ನೂತನ ಪಿಂಚಣಿ ಯೋಜನೆ ರದ್ದತಿಗೆ ನೌಕರರ ಒಕ್ಕೂಟ ಆಗ್ರಹ
Team Udayavani, May 29, 2022, 2:26 PM IST
ರಾಯಚೂರು: ನೂತನ ಪಿಂಚಣಿ ಯೋಜನೆ ರದ್ದುಪಡಿಸಿ, ನಿಶ್ಚಿತ ಪಿಂಚಣಿ ಮರುಸ್ಥಾಪಿಸಬೇಕು ಎಂದು ಅಖೀಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಆಗ್ರಹಿಸಿದರು.
ಈ ಬಗ್ಗೆ ಜಿಲ್ಲಾಧಿಕಾರಿ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು. ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಬೇಕು. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯಲು ಅನುವಾಗುವಂತೆ ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ 2.80 ಲಕ್ಷ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.
ಆಡಳಿತ ಸುಧಾರಣಾ ಆಯೋಗ-2ರ ನೌಕರ ವಿರೋಧಿ ಶಿಫಾರಸ್ಸುಗಳನ್ನು ತಿರಸ್ಕರಿಸಬೇಕು ಹಾಗೂ ಗುತ್ತಿಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಸಮಾನ ವೇತನ ನೀಡಿ, ನೇರ ನೇಮಕಾತಿಯಲ್ಲಿ ಅವರಿಗೆ ನಿಯಮಾನುಸಾರ ಆದ್ಯತೆ ಕಲಿಸಬೇಕು ಎಂದು ಆಗ್ರಹಿಸಿದರು.
ಸಾರ್ವಜನಿಕ ಉದ್ಯಮಗಳ ಖಾಸಗೀಕರಣ ಕೈಬಿಡಬೇಕು. ಬೆಲೆ ಏರಿಕೆ ನಿಯಂತ್ರಿಸಬೇಕು ಹಾಗೂ ಕೋಮು ಸಾಮರಸ್ಯ ಕಾಪಾಡಬೇಕು ಎಂದು ಒತ್ತಾಯಿಸಿದರು. ಒಕ್ಕೂಟದ ಜಿಲ್ಲಾಧ್ಯಕ್ಷ ತಾಯಪ್ಪ ಮರ್ಚೆಟಾಳ್, ಪದಾಧಿಕಾರಿಗಳಾದ ಅಮರೇಶಪ್ಪ, ನಾರಾಯಣ, ಮೋಹಿನುದ್ದೀನ್ ಹಾಗೂ ಮಹಿಳಾ ನೌಕರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.