ವಿದ್ಯುತ್ ತಂತಿ ತಗುಲಿ ಅಗ್ನಿ ಅವಘಡ; ಗುಡಿಸಲುಗಳು ಸುಟ್ಟು ಭಸ್ಮ
Team Udayavani, Feb 25, 2023, 2:29 PM IST
ರಾಯಚೂರು: ವಿದ್ಯುತ್ ತಂತಿ ಸ್ಪರ್ಶಿಸಿ ಎಂಟು ಗುಡಿಸಲುಗಳು ಮತ್ತು ಕೋಟ್ಯಾಂತರ ರೂ ಮೌಲ್ಯದ ಹತ್ತಿ ಭಸ್ಮವಾದ ಘಟನೆ ದೇವದುರ್ಗ ತಾಲೂಕಿನ ಜಾಗಟಗಲ್ ಗ್ರಾಮದಲ್ಲಿ ನಡೆದಿದೆ.
ಒಂದು ಸಾವಿರ ಕ್ವಿಂಟಲ್ ಹತ್ತಿ, 30 ಲಕ್ಷ ನಗದು, ಚಿನ್ನಾಭರಣ ಜತೆಗೆ ಗುಡಿಸಲುಗಳಲ್ಲಿದ್ದ ದವಸ ಧಾನ್ಯ ವಸ್ತುಗಳೆಲ್ಲ ಸುಟ್ಟು ಕರಕಲಾಗಿವೆ. ಆಂಧ್ರ ಪ್ರದೇಶ ಮೂಲದ ನಾಗೇಶ್ವರರಾವ್, ರಾಮಕೃಷ್ಣ, ಶೇಷಯ್ಯ ಎಂಬುವವರಿಗೆ ಸೇರಿದ ಗುಡಿಸಲುಗಳು ಬೆಂಕಿಗಾಹುತಿಯಾಗಿವೆ.
ಮೆಣಸಿನಕಾಯಿ ಬೆಳೆ ಮಾರಾಟ ಮಾಡಿದ್ದ ಲಕ್ಷಾಂತರ ರೂ. ನಗದು ಕೂಡ ಬೆಂಕಿಗಾಹುತಿಯಾಗಿದೆ. ವಿದ್ಯುತ್ ತಂತಿ ತುಂಡಾಗಿ ಗುಡಿಸಲುಗಳ ಮೇಲೆ ಬಿದ್ದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಬರುವ ವೇಳೆ ಭಾಗಶಃ ಹಾನಿ ಸಂಭವಿಸಿತ್ತು. ಬೆಂಕಿಯ ನಂದಿಸಲು ಹರಸಾಹಸ ಪಡಬೇಕಾಯಿತು. ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.