ವೀರಶೈವ ಮಹಾಸಭಾದಿಂದ ಹೋರಾಟ
Team Udayavani, Dec 23, 2021, 12:48 PM IST
ರಾಯಚೂರು: ವಿಶ್ವಗುರು ಬಸವೇಶ್ವರರ ಭಾವಚಿತ್ರಕ್ಕೆ ಮಸಿ ಬಳಿಯುವ ಮೂಲಕ ಅಪಮಾನ ಮಾಡಿದ ಘಟನೆ ಖಂಡನೀಯ. ನಾಡಿನಲ್ಲಿ ಮಹಾನ್ ನಾಯಕರಿಗೆ ಅವಮಾನ ಮಾಡುವ ಘಟನೆಗಳು ಹೆಚ್ಚಾಗುತ್ತಿದ್ದು, ಕೂಡಲೇ ಈ ಕೃತ್ಯ ಎಸಗಿದ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಅಖೀಲ ಭಾರತ ವೀರಶೈವ ಮಹಾಸಭೆ, ಬಸವಕೇಂದ್ರ, ವೀರಶೈವ ಸಮಾಜ, ಅಖೀಲ ಭಾರತ ಜಾಗತಿಕ ಲಿಂಗಾಯತ ಮಹಾಸಭೆ, ಶ್ರೀ ರುದ್ರಸೇನ ಮತ್ತು ಲಿಂಗವಂತ ನೌಕರರ ಸಮಾಜದ ಸಹಯೋಗದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ಸಮಾಜದ ಸದಸ್ಯರು, ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅಲ್ಲಿಂದ ಡಿಸಿ ಕಚೇರಿವರೆಗೂ ಮೌನ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಂತರ ಡಿಸಿ ಕಚೇರಿ ಎದುರು ಪ್ರತಿಭಟಿಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಬೆಳಗಾವಿಜಿಲ್ಲೆಯಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಬಸವೇಶ್ವರ ಭಾವಚಿತ್ರಕ್ಕೆ ಮಸಿ ಬಳಿಯುವ ಮೂಲಕ ಅಪಮಾನ ಮಾಡಲಾಗಿದೆ. ವಿಶ್ವಗುರು ಬಸವಣ್ಣನವರು ಶಾಂತಿ ಸಂದೇಶ ಸಾರಿದ ಮಹಾನ್ ಶರಣರು. ಅವರನ್ನು ದೊಡ್ಡ ಸ್ಥಾನದಲ್ಲಿಟ್ಟು ಇಡೀ ವಿಶ್ವವೇ ಆರಾಧಿಸುವಾಗ ದುಷ್ಕರ್ಮಿಗಳು ಈ ರೀತಿ ಅಪಮಾನ ಮಾಡಿರುವುದು ಖಂಡನೀಯ ಎಂದು ದೂರಿದರು.
ಈ ವೇಳೆ ವೀರಶೈವ ಮಹಾಸಭಾದ ಅಧ್ಯಕ್ಷ ಚಂದ್ರಶೇಖರ್ ಮಿರ್ಜಾಪೂರ, ವೀರಶೈವ ಸಮಾಜದ ಅಧ್ಯಕ್ಷ ಎಂ.ವೀರನಗೌಡ, ರಾಮನಗೌಡ, ಕೆ.ವೀರಭದ್ರಪ್ಪ, ಜೆ.ಬಸವರಾಜ, ಚೆನ್ನಬಸವಣ್ಣ, ಯುವ ಘಟಕದ ಅಧ್ಯಕ್ಷ ಶಿವಶರಣ ಅರಕೇರಾ, ನಾಗಯ್ಯ ಸ್ವಾಮಿ ಹಂಚಿನಾಳ ಸೇರಿದಂತೆ ಅನೇಕರು ಮುಖಂಡರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.