ನೀರಿಗಾಗಿ ಹೋರಾಟ ಜೋರು


Team Udayavani, Aug 18, 2017, 2:46 PM IST

Rayachur.jpg

ಗೊರೇಬಾಳ: ತುಂಗಭದ್ರಾ ಜಲಾಶಯದಿಂದ ಎಡದಂಡೆ ನಾಲೆಗೆ ನೀರು ಹರಿಸಲು ಆಗ್ರಹಿಸಿ ಸಿಂಧನೂರು ತಾಲೂಕಿನ ಹಂಚಿನಾಳ ಕ್ಯಾಂಪ್‌ನಲ್ಲಿ ರೈತರು ಸುಮಾರು ಎರಡು ತಾಸಿಗೂ ಅಧಿಕ ರಾಜ್ಯ ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿದರು. ಈ ವೇಳೆ ಮಾತನಾಡಿದ ಮುಖಂಡ ಜಿ. ಸತ್ಯನಾರಾಯಣ, ಮುನಿರಾಬಾದ್‌ನ ತುಂಗಭದ್ರಾ ಜಲಾಶಯದಲ್ಲಿ ಈಗಾಗಲೇ 52 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಇತ್ತೀಚೆಗೆ ನಡೆದ ಐಸಿಸಿ ಸಭೆಯಲ್ಲಿ ರೈತರಿಗೆ ನೀರು ಬಿಡುವ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳದೆ ಸಭೆ ಮುಂದೂಡಲಾಗಿದ್ದು, ರೈತರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಅಧಿ ಕಾರಿಗಳು ಕಾರ್ಖಾನೆಗಳ ಮಾಲಿಕರ ಜೊತೆ ಕೈಜೋಡಿಸಿ ನೀರಿನ ಸಂಗ್ರಹಣೆಯ ಲೆಕ್ಕದಲ್ಲಿ ಏರುಪೇರು ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಕಾರ್ಖಾನೆಗಳಿಗೆ ನೀಡುತ್ತಿರುವ ನೀರನ್ನು ಕೂಡಲೇ ಸ್ಥಗಿತಗೊಳಿಸಿ ಬೆಳೆಗಳಿಗೆ ಒದಗಿಸಬೇಕು. ಐಸಿಸಿ ಸಭೆ ಕರೆದು ಎಡದಂಡೆ ನಾಲೆಗೆ ನೀರು ಹರಿಸುವ ಸ್ಪಷ್ಟ ದಿನವನ್ನು ಘೋಷಿಸಬೇಕೆಂದು ಆಗ್ರಹಿಸಿದರು. ರೈತ ಮುಖಂಡ ಮರಿಯಪ್ಪ ಸಾಲೋಣಿ ಮಾತನಾಡಿ, ಜನಪ್ರತಿನಿಧಿ ಗಳು, ಅಧಿಕಾರಿಗಳು ರೈತರ ದಾರಿ ತಪ್ಪಿಸುತ್ತಿದ್ದಾರೆ. ಕೆಳಭಾಗದ ರೈತರು, ಮೇಲ್ಭಾಗದ ರೈತರು ಎಂದು ರೈತರಲ್ಲಿಯೇ ಗೊಂದಲ ಸೃಷ್ಟಿಸುತ್ತಿದ್ದಾರೆ. ಭತ್ತ, ಕಬ್ಬು ಬೆಳೆಯಿರಿ ಎಂದು ನಮ್ಮ ಪಹಣಿಯಲ್ಲಿ ಬರೆದಿದ್ದಿರಿ. ಜಲಾಶಯದಲ್ಲಿ ನೀರಿದ್ದರೂ ಬಿಡುತ್ತಿಲ್ಲ. ರೈತ ಆತ್ಮಹತ್ಯೆ ಮಾಡಿಕೊಂಡ ಮೇಲೆ ಪರಿಹಾರ ಕೊಡುವುದಕ್ಕಿಂತ ನೀರು ಬಿಡುವ ಮೂಲಕ ರೈತರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು. ಬಳಿಕ ಗೊರೇಬಾಳ ಉಪ ತಹಶೀಲ್ದಾರ ಮಲ್ಲಶೆಟ್ಟಿ ಚಿದ್ರೆ ಅವರಿಗೆ ಮನವಿ ಸಲ್ಲಿಸಿ ರಸ್ತಾ ರೋಕೋ ಹಿಂಪಡೆಯಲಾಯಿತು. ರೈತ ಮುಖಂಡರಾದ ಜಿ. ಶರಣೇಗೌಡ, ಎಸ್‌.ಲಿಂಗರಾಜ, ಶರಣಪ್ಪ ಹೂಗಾರ, ಪಿ.ರಾಮಪ್ಪ, ವಿರೂಪಾಕ್ಷಗೌಡ ತುರಡಗಿ ಎಪಿಎಂಸಿ ಮಾಜಿ ಸದಸ್ಯ ಎಂ. ರಂಗನಗೌಡ, ಎನ್‌ ಸಣ್ಣಭೀಮನಗೌಡ, ಶಂಭಣ್ಣ ಸಾಹುಕಾರ, ಜೆ.ಬಸನಗೌಡ, ಜಿಪಂ ಮಾಜಿ ಸದಸ್ಯ ಶರಣಪ್ಪ, ಎನ್‌.ಶಿವನಗೌಡ, ಎನ್‌.ವಿ. ಸತ್ಯನಾರಾಯಣ, ಎನ್‌.ಶರಣೇಗೌಡ ಸೇರಿದಂತೆ ಸುತ್ತ-ಮುತ್ತಲಿನ ಗ್ರಾಮಗಳ ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಬಂದೋಬಸ್ತ್: ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ಗೆ ಕ್ರಮ ಕೈಗೊಂಡಿದ್ದರು.

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-1

Missing case: ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ; ದೂರು ದಾಖಲು

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.