ವೇತನ ಪಾವತಿಗೆ ಪೌರ ಸೇವಾ ನೌಕರರ ಆಗ್ರಹ
Team Udayavani, May 16, 2020, 7:03 AM IST
ರಾಯಚೂರು: ನಗರಸಭೆ ವಾಹನ ಚಾಲಕರು, ನೀರಿನ ವಿಭಾಗದ ಗುತ್ತಿಗೆ ಕಾರ್ಮಿಕರಿಗೆ 10 ತಿಂಗಳ ವೇತನ ಪಾವತಿಸಬೇಕು ಮತ್ತು ಗುತ್ತಿಗೆದಾರ ನರಸಪ್ಪ ಅವರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಿನಗೂಲಿ ಮತ್ತು ಗುತ್ತಿಗೆ ಪೌರ ಸೇವಾ ನೌಕರರ ಸಂಘದ ಸದಸ್ಯರು ಒತ್ತಾಯಿಸಿದರು.
ಈ ಕುರಿತು ಡಿಸಿ ಕಚೇರಿ ಕಚೇರಿ ಅಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಿ, ಗುತ್ತಿಗೆ ಕಾರ್ಮಿಕರಿಗೆ ಹಲವು ತಿಂಗಳಿಂದ ವೇತನ ನೀಡಿಲ್ಲ. ವಾಹನ ಚಾಲಕರಿಗೆ ಕಳೆದ ಡಿಸೆಂಬರ್‌ನಿಂದ ಈವರೆಗೂ ವೇತನ ಪಾವತಿಸಿಲ್ಲ. ಗುತ್ತಿಗೆದಾರ ನರಸಪ್ಪ 2019ರಲ್ಲಿ ಏಳು ತಿಂಗಳ ಪಿಎಫ್, ಇಎಸ್‌ಐ ಹಣ ಪಾವತಿಸದ ಕಾರಣ ವೇತನ ನೀಡಲು ಬರುವುದಿಲ್ಲ ಎಂದನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ. ಇದರಿಂದ ಕಾರ್ಮಿಕರು ಸಂಕಷ್ಟ ಎದುರಿಸುವಂತಾಗಿದೆ ಎಂದು ದೂರಿದರು.
ದೇವಸೂಗುರು, ಯರಮರಸ್ ನೀರಿನ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಹತ್ತು ತಿಂಗಳ ವೇತನ ಪಾವತಿಸಿಲ್ಲ. ವೇತನ ಪಾವತಿಸಲು ವಿಳಂಬಕ್ಕೆ ನಗರಸಭೆ ನಿರ್ಲಕ್ಷ್ಯವೇ ಕಾರಣ. ಕೂಡಲೇ ಬಾಕಿ ವೇತನ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಂಘದ ರಾಜ್ಯಾಧ್ಯಕ್ಷ ಎಸ್. ಮಾರೆಪ್ಪ ವಕೀಲರು, ಉರುಕುಂದಪ್ಪ, ಹಸನ್, ಯಲ್ಲಪ್ಪ, ಶಿವಾನಂದ, ನರೇಶ್ ಸೇರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.