ಬಿಎಸ್ಪಿಯಿಂದ ಸಮಾನ ಅವಕಾಶ: ಶ್ಯಾಮಸುಂದರ
Team Udayavani, Jan 16, 2018, 3:27 PM IST
ಮಾನ್ವಿ: ಸರ್ವರಿಗೂ ಸಮಾನ ಅವಕಾಶ ನೀಡಬಲ್ಲ ಪವಿತ್ರವಾದ ಪ್ರಜಾಪ್ರಭುತ್ವ ಜಾರಿಗೆ ತರಲು ಬಿಎಸ್‌ಪಿ ಪಕ್ಷದಿಂದ ಮಾತ್ರ ಸಾಧ್ಯ ಎಂದು ಬಿಎಸ್‌ಪಿ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಶ್ಯಾಮಸುಂದರ ಕುಂಬ್ದಾಳ ಹೇಳಿದರು.
ಬಹುಜನ ಸಮಾಜ ಪಕ್ಷ ತಾಲೂಕು ಘಟಕದಿಂದ ಸೋಮವಾರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಬಿಎಸ್‌ಪಿ ರಾಷ್ಟ್ರಾಧ್ಯಕ್ಷೆ ಮಾಯಾವತಿ ಅವರ ಜನ್ಮದಿನ ನಿಮಿತ್ತ ಕೇಕ್ ಕತ್ತರಿಸಿ ಅವರು ಮಾತನಾಡಿದರು. ಸುಮಾರು 50 ವರ್ಷಗಳಿಗೂ ಹೆಚ್ಚುಕಾಲ ಈ ದೇಶವನ್ನಾಳಿದ ಕಾಂಗ್ರೆಸ್ ಜನರಿಗೆ ಉತ್ತಮ ಶಿಕ್ಷಣ, ಉದ್ಯೋಗ, ಭೂಮಿ ಹಾಗೂ ಬಂಡವಾಳಗಳನ್ನು ಒದಗಿಸುವ ಯೋಜನೆ ಬಿಟ್ಟು ಅನ್ನಭಾಗ್ಯ, ಕ್ಷೀರಭಾಗ್ಯ, ತಾಳಿಭಾಗ್ಯದಂತಹ ಚಾರಿಟಿ
ಯೋಜನೆಗಳನ್ನು ಜಾರಿ ಮಾಡಿ ದೇಶದಲ್ಲಿ ಬಹುಸಂಖ್ಯಾತರನ್ನು ದೈನೇಸಿಗಳನ್ನಾಗಿ ಮಾಡುತ್ತಿದೆ. ಇನ್ನು ಬಿಜೆಪಿ ಸರ್ಕಾರ ಬಡತನ, ನಿರುದ್ಯೋಗ, ಅಪೌಷ್ಟಿಕತೆಯಂತಹ ಜ್ವಲಂತ ಸಮಸ್ಯೆಗಳನ್ನು ನಿರ್ಲಕ್ಷಿಸಿ ಜಾತಿ-ಜಾತಿಗಳ ಮಧ್ಯೆ ಜಗಳ ಹಚ್ಚಿ ಕೋಮುಗಲಭೆಗಳನ್ನು ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.
ಸರ್ವರಿಗೂ ಸಮಾನ ಅವಕಾಶಗಳು ದೊರಕಲು ಬಿಎಸ್‌ಪಿ ಪಕ್ಷದಿಂದ ಮಾತ್ರ ಸಾಧ್ಯ. ಕರ್ನಾಟಕದಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್‌ಪಿ ಅಭ್ಯರ್ಥಿಗಳ ಗೆಲುವಿಗೆ ನಾವೆಲ್ಲರೂ ಶ್ರಮಿಸೋಣ ಎಂದರು.
ಇದೆ ವೇಳೆ ಪ್ರಜಾಪ್ರಭುತ್ವ ಉಳಿಸುವ ಕಡೆಗೆ-ಆನೆಯ ನಡಿಗೆ ಜನಾಂದೋಲನ ಬೈಕ್ ರ್ಯಾಲಿ ನಡೆಸಲಾಯಿತು. ಅಲ್ಲದೆ ಬಡ ಜನರಿಗೆ ಒಂದು ದಿನ ಉಚಿತ ಆಟೋ ಸೇವೆ ಒದಗಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಬಿಎಸ್‌ಪಿ ಜಿಲ್ಲಾ ಸಮಿತಿ ಸದಸ್ಯ ಹನುಮಂತ್ರಾಯ ಕಪಗಲ್, ಚನ್ನಬಸವ ಜಗ್ಲಿ, ನಾರಾಯಣಪ್ಪ ನಾಯಕ, ಸಂಪತ್‌ರಾಜ್, ಯಮುನಪ್ಪ ಪನ್ನೂರು, ಇಮಾಮ್ ಸಾಬ್, ದುರುಗಪ್ಪ ಸಾದಾಪುರ, ದೇಶರಾಜ್ ಕೊಡ್ಲಿ, ಪರಶುರಾಮ
ಬಾಗಲವಾಡ, ಉರುಕುಂದ ಜಗ್ಲಿ, ಬಿ. ಚಂದ್ರಶೇಖರ, ಬಸವರಾಜ ದೇವರಮನಿ, ತಾಯಪ್ಪ ದೊಡ್ಡಿ ಸೇರಿದಂತೆ ಆನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.