ಮಳೆ-ಗಾಳಿ ಆರ್ಭಟ: 25 ಕುರಿಗಳ ಸಾವು

ನೆಲಕ್ಕುರುಳಿದ ಮರ ; ಸಂಚಾರ ಅಸ್ತವ್ಯಸ್ತ- 25 ಮನೆಗಳಿಗೆ ಹಾನಿ

Team Udayavani, Jun 10, 2022, 4:56 PM IST

18

ಮಸ್ಕಿ: ತಾಲೂಕಿನಾದ್ಯಂತ ಜೋರಾದ ಗಾಳಿ, ಮಳೆ ಅಬ್ಬರಕ್ಕೆ ಮನೆಗಳು ನೆಲಕ್ಕೆ ಉರುಳಿದ್ದು, 25ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿವೆ. ಇನ್ನು ಕೆಲವೆಡೆ ಮರಗಳು ನೆಲಕ್ಕುರಳಿವೆ.

ರಸ್ತೆ ಬದಿಯ ಬೃಹತ್‌ ಗಾತ್ರದ ಮರಗಳು ನೆಲಕ್ಕುರುಳಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡು ಸವಾರರು ಹಾಗೂ ಪ್ರಯಾಣಿಕರು ಕೆಲಕಾಲ ಪರದಾಡಿದರು. ಕಳೆದ ಎರಡೂ¾ರು ದಿನಗಳಿಂದ ರಾತ್ರಿ ಬಿರುಗಾಳಿ-ಮಳೆ ಅರ್ಭಟಕ್ಕೆ ತಾಲೂಕಿನ ಅಂಕುಶದೊಡ್ಡಿ ಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್‌ ಗಾತ್ರದ ಆಲದ ಮರ ರಸ್ತೆಗೆ ಉರುಳಿದ್ದರಿಂದ ಕಲಬುರಗಿ-ಬೆಂಗಳೂರು ರಸ್ತೆ ಕೆಲ ಗಂಟೆಗಳ ಕಾಲ ಸಂಪರ್ಕ ಕಡಿತಗೊಂಡು ಸವಾರರು ಹಾಗೂ ಪ್ರಯಾಣಿಕರು ರಾತ್ರಿ ವೇಳೆಯಲ್ಲಿ ಪರದಾಡಿದ್ದಾರೆ.

ರಸ್ತೆ ಸಂಪರ್ಕ ಕಡಿತಗೊಂಡ ಸುದ್ದಿ ತಿಳಿದು ಸ್ಥಳೀಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಅಂಕುಶದೊಡ್ಡಿ ಗ್ರಾಮಸ್ಥರ ಜನರ ಸಹಕಾರದಿಂದ ರಸ್ತೆಗೆ ಉರುಳಿ ಬಿದ್ದಿದ್ದ ಮರ ತೆರವುಗೊಳಿಸಿದ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಕಾಟಗಲ್‌ ಗ್ರಾಮದಲ್ಲಿ ಗಾಳಿ, ಮಳೆ ಅರ್ಭಟಕ್ಕೆ ಮರಗಳು ಧರಗೆ ಉರುಳಿವೆ. ಮರದ ಕೆಳಗೆ ನಿಲ್ಲಿಸಿದ್ದ ಬೈಕ್‌ ಹಾನಿಯಾಗಿದೆ. ಕಾಟಗಲ್‌ ಗ್ರಾಮದ ಸರಕಾರಿ ಶಾಲೆ ಮೇಲೆ ಮರ ಉರುಳಿದ್ದರಿಂದ ಗೋಡೆ ಜಖಂಗೊಂಡಿದೆ. ವಿದ್ಯುತ್‌ ಕಂಬಗಳು ನೆಲಕ್ಕುರುಳಿವೆ. ಒಂದು ಟಿಸಿ ಹಾಳಾಗಿದ್ದು, ಜನತಾ ಮನೆಯ ಶೀಟುಗಳು ಗಾಳಿಗೆ ಹಾರಿ ಹೋಗಿವೆ. ತಗ್ಗು ಪ್ರದೇಶ ಹೊಲಗಳು ಸಂಪೂರ್ಣ ಜಲಾವೃತಗೊಂಡಿವೆ. ಕೆಲವು ಕಡೆಗಳಲ್ಲಿ ಮಳೆ ನೀರಿನ ರಭಸಕ್ಕೆ ರಸ್ತೆಗಳು ಕೊಚ್ಚಿಕೊಂಡು ಹೋಗಿವೆ. ಬಾರಿ ಗಾಳಿ ಬಿಸುತ್ತಿರುವುದರಿಂದ ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಸಂಪರ್ಕ ಕಡಿತಗೊಂಡ ಕಾರಣ ಜನರು ಕತ್ತಲಲ್ಲಿ ಕಾಲ ಕಳೆಯುವಂತಾಗಿದೆ. ಕೆಲವೆಡೆ ಜೆಸ್ಕಾಂ ಸಿಬ್ಬಂದಿ ದುರಸ್ತಿ ಮಾಡಿದರು.

ಇನ್ನು ಮಳೆ-ಗಾಳಿಯಿಂದಾಗಿ 25 ಮನೆಗಳು ಬಿದ್ದಿದ್ದು, 25ಕ್ಕೂ ಹೆಚ್ಚು ಕುರಿಗಳು ಸಾವನಪ್ಪಿವೆ. ಹಾನಿಗೊಳಗಾದ ಕುಟುಂಬಸ್ಥರಿಗೆ ಪರಿಹಾರ ನೀಡುವ ಕೆಲಸ ಮಾಡಲಾಗುತ್ತಿದೆ. ಇನ್ನು ಮಳೆಹಾನಿ ಕುರಿತಾಗಿ ಸಮೀಕ್ಷೆಯೂ ನಡೆದಿದೆ ಎಂದು ತಹಶೀಲ್ದಾರ್‌ ಕವಿತಾ ಆರ್‌.ತಿಳಿಸಿದ್ದಾರೆ.

ಟಾಪ್ ನ್ಯೂಸ್

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.