ರಾಯಚೂರು: ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳಿಂದ ಉಪವಾಸ ನಿರಶನ
Team Udayavani, Jan 6, 2023, 1:14 PM IST
ರಾಯಚೂರು: ಕನಿಷ್ಠ ಸೌಲಭ್ಯಗಳನ್ನು ನೀಡದೆ ವಿದ್ಯಾರ್ಥಿಗಳ ಜೀವನದ ಜತೆ ಅಧಿಕಾರಿಗಳು ಚಲ್ಲಾಟ ಆಡುತ್ತಿದ್ದಾರೆ ಎಂದು ಆರೋಪಿಸಿ ನಗರದ ಬೋಳಮಾಮದೊಡ್ಡಿ ರಸ್ತೆಯಲ್ಲಿನ ಬಿಸಿಎಂ ವಸತಿ ನಿಲಯದ ವಿದ್ಯಾರ್ಥಿಗಳು ಬೀಗ ಹಾಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸುಮಾರು 100ಕ್ಕೂ ಅಧಿಕ ವಿದ್ಯಾರ್ಥಿಗಳು ಬೆಳಗಿನ ಜಾವದ ಉಪಾಹರವನ್ನು ಸೇವಿಸದೆ ಬಿಸಿಲಿನಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ.
ಸರಿಯಾದ ಉಪಾಹಾರ, ಊಟ ನೀಡುತ್ತಿಲ್ಲ. ಕುಡಿಯುವ ನೀರಿನ ವ್ಯವಸ್ಥೆ ಕೂಡ ಇಲ್ಲ. ಊಟದಲ್ಲಿ ಬಾಲಹುಳು ಬರುತ್ತಿವೆ. ವಾರ್ಡನ್ ಮನಸೋಇಚ್ಛೆ ವರ್ತಿಸುತ್ತಿದ್ದಾರೆ. ಇಲ್ಲಿನ ಅವ್ಯವಸ್ಥೆಗಳ ಬಗ್ಗೆ ದೂರಿದರೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ದೂರಿದರೆ ನಾವು ಬರುವುದಿಲ್ಲ. ಏನಾದರೂ ಮಾಡಿಕೊಳ್ಳಿ ಎಂದು ಉಡಾಫೆಯಾಗಿ ಉತ್ತರಿಸುತ್ತಾರೆ ಎಂದು ವಿದ್ಯಾರ್ಥಿಗಳು ದೂರುತ್ತಿದ್ದಾರೆ.
ಇದನ್ನೂ ಓದಿ:ಆಗ ನಳಪುರಿ..ಈಗ ಹಾವೇರಿ…;18ನೇ ಶತಮಾನದಲ್ಲಿ ವ್ಯಾಪಾರಿ ಕೇಂದ್ರವಾಗಿ ಪರಿವರ್ತನೆ
ವಸತಿ ನಿಲಯದಲ್ಲಿ ಸರಿಯಾದ ನೀರಿನ ವ್ಯವಸ್ಥೆ ಕೂಡ ಇಲ್ಲ. ಟಾಯ್ಲೆಟ್ ಬಳಸುವ ನೀರಿನಲ್ಲಿಯೇ ಅಡುಗೆ ಮಾಡಿ ಹಾಕುತ್ತಿದ್ದಾರೆ. ಅಡುಗೆ ಕೂಡ ರುಚಿಯಾಗಿರುವುದಿಲ್ಲ. ಸರಿಯಾದ ವಿದ್ಯುತ್ ವ್ಯವಸ್ಥೆ ಇಲ್ಲ. ವಸತಿ ನಿಲಯದಲ್ಲಿ ಅನೇಕ ಸಮಸ್ಯೆಗಳಿದ್ದರೂ ವಿದ್ಯಾರ್ಥಿಗಳು ಪ್ರಶ್ನೆ ಮಾಡಬಾರದು ಎನ್ನುತ್ತಾರೆ ವಿದ್ಯಾರ್ಥಿಗಳು. ಅಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.