ಜೋಳ -ಕಡಲೆ ಖರೀದಿ ಕೇಂದ್ರ ತೆರೆಯಲು ರೈತರ ಆಗ್ರಹ
Team Udayavani, Jan 23, 2018, 4:12 PM IST
ರಾಯಚೂರು: ತೊಗರಿ ಮಾದರಿಯಲ್ಲೇ ಒಣಗಡಲೆ, ಹೈಬ್ರಿಡ್ ಜೋಳವನ್ನೂ ಬೆಂಬಲ ಬೆಲೆಯೊಂದಿಗೆ ಖರೀದಿಸಲು ಖರೀದಿ ಕೇಂದ್ರ ಆರಂಭಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಕೃಷಿ ಸಚಿವ ಕೃಷ್ಣ ಬೈರೇಗೌಡರಿಗೆ ಮನವಿ ಸಲ್ಲಿಸಿದರು.
ರೈತರಿಗೆ ಕಳೆದ ಸಾಲಿನಲ್ಲಿ ಸಾಕಷ್ಟು ನಷ್ಟವಾಗಿದೆ. ಒಂದೆಡೆ ಸತತ ಮಳೆಗೆ ರೈತರು ಕಂಗಾಲಾಗಿದ್ದರೆ, ಮತ್ತೂಂದೆಡೆ ಮುಕ್ತ ಮಾರುಕಟ್ಟೆಯಲ್ಲೂ ಸೂಕ್ತ ಬೆಲೆ ಸಿಗುತ್ತಿಲ್ಲ. ರೈತರು ಒಣಗಡಲೆ ಕಟಾವು ಮಾಡುತ್ತಿದ್ದು, ದರ ಮಾತ್ರ ಕ್ವಿಂಟಲ್‌ಗೆ 3,500 ರೂ. ಇದೆ. ಕಳೆದ ವರ್ಷ ಒಂಭತ್ತು ಸಾವಿರ ರೂ. ಇದ್ದ ಬೆಲೆ ಈ ಬಾರಿ ನೆಲಕಚ್ಚಿದೆ. ಲಕ್ಷಾಂತರ ರೂ. ಖರ್ಚು ಮಾಡಿರುವ ರೈತರು ಇದರಿಂದ ನಷ್ಟ ಎದುರಿಸುವಂತಾಗಿದೆ. ರೈತರನ್ನು ಈ ಸಂಕಷ್ಟದಿಂದ ಪಾರು ಮಾಡಲು ಸರ್ಕಾರ ಒಣಗಡಲೆಗೂ ಬೆಂಬಲ ಬೆಲೆ ನೀಡಿ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು.
ಕನಿಷ್ಠ 6,500 ರೂ. ಬೆಲೆ ನಿಗದಿಗೊಳಿಸಬೇಕು. ಹೈಬ್ರಿಡ್ ಜೋಳಕ್ಕೆ ಪ್ರತಿ ಕ್ವಿಂಟಲ್‌ಗೆ 2 ಸಾವಿರದಿಂದ 2,500 ರೂ.
ವರೆಗೆ ಬೆಲೆ ನಿಗದಿಪಡಿಸಬೇಕು. ತೊಗರಿ ಮಾರಾಟಕ್ಕೆ ಸಂಬಂಧಿಸಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿವರೆಗೆ ಕಾಲಾವಕಾಶ ನೀಡಬೇಕು. ಲಿಂಗಸುಗೂರು, ದೇವದುರ್ಗ ತಾಲೂಕಿನಲ್ಲೂ ಶೇಂಗಾ ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆ ಈಡೇರಿಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ಸಂಘದ ರಾಜ್ಯ ಮುಖಂಡರಾದ ಅಮರಣ್ಣ ಗುಡಿಹಾಳ, ಜಿಲ್ಲಾಧ್ಯಕ್ಷ ಎನ್.ಲಕ್ಷ್ಮಣಗೌಡ ಕಡಗಂದೊಡ್ಡಿ, ದೊಡ್ಡ ಬಸನಗೌಡ ಬಲ್ಲಟಗಿ, ಸದಸ್ಯರಾದ ಬಸವರಾಜ ಮಲ್ಲಿನ ಮಡುವು, ಮನೋಹರ ಜಾನೇಕಲ್, ಶಿವನಗೌಡ ಹೂವಿನಹಡಗಲಿ, ಭೀಮಶ್ವೇರ ರಾವ್, ಬೂದೆಯ್ಯಸ್ವಾಮಿ ಗಬ್ಬೂರು, ವೀರನಗೌಡ ಲಿಂಗಸುಗೂರು, ಸಿದ್ಧರಾಮಯ್ಯ
ಸ್ವಾಮಿ, ದೇವರಾಜ ನಾಯಕ, ಚಂದಾಸಾಬ್ ಕಡಗಂದೊಡ್ಡಿ, ದೇವಪ್ಪ ಜೇಗರಕಲ್, ಶ್ರೀಧರ ಜೆ.ಮಲ್ಲಾಪುರ, ನರಸೋಜಿ ಮಮದಾಪುರ, ನರಸಪ್ಪ ಹೊಕ್ರಾಣಿ, ತಿಮ್ಮಪ್ಪ ಸೇರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.