![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 19, 2019, 1:43 PM IST
ರಾಯಚೂರು: ಇಲ್ಲಿನ ನವೋದಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಮಧು ಪತ್ತಾರ ಅನುಮನಾಸ್ಪದ ಸಾವಿನ ಪ್ರಕರಣದ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ರಾಯಚೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳು ಮತ್ತು ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ. ಇದೀಗ ಈ ಪ್ರಕರಣ ರಾಜ್ಯವ್ಯಾಪಿಯಾಗುತ್ತಿದ್ದು ಸಮಾಜಿಕ ಜಾಲತಾಣಗಳಲ್ಲಿ #Justice_for_Madhu ಎಂಬ ಹ್ಯಾಷ್ ಟ್ಯಾಗ್ ನೊಂದಿಗೆ ಯುವತಿಯ ಸಾವಿಗೆ ನ್ಯಾಯ ಒದಗಿಸಬೇಕೆಂದು ಅಭಿಯಾನ ಪ್ರಾರಂಭವಾಗಿದೆ.
ಮಧು ಮೃತದೇಹ ಸೋಮವಾರದಂದು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೃತದೇಹದ ಪಕ್ಕ ಡೆತ್ ನೋಟ್ ಸಿಕ್ಕಿದ್ದು ಅದರಲ್ಲಿ , ಪರೀಕ್ಷೆಯಲ್ಲಿ ಪದೇ ಪದೇ ಫೇಲ್ ಆಗುತ್ತಿರುವ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಯುವತಿ ಬರೆದಿದ್ದಾಳೆ ಎಂದು ಪೊಲೀಸರು ಹೇಳುತ್ತಿದ್ದಾರೆ.
ಆದರೆ ಯುವತಿಯ ಹೆತ್ತವರು ಇದನ್ನು ಆತ್ಮಹತ್ಯೆ ಎಂದು ಒಪ್ಪಿಕೊಳ್ಳಲು ಸಿದ್ಧರಿಲ್ಲ. ತಮ್ಮ ಮಗಳನ್ನು ಯಾರೋ ಕೊಲೆ ಮಾಡಿರಬೇಕೆಂದು ಅವರು ಹೇಳುತ್ತಿದ್ದಾರೆ. ಮತ್ತು ತಮ್ಮ ಮಗಳ ಸಾವಿಗೆ ನ್ಯಾಯ ಒದಗಿಸಿಕೊಡುವಂತೆ ಮೃತ ಯುವತಿಯ ಹೆತ್ತವರು ಇದೀಗ ಕಾನೂನು ವ್ಯವಸ್ಥೆ ಮತ್ತು ಸರಕಾರದ ಮೊರೆ ಹೋಗಿದ್ದಾರೆ.
ಶನಿವಾರ ಬೆಳಿಗ್ಗೆ ಮನೆಯಿಂದ ತೆರಳಿದ್ದ ವಿದ್ಯಾರ್ಥಿನಿ ಮತ್ತೆ ಮನೆಗೆ ವಾಪಾಸು ಬಂದಿರಲಿಲ್ಲ. ಬಳಿಕ ಆಕೆಯ ಹೆತ್ತವರು ನೇತಾಜಿ ನಗರ ಠಾಣೆಯಲ್ಲಿ ನಾಪತ್ತೆ ಪ್ರಕರಣವನ್ನು ದಾಖಲಿಸಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದರ್ಶನ್ ಯಾದವ್ ಎಂಬ ಯುವಕನನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಆತನ ವಿಚಾರಣೆಯನ್ನು ನಡೆಸುತ್ತಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.