ಕೆರೆ ಒತ್ತುವರಿ ತೆರವುಗೊಳಿಸಿ ನೀರು ತುಂಬಿಸಿ
Team Udayavani, Feb 5, 2022, 1:25 PM IST
ರಾಯಚೂರು: ಬೇಸಿಗೆಯಲ್ಲಿ ಉಲ್ಬಣಿಸುವ ಕುಡಿಯುವ ನೀರಿನ ಬವಣೆ ನೀಗಿಸುವುದರ ಜತೆಗೆ ಅಂತರ್ಜಲ ಹೆಚ್ಚಿಸಲು ಜಿಲ್ಲೆಯ ಕೆರೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಭಾರತೀಯ ಕಿಸಾನ್ ಸಂಘದ ಕಾರ್ಯಕರ್ತರು ಶುಕ್ರವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿ 125ಕ್ಕೂ ಹೆಚ್ಚು ಕೆರೆಗಳಿವೆ. ಅದರಲ್ಲಿ ಸಾಕಷ್ಟು ಕೆರೆಗಳು ಒತ್ತುವರಿ ಯಾಗಿದ್ದು, ಕೂಡಲೇ ತೆರವಿಗೆ ಕ್ರಮ ವಹಿಸಬೇಕು. ಒತ್ತುವರಿ ಮಾಡಿಕೊಂಡವರ ವಿರುದ್ಧ ಕ್ರಮ ಜರುಗಿಸಬೇಕು. ಜಿಲ್ಲೆಯಲ್ಲಿ ಬೇಸಿಗೆ ಬಹಳ ಭೀಕರವಾಗಿರುತ್ತದೆ. ಆಗ ಅನೇಕ ಗ್ರಾಮಗಳಲ್ಲಿ ನೀರಿನ ಕೊರತೆ ಹೆಚ್ಚಾಗಿ ಕಾಡುತ್ತಿದೆ. ಅನೇಕ ಗ್ರಾಮಗಳ ಕುಡಿಯುವ ನೀರಿಗೆ ಕೆರೆಗಳನ್ನೇ ಜನರು ಅವಲಂಭಿಸಿದ್ದಾರೆ. ಕೆರೆಗಳ ಭರ್ತಿಯಿಂದ ಅಂತರ್ಜಲ ಮಟ್ಟವೂ ವೃದ್ಧಿಯಾಗುತ್ತದೆ ಎಂದರು.
ಜನರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಉಪಯೋಗವಾಗು ವಂತೆ ವ್ಯವಸ್ಥೆ ಮಾಡಬೇಕು. ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾ ಧಿ ಕಾರದ ಜಿಲ್ಲಾ ಸಮಿತಿ ಕೆರೆಗಳ ಒತ್ತುವರಿ ಕುರಿತು ವರದಿ ಸಿದ್ಧಪಡಿಸಬೇಕು. ಕೆರೆಗಳಿಗೆ ನೀರು ಹರಿಸುವ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಕೆರೆಗಳ ಸರ್ವೇ ನಡೆಸಿ ಗಡಿ ಗುರುತಿಸಬೇಕು, ಕೆರೆಗಳ ಸಮಗ್ರ ಅಭಿವೃದ್ಧಿಗಾಗಿ ಯೋಜನೆ ರೂಪಿಸಬೇಕು. 30 ದಿನದೊಳಗೆ ಅಗತ್ಯ ಕ್ರಮ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಸಂಘದ ಜಿಲ್ಲಾಧ್ಯಕ್ಷ ಕೆ.ರಂಗನಾಥ ಪಾಟೀಲ್, ಮಂಜುನಾಥ ದಳವಾಯಿ, ರಮೇಶ ಆಳಮಳಿ, ಗೂಳಪ್ಪಗೌಡ ಜೇಗರಕಲ್, ಹನುಮಂತರಾಯ ನಾಯಕ, ಶಂಕರಗೌಡ ಪೊಲೀಸ್ ಪಾಟೀಲ್, ಮಲ್ಲಿಕಾರ್ಜುನಗೌಡ, ರಾಘವೇಂದ್ರ ಸೇರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.