ರೈತರ ಬೆಳೆಗೆ ಎಂಎಸ್‌ಪಿ ಘೋಷಣೆಗೆ ಆಗ್ರಹ
Team Udayavani, Apr 27, 2022, 2:49 PM IST
ರಾಯಚೂರು: ರೈತರು ಬೆಳೆದ ಎಲ್ಲ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಘೋಷಿಸಬೇಕು, ಎಲ್ಲ ಧಾನ್ಯವನ್ನು ಸರ್ಕಾರವೇ ಖರೀದಿಸಬೇಕು. ಗ್ರಾಮೀಣ ಭಾಗದ ಜನರಿಗೆ ಸಮರ್ಪಕ ವಿದ್ಯುತ್ ಸರಬರಾಜು ಮಾಡುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಸಮೀಪದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಸೇರಿದ ಸಂಘದ ಸದಸ್ಯರು, ರೈತ ಮುಖಂಡರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನುಸರಿಸುತ್ತಿರುವ ರೈತ, ಕಾರ್ಮಿಕ ಹಾಗೂ ಜನಸಾಮಾನ್ಯರ ವಿರೋಧಿ ನೀತಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಸರ್ಕಾರಗಳ ದುರಾಡಳಿತದ ಪರಿಣಾಮ ಇಂದು ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರ ಪರಿಣಾಮ ಕೃಷಿ ಮಾಡುವುದೇ ರೈತರಿಗೆ ಕಷ್ಟವಾಗುತ್ತಿದೆ. ಡೀಸೆಲ್ ದರ, ರಸಗೊಬ್ಬರ ದರ, ಕೂಲಿ ದರ ಹೀಗೆ ರೈತರಿಗೆ ಖರ್ಚು ಹೆಚ್ಚಾಗುತ್ತಿದ್ದು, ಮುಕ್ತ ಮಾರುಕಟ್ಟಯಲ್ಲಿ ಧಾನ್ಯಗಳ ಬೆಲೆಯು ಕಡಿಮೆಯಿದೆ. ಇದರಿಂದ ರೈತರು ತೀವ್ರ ನಷ್ಟಕ್ಕೆ ತುತ್ತಾಗುತ್ತಿ ಎಂದು ವಿವರಿಸಿದರು.
ರೈತರ ಪಂಪ್‌ಸೆಟ್‌ಗಳಲ್ಲಿ 10 ಗಂಟೆ ನಿರಂತರ ತ್ರಿಪೇಸ್ ವಿದ್ಯುತ್ ಸರಬರಾಜು ಮಾಡಬೇಕು. ಟ್ರ್ಯಾಕ್ಟರ್ ಹಾಗೂ ಇತರೆ ಕೃಷಿ ಉತ್ಪನ್ನಗಳ ಎಂಆರ್‌ಪಿ ದರಗಳನ್ನು ಕಂಪನಿಗಳು ಅಧಿಕೃತವಾಗಿ ವೆಬ್‌ಸೈಟ್‌ಗಳಲ್ಲಿ ಪ್ರಕಟಿಸಬೇಕು. ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಯನ್ನು ಮಾಡಬೇಕು, ನರೇಗಾ ಯೋಜನೆಯನ್ನು ಕೃಷಿ ಕ್ಷೇತ್ರಕ್ಕೂ ಅನ್ವಯಿಸಿ ರೈತ ಕುಟುಂಬಗಳಿಗೆ ಗೌರವಧನ ನೀಡಬೇಕು, ರಸಗೊಬ್ಬರದ ಬೆಲೆಯನ್ನು ತಗ್ಗಿಸಬೇಕು, ಪಡಿತರ ಚೀಟಿದಾರರತಿಗೆ ನ್ಯಾಯಬೆಲೆ ಅಂಗಡಿಯಲ್ಲಿ ಕಡಿಮೆ ಬೆಲೆಗೆ ಅಡುಗೆ ಎಣ್ಣೆ ನೀಡುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್, ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ್, ಮುಖಂಡರಾದ ಬಸನಗೌಡ ಬಲ್ಲಟಗಿ, ಬಸನಗೌಡ ಮಲ್ಲಿಗೆಮಡಗು, ದೇವರಾಜ ನಾಯಕ, ಮಲ್ಲಪ್ಪ ಪೂಜಾರಿ, ಮಲ್ಲನಗೌಡೂರು, ಮಲ್ಲಿಕಾರ್ಜುನ ದಿನ್ನಿ ಸೇರಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ರೈತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.