ಮಸ್ಕಿ ಕ್ಷೇತ್ರದಲ್ಲಿ ಪ್ರಚಾರ ಅಬ್ಬರ ಶುರು


Team Udayavani, Mar 23, 2021, 7:09 PM IST

jdghgdhngnh

ಮಸ್ಕಿ: ಉಪಚುನಾವಣೆ ಘೋಷಣೆ ಬಳಿಕ ಹಳ್ಳಿಗಳಲ್ಲಿ ಸದ್ದು-ಗದ್ದಲ ಜೋರಾಗಿದೆ. ಎಲ್ಲೆಂದರಲ್ಲಿ ಕಾರು-ಬಾರು, ರಾಜಕೀಯ ನಾಯಕರ ದಂಡೇ ಕಾಣಿಸುತ್ತಿದ್ದು, ಹಳ್ಳಿಗಳ ಸ್ವರೂಪವೇ ಈಗ ಬದಲಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ಅಖಾಡಕ್ಕೆ ಧುಮುಕಿದ್ದು, ಬಿರುಸಿನ ಪ್ರಚಾರ ನಡೆಸಿದ್ದಾರೆ.

ಮಸ್ಕಿ ಪಟ್ಟಣ ಸೇರಿ ಕ್ಷೇತ್ರದ 6 ಜಿಲ್ಲಾ ಪಂಚಾಯಿತಿ ವ್ಯಾಪ್ತಿಗಳಲ್ಲೂ ರಾಜಕೀಯ ನಾಯಕರು ಬಿಡುವಿಲ್ಲದೇ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಆರ್‌.ಬಸನಗೌಡ ತುರುವಿಹಾಳ, ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಸಂಚರಿಸುತ್ತಿದ್ದು, ಪರಸ್ಪರ ತಂತ್ರ, ಪ್ರತಿ ತಂತ್ರ ಎಣೆಯಲಾಗುತ್ತಿದೆ. ಒಗ್ಗಟ್ಟಿನ ಮಂತ್ರ: ಕಾಂಗ್ರೆಸ್‌ನಲ್ಲಿ ಹಳೆಯ ಎಲ್ಲ ಭಿನ್ನಮತಗಳನ್ನು ಬದಿಗೊತ್ತಿ ನಾಯಕರೆಲ್ಲರೂ ಒಂದುಗೂಡಿ ಪ್ರಚಾರ ನಡೆಸಿದ್ದಾರೆ. ಸಿಂಧನೂರು ಕಾಂಗ್ರೆಸ್‌ ನಲ್ಲಿ ಎರಡ್ಮೂರು ಬಣಗಳಾಗಿದ್ದವು.

ಆದರೆ ಈ ಎಲ್ಲ ಬಣಗಳು ಮಸ್ಕಿಯಲ್ಲಿ ಕಾಂಗ್ರೆಸ್‌ ಬಾವುಟ ಹಾರಿಸಲು ಒಗ್ಗಟ್ಟಾಗಿ ಹೋರಾಟ ನಡೆಸಿದ್ದಾರೆ. ಇಲ್ಲಿನ ಅಭ್ಯರ್ಥಿ ಆರ್‌.ಬಸನಗೌಡ ತುರುವಿಹಾಳಗೆ ಬೆಂಗಾವಲಾಗಿ ಕೆಲಸ ಮಾಡುತ್ತಿದ್ದಾರೆ. ವಿಶೇಷವಾಗಿ ಮಾಜಿ ಶಾಸಕ ಹಂಪನಗೌಡ ಬಾದರ್ಲಿ, ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಬಸನಗೌಡ ಬಾದರ್ಲಿ ನಡುವೆ ಭಿನ್ನಾಭಿಪ್ರಾಯಗಳಿದ್ದವು. ಮುಖಂಡ ಕೆ.ಕರಿಯಪ್ಪ ಕೂಡ ಹಂಪನಗೌಡ ಬಾದರ್ಲಿ ಜತೆ ಅಂತರ ಕಾಪಾಡಿಕೊಂಡಿದ್ದರು.

ಆದರೆ ಈಗ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಿದ ಬೆನ್ನಲ್ಲೇ ಈ ನಾಯಕರೆಲ್ಲ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ಧಾರೆ. ಮಸ್ಕಿ ಕ್ಷೇತ್ರದ ಎಲ್ಲ ಹಳ್ಳಿಗಳಲ್ಲೂ ಒಟ್ಟುಗೂಡಿ ಪ್ರಚಾರ ನಡೆಸಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡುತ್ತಿದ್ದಾರೆ. ಬಿಜೆಪಿಯಲ್ಲೂ ಸಂಚಲನ: ಇನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮತ್ತು ಸಚಿವ ದಂಡು ಮಸ್ಕಿಗೆ ಆಗಮಿಸಿ ಶಕ್ತಿ ಪ್ರದರ್ಶನ ನಡೆಸಿದ ಬಳಿಕ ಬಿಜೆಪಿಗೆ ಚೈತನ್ಯ ಬಂದಿದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಂಚಾರ ಕಾರ್ಯಕರ್ತರಲ್ಲಿ ಸಂಚಲನ ಉಂಟು ಮಾಡಿದೆ.

ಇದೇ ಜೋಶ್‌ನಲ್ಲಿ ಈಗ ಹಳ್ಳಿ-ಹಳ್ಳಿಗಳಲ್ಲೂ ಸುತ್ತಾಟ ನಡೆದಿದೆ. ಜಾತಿ-ಮತ ಲೆಕ್ಕಚಾರದಲ್ಲಿ ಚುನಾಯಿತರ ಪ್ರತಿನಿಧಿ ಗಳನ್ನು ಮುಂದೆ ಬಿಟ್ಟು ವೋಟ್‌ಗಳಿಕೆ ಯತ್ನ ನಡೆದಿದೆ. ಇನ್ನು ಮದುವೆಯಂತಹ ಖಾಸಗಿ ಕಾರ್ಯಕ್ರಮಗಳಿಗೂ ತೆರಳಿ ಮತಯಾಚನೆ ಮಾಡುವಂತಹ ಸನ್ನಿವೇಶಗಳು ಕಂಡು ಬರುತ್ತಿವೆ. „ಯಮನಪ್ಪ ಪವಾರ ಸಿಂಧನೂರು: ಜಿದ್ದಾಜಿದ್ದಿ ಕಣವಾಗಿ ಮಾರ್ಪಟ್ಟಿರುವ ಮಸ್ಕಿ ಉಪಚುನಾವಣೆ ಅಖಾಡ ಕಳೆದೆರಡು ದಿನಗಳಿಂದ ಭಾವನಾತ್ಮಕ ತಿರುವು ಪಡೆದುಕೊಂಡಿದೆ. ಕ್ಷೇತ್ರದ ಜನರೇ ಕಾಂಗ್ರೆಸ್‌ ಅಭ್ಯರ್ಥಿ ಆರ್‌.ಬಸನಗೌಡರ ಉಡಿಗೆ ದೇಣಿಗೆಯ ಮೊತ್ತ ಹಾಕುವುದರ ಮೂಲಕ ಧೈರ್ಯ ಹೇಳುತ್ತಿರುವ ಪರಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಆಡಳಿತಾರೂಢ ಪಕ್ಷದ ಅಭ್ಯರ್ಥಿ ಪ್ರತಾಪ್‌ಗೌಡ ಪಾಟೀಲರ ಪರವಾಗಿ ಮುಖ್ಯಮಂತ್ರಿಗಳು ಸೇರಿದಂತೆ ಸಚಿವರು, ಸಿಎಂ ಪುತ್ರ ಬೆನ್ನಿಗೆ ನಿಂತ ಬೆನ್ನಲ್ಲೇ ಕಾಂಗ್ರೆಸ್‌ ಪರವಾಗಿ ಸಾರ್ವಜನಿಕ ಅಭಿಪ್ರಾಯ ಬಲಗೊಳಿಸುವ ಭಾಗವಾಗಿ ದೇಣಿಗೆ ಹಾದಿ ತುಳಿಯಲಾಗಿದೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ಬಿಜೆಪಿಯಿಂದ ಸ್ಪರ್ಧಿಸಿದ್ದ ಆರ್‌.ಬಸನಗೌಡ ತುರುವಿಹಾಳ ಅವರು ಕೇವಲ 213 ಮತಗಳ ಅಂತರದಿಂದ ಪರಾಭವಗೊಂಡಿದ್ದರು.

ಇದೀಗ ಅಂದು ಪ್ರತಿಸ್ಪರ್ಧಿಯಾಗಿದ್ದ ವ್ಯಕ್ತಿ, ಪಕ್ಷದ ವಿರುದ್ಧವೇ ಅಖಾಡಕ್ಕಿಳಿದಿರುವ ಆರ್‌. ಬಸನಗೌಡರು ಪ್ರತಿಪಕ್ಷ ಕಾಂಗ್ರೆಸ್‌ನಿಂದ ಹುರಿಯಾಳಾಗಿರುವ ಹಿನ್ನೆಲೆಯಲ್ಲಿ ಆರ್ಥಿಕ ಸಂಪನ್ಮೂಲ ಕ್ರೂಡೀಕರಣಕ್ಕೆ ಜನರ ಬಳಿಗೆ ಧಾವಿಸಿದ್ದಾರೆ.

ಈ ನಡುವೆ ಆರ್‌.ಬಸನಗೌಡ ತುರುವಿಹಾಳ ಹಾಗೂ ಆರ್‌.ಸಿದ್ದನಗೌಡ ತುರುವಿಹಾಳ ಅವರು ಉಪಸ್ಥಿತರಾಗುವ ಪ್ರಚಾರ ಕಾರ್ಯಕ್ರಮಗಳೆಲ್ಲ ಬಹುತೇಕ “ಬಾವುಕ’ ತಿರುವು ಪಡೆದುಕೊಳ್ಳುತ್ತಿವೆ. ರೈತ ಕುಟುಂಬದ ಹಿನ್ನೆಲೆ ಹೊಂದಿರುವ ನಾವು ಕೋಟ್ಯಂತರ ರೂ. ಹಣ ವ್ಯಯಿಸುವ ಶಕ್ತಿಯುಳ್ಳವರಲ್ಲ ಎಂಬ ಸಂದೇಶ ರವಾನಿಸುವ ಮೂಲಕ ಜನರನ್ನೇ ಶಕ್ತಿಯೆಂದು ತೋರಿಸುವ ಪ್ರಯತ್ನಗಳನ್ನು ಮುಂದುವರಿಸಲಾಗುತ್ತಿದೆ.

ಗ್ರಾಮಸ್ಥರಿಂದಲೇ 50 ಸಾವಿರ ರೂ.!: ಸ್ವಾರಸ್ಯ ಎಂದರೆ, ಪ್ರಚಾರಕ್ಕೆ ಹೋದ ಸಂದರ್ಭದಲ್ಲಿ ಆಯಾ ಗ್ರಾಮಸ್ಥರೇ ಚುನಾವಣೆ ಖರ್ಚಿಗೆ ಎಂದು 50 ಸಾವಿರ ರೂ. ಮೊತ್ತವನ್ನು ನೀಡುವ ಮೂಲಕ ಧೈರ್ಯ ಹೇಳುತ್ತಿರುವ ಬೆಳವಣಿಗೆ ಕುತೂಹಲ ಮೂಡಿಸಿವೆ. ಕೋಳಬಾಳ, ಕಣ್ಣೂರು ಗ್ರಾಮದಲ್ಲಿ ಸೋಮವಾರ ತಲಾ 50 ಸಾವಿರ ರೂ. ದೇಣಿಗೆಯನ್ನು ಆರ್‌.ಬಸನಗೌಡರ ಉಡಿಗೆ ಗ್ರಾಮಸ್ಥರು ಹಾಕಿದ್ದಾರೆ. ಅಚ್ಚರಿ ಎಂದರೆ, ಈ ಬೆಳವಣಿಗೆಗೆ ಸಾಕ್ಷಿಯಾಗಿರುವ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಅವರೇ, ದೇಣಿಗೆ ನೀಡಿದ ಜನರಿಗೆ ಮಾತನಾಡಲು ಪ್ರೋತ್ಸಾಹಿಸಿದ್ದಾರೆ.

ನಿಮ್ಮ ಮನಸ್ಸಿನಲ್ಲಿರುವುದನ್ನು ಹೇಳಿ, ನೀವು ಏನು ಬೇಕಾದರೂ ಹೇಳಿ? ಎನ್ನುವ ಮೂಲಕ ಜನರಿಗೆ ಅಭಿಪ್ರಾಯ ವ್ಯಕ್ತಪಡಿಸಲು ಹುರಿದುಂಬಿಸಿದ್ದಾರೆ. ಜತೆಗೆ, ಬಸನಗೌಡರ ಪರವಾಗಿ ಭರ್ಜರಿ ಬ್ಯಾಟಿಂಗ್‌ ಆರಂಭಿಸಿರುವ ಹಂಪನಗೌಡರು, ಈ ಬಾರಿ ರಾಜ್ಯ ಸರಕಾರವೇ ಪ್ರತಿಸ್ಪರ್ಧಿಯಾಗಿ ನಿಂತರೂ ಕಾಂಗ್ರೆಸ್‌ ಅಭ್ಯರ್ಥಿ ಪರವಾಗಿ ರಣತಂತ್ರ ರೂಪಿಸುವುದರಲ್ಲಿ ಒಂದು ಹೆಜ್ಜೆ ಮುಂದಿಟ್ಟಿದ್ದಾರೆ. ಸಹಜವಾಗಿಯೇ ಸ್ಥಳೀಯ ಮಟ್ಟದಲ್ಲಿ ಮಾಜಿ ಶಾಸಕರ ಪ್ರಯತ್ನ ಕಾರ್ಯಕರ್ತರಲ್ಲಿ ಹೊಸ ಹುಮ್ಮುಸ್ಸು ಮೂಡಿಸಿದೆ. ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಮಂತ್ರ: ಸ್ವತಃ ಸಿಎಂ ಯಡಿಯೂರಪ್ಪ ಅವರೇ ಕ್ಷೇತ್ರದಲ್ಲಿ ಪ್ರಚಾರ ನಡೆಸಿ, ಮಸ್ಕಿ ಉಸ್ತುವಾರಿಯನ್ನು ತಮ್ಮ ಸುಪತ್ರ ಬಿ.ವೈ. ವಿಜಯೇಂದ್ರಗೆ ನೀಡಿ ಹೋದ ಬಳಿಕ ಕಾಂಗ್ರೆಸ್‌ ಪಾಳಯ ತುಸು ಹೆಚ್ಚಿನ ಸಕ್ರಿಯತೆಯಲ್ಲಿ ತೊಡಗಿದೆ. ಈಗಾಗಲೇ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಕೆ.ಕರಿಯಪ್ಪ ಪ್ರತಿ ಹಳ್ಳಿಗೂ ಕಾಲಿಟ್ಟು ತಮ್ಮ ಸಮುದಾಯ ಸೇರಿದಂತೆ ಬೆಂಬಲಿಗರನ್ನು ಕಾಂಗ್ರೆಸ್‌ ಪರ ಕೆಲಸ ಮಾಡುವುದಕ್ಕೆ ಕಟ್ಟಿಹಾಕಲು ಯತ್ನಿಸಿದ್ದಾರೆ.

ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ ಸಹ ಅಖಾಡಕ್ಕೆ ಇಳಿದು ತಮ್ಮ ನೆಟ್‌ ವರ್ಕ್‌ ಬಳಸಿ, ಕಾಂಗ್ರೆಸ್‌ ಅಭ್ಯರ್ಥಿಯ ಪರ ಪ್ರಚಾರ ಚುರುಕುಗೊಳಿಸಿದ್ದಾರೆ. ಸಿಂಧನೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ತ್ರಿಮೂರ್ತಿಗಳು ಕಾಂಗ್ರೆಸ್‌ ಪರ ಭಾರಿ ಕಸರತ್ತು ಆರಂಭಿಸಿದ್ದು, ಅವಿಭಜಿತ ಮಸ್ಕಿ ಕ್ಷೇತ್ರದಲ್ಲಿ ಸಿಂಧನೂರಿನ ಛಾಪು ಮೂಡಿಸುವ ಪ್ರಯತ್ನ ಆರಂಭಿಸಿದ್ದಾರೆ. ರಾಜ್ಯ ನಾಯಕರ ಮೊರೆ: ಇಡೀ ರಾಜ್ಯ ಸರಕಾರವೇ ಬಿಜೆಪಿ ಅಭ್ಯರ್ಥಿಯ ಪರ ಪ್ರಚಾರಕ್ಕೆ ಬಿಡಾರ ಹೂಡುವ ಮುನ್ಸೂಚನೆ ಅರಿತಿರುವ ಕಾಂಗ್ರೆಸ್‌ನವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವುಕುಮಾರ್‌, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್‌ ಜಾರಕಿಹೊಳಿ, ಈಶ್ವರ ಖಂಡ್ರೆ ಸೇರಿದಂತೆ ಇತರರ ಮೊರೆ ಹೋಗಿದ್ದಾರೆ. ಸ್ಥಳೀಯವಾಗಿ ಬೀಡುಬಿಟ್ಟು ಪಕ್ಷದ ಅಭ್ಯರ್ಥಿಗೆ ಬಲ ನೀಡುವಂತೆ ಕೇಳಿಕೊಂಡಿದ್ದಾರೆ. ಉಪಚುನಾವಣೆಗಳಲ್ಲಿ ಬಹುತೇಕ ಕಡೆ ಬಿಜೆಪಿಯೇ ಜಯಬೇರಿ ಬಾರಿಸಿರುವ ಇತಿಹಾಸವನ್ನು ಮುರಿಯಲು ಮಸ್ಕಿ ಅಖಾಡವನ್ನು ಬಳಸಿಕೊಳ್ಳುವ ತಂತ್ರ ಕಾಂಗ್ರೆಸ್‌ ಪಾಳಯದಲ್ಲಿ ಚುರುಕು ಪಡೆದಿದೆ.

ಟಾಪ್ ನ್ಯೂಸ್

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: I am confident of getting another opportunity to lead the party: BY Vijayendra

Raichur: ಪಕ್ಷ ಮುನ್ನಡೆಸಲು ಮತ್ತೊಮ್ಮೆ ಅವಕಾಶ ಸಿಗುವ ವಿಶ್ವಾಸವಿದೆ: ಬಿವೈ ವಿಜಯೇಂದ್ರ

Maha Kumbh 2025: Once a Raichur DC, now a monk!

Maha Kumbh 2025: ಒಂದು ಕಾಲದಲ್ಲಿ ರಾಯಚೂರು ಡಿಸಿ.. ಈಗ ಸನ್ಯಾಸಿ!

Raichur: ಕಾಂಗ್ರೆಸ್ ಸರ್ಕಾರ ಮುಸ್ಲಿಮರ ನಿಯಂತ್ರಣದಲ್ಲಿದೆ: ಚಕ್ರವರ್ತಿ ಸೂಲಿಬೆಲೆ ಕಿಡಿ

Raichur: ಕಾಂಗ್ರೆಸ್ ಸರ್ಕಾರ ಬಂದಿರುವುದೇ ಅಲ್ಲಾಹುವಿನ ಕೃಪೆಯಿಂದ… ಚಕ್ರವರ್ತಿ ಸೂಲಿಬೆಲೆ

k-s-eshwar

Raichur: ಹಸುಗಳ ಕೆಚ್ಚಲು ಕೊಚ್ಚಲು ಕಾಂಗ್ರೆಸ್ ಸರ್ಕಾರವೇ ಪ್ರೇರಣೆ: ಕೆಎಸ್‌ ಈಶ್ವರಪ್ಪ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

POlice

Puttur: ಅನಾಥ ಸ್ಥಿತಿಯಲ್ಲಿ ಎರಡು ಬೈಕ್‌; ವಶಕ್ಕೆ ಪಡೆದುಕೊಂಡ ಪೊಲೀಸರು

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.