ವಿಮಾನ ನಿಲ್ದಾಣ ಭೂಮಿ ಪೂಜೆಗೆ ಗ್ರಹಣ
Team Udayavani, Jan 13, 2022, 5:48 PM IST
ರಾಯಚೂರು: ಜಿಲ್ಲೆಯ ಜನರಿಗೆ ಆಗಸದಲ್ಲಿ ಹಾರಾಡುವ ಕನಸು ತೋರಿಸಿದ ಸರ್ಕಾರ ಈಗ ಬರೀ ಮಾತಿನಲ್ಲೇ ವಿಮಾನ ಹಾರಿಸುತ್ತಿದೆಯಾ ಎಂಬ ಪ್ರಶ್ನೆ ಮೂಡಿದೆ.
ರಾಯಚೂರು ವಿಮಾನ ನಿಲ್ದಾಣ ಕಾಮಗಾರಿಗೆ ಈವರೆಗೂ ಶಂಕುಸ್ಥಾಪನೆ ನೆರವೇರದಿರುವುದು ಜಿಲ್ಲೆಯ ಜನರಲ್ಲಿ ಹಲವು ಅನುಮಾನಗಳಿಗೆ ಎಡೆ ಮಾಡಿದೆ. ಸಮೀಪದ ಏಗನೂರು ಹತ್ತಿರ 400 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಸರ್ಕಾರ ಬೇಕಾದ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಎರಡು ಜಿಲ್ಲೆಗಳಿಗೆ ಒಂದರಂತೆ ವಿಮಾನ ನಿಲ್ದಾಣ ನಿರ್ಮಿಸುವ ಗುರಿ ಹೊಂದಿದ್ದಾಗಿ ಹೇಳಿದ್ದ ಸರ್ಕಾರ, ಕಲಬುರಗಿ ಬಳಿಕ ರಾಯಚೂರಿನಲ್ಲಿ ಸ್ಥಾಪಿಸುವುದಾಗಿ ತಿಳಿಸಿತ್ತು. ಅದರಂತೆ ಈಗಾಗಲೇ ಸಾಕಷ್ಟು ಪೂರಕ ಬೆಳವಣಿಗೆಗಳು ನಡೆದಿದ್ದವು. ಸ್ಥಳ ಪರಿಶೀಲನೆ ನಡೆಸಿದ ಏರ್ ಪೋರ್ಟ್ ಅಥಾರಿಟಿ ಕೂಡ ಹಸಿರು ನಿಶಾನೆ ತೋರಿತ್ತು. ಇನ್ನೂ ಸರ್ವೇ ಕಾರ್ಯಗಳು ಮಾಡಲಾಗಿದ್ದು, ಗಡಿ ಗುರುತು ಕಾರ್ಯ ಬಹುತೇಕ ಮುಗಿದಿದೆ. ಆದರೆ, ಈವರೆಗೂ ಶಂಕುಸ್ಥಾಪನೆ ಕಾರ್ಯ ನಡೆದಿಲ್ಲ.
ಸೆ.17ರಂದು ಜಿಲ್ಲಾ ಉಸ್ತುವಾರಿ ಸಚಿವರಿಂದ ಭೂಮಿಪೂಜೆ ನೆರವೇರಿಸಲಾಗುವುದು ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ, ಅದಾಗಿ ನಾಲ್ಕು ತಿಂಗಳಾಗುತ್ತ ಬಂದರೂ ಈ ಬಗ್ಗೆ ಯಾವುದೇ ಬೆಳವಣಿಗೆ ಕಂಡು ಬರುತ್ತಿಲ್ಲ. ವಿಪರ್ಯಾಸ ಎಂದರೆ ಮಂಗಳವಾರ ಜಿಲ್ಲೆಗೆ ಭೇಟಿ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಕೂಡ ಈ ಬಗ್ಗೆ ಚಕಾರ ಎತ್ತಲಿಲ್ಲ. ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಮರ್ಪಕ ಉತ್ತರ ಕೂಡ ನೀಡದೆ ನುಣುಚಿಕೊಂಡ ಅವರು, ಶಾಸಕ ಕೆ.ಶಿವನಗೌಡ ನಾಯಕರಿಗೆ ಉತ್ತರಿಸುವಂತೆ ತಿಳಿಸಿದರು.
ಸರ್ಕಾರದಿಂದ ಬಂದಿಲ್ಲ ಹಣ
ಏಗನೂರು ಸಮೀಪ ಉದ್ದೇಶಿತ ವಿಮಾನ ನಿಲ್ದಾಣಕ್ಕೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ 48 ಕೋಟಿ ರೂ. ನೀಡಲಾಗಿದೆ. ಅದು ಬಿಟ್ಟರೆ ಸರ್ಕಾರದಿಂದ ಯಾವುದೇ ವಿಶೇಷ ಅನುದಾನ ಬಂದಿಲ್ಲ. ಆದರೆ, ಏರ್‌ಪೋರ್ಟ್ ನಿರ್ಮಾಣಕ್ಕೆ 200 ಕೋಟಿ ರೂ. ಬೇಕಾಗಬಹುದು ಎಂದು ಅಂದಾಜಿಸಿದ್ದು, ಹೆಚ್ಚುವರಿ ಹಣಕ್ಕಾಗಿ ಜಿಲ್ಲೆಯ ಜನಪ್ರತಿನಿಧಿಗಳು ಮತ್ತೊಂದು ಪ್ರಹಸನ ನಡೆಸಬೇಕಿದೆ ಎಂಬ ಮಾಹಿತಿಯನ್ನು ಶಾಸಕರೇ ಬಿಚ್ಚಿಟ್ಟಿದ್ದಾರೆ.
ಒತ್ತುವರಿ ತೆರವು ಸವಾಲು
ಉದ್ದೇಶಿತ ವಿಮಾನ ನಿಲ್ದಾಣಕ್ಕೆ ಮೀಸಲಿಟ್ಟಿದ್ದ ಸ್ಥಳವನ್ನು ಮತ್ತೊಮ್ಮೆ ಸರ್ವೇ ಮಾಡಿದ್ದು, ಸಾಕಷ್ಟು ಸ್ಥಳ ಒತ್ತುವರಿಯಾಗಿರುವ ಮಾಹಿತಿ ಲಭ್ಯವಾಗಿದೆ. ಅದರಲ್ಲಿ ಕೆಲವರು ಕೃಷಿ ಮಾಡಿಕೊಂಡಿದ್ದರೆ, ಕೆಲವರು ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಆ ಸ್ಥಳ ತೆರವುಗೊಳಿಸುವ ಸವಾಲು ಜಿಲ್ಲಾಡಳಿತದ ಮುಂದಿದೆ. ಅಲ್ಲದೇ, ಈಗಿರುವ ಸ್ಥಳವನ್ನು ಭದ್ರಪಡಿಸಿಕೊಳ್ಳುವ ನಿಟ್ಟಿನಲ್ಲಿ ಸುತ್ತಲೂ ತಡೆಗೋಡೆ ನಿರ್ಮಿಸಬೇಕಿದೆ. ಏಗನೂರು ಗ್ರಾಮಸ್ಥರು ನಮ್ಮ ಊರನ್ನು ಬೇರೆಡೆಗೆ ಸ್ಥಳಾಂತರಿಸಿ ಪುನರ್ವಸತಿ ಕಲ್ಪಿಸಬೇಕು ಎಂಬ ಬೇಡಿಕೆ ಒಡ್ಡಿದ್ದಾರೆ. ಹೀಗೆ ಅನೇಕ ಸವಾಲುಗಳು ಕೂಡ ಜಿಲ್ಲಾಡಳಿತದ ಮುಂದಿವೆ.
ರಾಯಚೂರು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ಕೆಕೆಆರ್‌ಡಿಬಿಯಿಂದ 48 ಕೋಟಿ ರೂ. ನೀಡಲಾಗಿದೆ. ಸಂಪೂರ್ಣ ಕಾಮಗಾರಿ ಮುಗಿಯಲು 200 ಕೋಟಿ ರೂ. ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಹೀಗಾಗಿ ಕೆಕೆಆರ್‌ಡಿಬಿಗೆ ಸರ್ಕಾರ ನೀಡುವ 1500 ಕೋಟಿಯಲ್ಲಿ ಮುಖ್ಯಮಂತ್ರಿಗಳ ವಿವೇಚನಾ ನಿಧಿ 75 ಲಭ್ಯವಾಗಲಿದೆ. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಸಿಎಂ ಅವರನ್ನು ಭೇಟಿಯಾಗಿ ಆ ಹಣ ಒದಗಿಸುವಂತೆ ಮನವೊಲಿಸಬೇಕಿದೆ. ಕೋವಿಡ್-19 ಕಾರಣಕ್ಕೆ ವಿಳಂವಾಗುತ್ತಿದೆ. ನಮಗೂ ಜಿಲ್ಲೆಯಲ್ಲಿ ವಿಮಾನ ಹಾರಿಸಬೇಕು ಎಂಬ ಆಸೆ ಇದೆ. -ಕೆ.ಶಿವನಗೌಡ ನಾಯಕ, ದೇವದುರ್ಗ ಶಾಸಕ
-ಸಿದ್ಧಯ್ಯಸ್ವಾಮಿ ಕುಕನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.