ನೀರುಗಳ್ಳರ ವಿರುದ್ಧ ಕ್ರಮಕ್ಕೆ ರೈತ ಸಂಘ ಆಗ್ರಹ
Team Udayavani, Jul 29, 2020, 2:44 PM IST
ರಾಯಚೂರು: ತುಂಗಭದ್ರಾ ಎಡದಂಡೆಯ 55ನೇ ಕಾಲುವೆ ವ್ಯಾಪ್ತಿಯಲ್ಲಿ ಅಕ್ರಮ ನೀರಾವರಿ ಹೆಚ್ಚಾಗಿದ್ದು, ನೀರುಗಳ್ಳರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಕರ್ನಾಟಕ ರೈತ ಸಂಘದ ಮಸ್ಕಿ ತಾಲೂಕು ಘಟಕದ ಸದಸ್ಯರು ಮಂಗಳವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಮಸ್ಕಿ ನೀರಾವರಿ ವ್ಯಾಪ್ತಿಗೆ ಒಳಪಡುವ ಈ ಕಾಲುವೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ನೀರಾವರಿ ಮಾಡಲಾಗಿದೆ. ಸುಮಾರು 50ಕ್ಕೂ ಹೆಚ್ಚು ಪಂಪ್‌ಸೆಟ್ ಅಳವಡಿಕೆ ಮಾಡಲಾಗಿದೆ. ಅಕ್ರಮ ಪೈಪ್ ಗಳ ತೂಬುಗಳನ್ನು ಕೂಡಲೇ ಬಂದ್ ಮಾಡಿಸಬೇಕು. 55ನೇ ಕಾಲುವೆ 0ದಿಂದ 16 ಕಿಮೀವರೆಗೆ ಎಡಭಾಗದವರೆಗೆ ಮಾತ್ರ ನೀರಾವರಿ ಅಚ್ಚುಕಟ್ಟು ಪ್ರದೇಶವಾಗಿದೆ. ಆದರೆ, ಬಲಭಾಗದಲ್ಲೂ ನೀರಾವರಿಗೆ ನೀರು ಬಳಸಿಕೊಳ್ಳಲಾಗುತ್ತಿದೆ. ಸಿಂಧನೂರು ನೀರಾವರಿ ಇಲಾಖೆ ಇಇ ಹಾಗೂ ಮಸ್ಕಿಯ ಎಇಇ ಕೂಡಲೇ ಅಕ್ರಮ ಪಂಪ್ ಸೆಟ್ ಹಾಗೂ ಪೈಪ್‌ಗ್ಳ ತೆರವಿಗೆ ಮುಂದಾಗಬೇಕು. ಟಿಎಲ್‌ಬಿಸಿ ವ್ಯಾಪ್ತಿಯ ಅಕ್ರಮ ನೀರುಗಳ್ಳರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕೆಳಭಾಗದವರಿಗೆ ಸಮರ್ಪಕವಾಗಿ ನೀರು ಹರಿಸಬೇಕು. ಕಾಲುವೆಗೆ ನೀರು ಹರಿಸಿದ ತಕ್ ಕ್ಷಣ ವಾರ ಬಂದಿ ಪ್ರಕಾರ ಮೇಲ್ಭಾಗದಲ್ಲಿ 16ನೇ ಕಿಮೀವರೆಗೂ ಗೇಜ್ ನಿರ್ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಮೀನ್ ಪಾಷಾ ದಿದ್ದಗಿ, ಆರ್‌ವೈಎಫ್‌ಐ ಸಂಘಟನೆ ರಾಜ್ಯಾಧ್ಯಕ್ಷ ಎಂ.ಗಂಗಾಧರ, ರೈತ ಮುಖಂಡರಾದ ಭೀಮಯ್ಯ ಜಾಲವಾಡ್ಗಿ, ಚೆನ್ನಾರೆಡ್ಡಿ ಸಾಗರ ಕ್ಯಾಂಪ್, ನಿಂಗಪ್ಪ, ನಾಗನಗೌಡ ಬಾವಿ ದಿದ್ದಗಿ, ಸಿದ್ಧನಗೌಡ ನಾಗಡಗೌಡ, ರಾಜರೆಡ್ಡಿ ಸಾಗರ ಕ್ಯಾಂಪ್ ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.