅಧಿಕಾರಿಗಳು ಗಮನಹರಿಸಬೇಕು.
•ಜಿ.ಪಂಪಣ್ಣ ಪುರಸಭೆ ಸದಸ್ಯ
ಕೃಷ್ಣಾ ನದಿಯಲ್ಲಿ ತಗ್ಗು ತೋಡಿ ನೀರು ಸಂಗ್ರಹಿಸಿ ಎತ್ತುವಳಿ ಮಾಡಿ ಪಟ್ಟಣಕ್ಕೆ ಪೂರೈಸಲಾಗುತ್ತಿದೆ. ಬೇಸಿಗೆಯಲ್ಲಿ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಲು 30 ಲಕ್ಷ ಅನುದಾನ ಬಿಡುಗಡೆಯಾಗಿದೆ. ವೀರಘೋಟ ಗ್ರಾಮದಲ್ಲಿ ಇಷ್ಟಲಿಂಗ ಕಾರ್ಯಕ್ರಮ ಇರುವುದರಿಂದ ಕೃಷ್ಣಾ ನದಿಗೆ ನೀರು ಬಿಡುತ್ತಾರೆಂಬ ಮಾಹಿತಿ ಇದೆ. ಇದರಿಂದ ಸ್ವಲ್ಪ ಅನುಕೂಲವಾಗಲಿದೆ.
•ತಿಮ್ಮಪ್ಪ ಜಗಲಿ, ಪುರಸಭೆ ಮುಖ್ಯಾಧಿಕಾರಿ.
•ನಾಗರಾಜ ತೇಲ್ಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.