ಈಡಿಗ ಅಭಿವೃದ್ದಿ ನಿಗಮ ಸ್ಥಾಪಿಸಲು ಆಗ್ರಹ
Team Udayavani, Feb 22, 2022, 2:32 PM IST
ರಾಯಚೂರು: ರಾಜ್ಯ ಸರ್ಕಾರ ಹಿಂದುಳಿದ ಈಡಿಗ ಸಮುದಾಯದ ಅಭಿವೃದ್ಧಿಗೆ ನಿಗಮ ಮಂಡಳಿ ಸ್ಥಾಪಿಸುವಂತೆ ಆಗ್ರಹಿಸಿ ರಾಯಚೂರು ತಾಲೂಕು ಆರ್ಯ ಈಡಿಗರ ಸಂಘದ ಸದಸ್ಯರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.
ಈ ಕುರಿತು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ಅನಾದಿ ಕಾಲದಿಂದಲೂ ಆರ್ಯ ಈಡಿಗ ಸಮುದಾಯದ ಕುಲವೃತ್ತಿಯನ್ನೇ ನೆಚ್ಚಿಕೊಂಡು ಜೀವನ ನಡೆಸುತ್ತಿದೆ. ರಾಜ್ಯದಲ್ಲಿ ಆರ್ಯ ಈಡಿಗ ಸಮಾಜದ 25 ಉಪ ಪಂಗಡಗಳು ಸೇರಿದಂತೆ 50 ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿದೆ. ಆದರೆ, ಸೂಕ್ತ ಪ್ರಾತಿನಿಧ್ಯ ಸಿಗದ ಕಾರಣ ಸಮಾಜ ಹಿಂದುಳಿಯುವಂತಾಗಿದೆ ಎಂದರು. ಕುಲವೃತ್ತಿಯಾಗಿದ್ದ ಸೇಂದಿ ಹಾಗೂ ಸಾರಾಯಿ ಉದ್ಯಮ ನಿಷೇಧಿಸಿದ ಪರಿಣಾಮ ಅನೇಕ ಕುಟುಂಬಗಳು ಸಂಕಷ್ಟ ಎದುರಿಸುತ್ತಿವೆ. ಸರ್ಕಾರ ಈವರೆಗೆ ಪುನರ್ವಸತಿ ಉದ್ಯೋಗ ಹಾಗೂ ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ನಿಗಮ ಮಂಡಳಿ ಸ್ಥಾಪಿಸಿ ಅಭಿವೃದ್ಧಿಗೆ ಸಹಕರಿಸಲಿ ಎಂದು ಸಮಾಜದ ಮುಖಂಡರು ಮನವಿ ಮಾಡುತ್ತಲೇ ಇದ್ದರೂ ಸರ್ಕಾರಗಳು ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೂಡಲೇ ಸಚಿವ ಸಂಪುಟದಲ್ಲಿ ಚರ್ಚಿಸಿ ಬ್ರಹ್ಮಶ್ರೀ ಈಡಿಗ ಅಭಿವೃದ್ಧಿ ಮಂಡಳಿ ಸ್ಥಾಪಿಸುವ ಜತೆಗೆ 500 ಕೋಟಿ ಅನುದಾನ ಮೀಸಲಿಡಬೇಕು. ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಬೇಕು. ಸ್ವಯಂ ಉದ್ಯೋಗ, ತರಬೇತಿ ನೀಡಿ ಸಾಲ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿದರು.
ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶ, ಸಾಹಿತ್ಯ ಕನ್ನಡಕ್ಕೆ ಅನುವಾದ ಮಾಡಬೇಕು. ಈಡಿಗ ಸಾಂಸ್ಕೃತಿಕ ಅಧ್ಯಯನ ಪೀಠ ಸ್ಥಾಪಿಸುವಂತೆ ಒತ್ತಾಯಿಸಿದರು. ಈ ವೇಳೆ ಸಂಘದ ಗೌರವಾಧ್ಯಕ್ಷ ಈ. ಆಂಜನೇಯ ಗೌಡ, ಸದಸ್ಯರಾದ ಎಂ. ಬಸವರಾಜ ಗೌಡ, ಮಂಜುನಾಥ ಹಾನಗಲ್, ಕಾರ್ಯಾಧ್ಯಕ್ಷ ಖಾಜನಗೌಡ, ಭೀಮನಗೌಡ, ಕೆ.ವೀರೇಶ್ವರ ಗೌಡ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.