ಗಾಂಧೀಜಿ ಸ್ತಬ್ಧಚಿತ್ರ ರಥಯಾತ್ರೆಗೆ ಅದ್ಧೂರಿ ಸ್ವಾಗತ

Team Udayavani, Dec 16, 2018, 12:45 PM IST

ray.jpg

ರಾಯಚೂರು: ಮಹಾತ್ಮಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ನಿಮಿತ್ತ ಅವರ ಸಂದೇಶಗಳನ್ನು ಇಡೀ ರಾಜ್ಯಾದ್ಯಂತ ಪಸರಿಸುವ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಏರ್ಪಡಿಸಿರುವ ಗಾಂಧೀಜಿ ಅಭಿಯಾನದ ಸ್ತಬ್ಧಚಿತ್ರ ರಥಯಾತ್ರೆ ಶನಿವಾರ ಜಿಲ್ಲೆಯ ಸಿಂಧನೂರು ನಗರಕ್ಕೆ ಪ್ರವೇಶಿಸಿದಾಗ ಅದ್ಧೂರಿಯಾಗಿ
ಸ್ವಾಗತಿಸಲಾಯಿತು.

ಗಾಂಧೀಜಿ ಅಭಿಯಾನದ ಸ್ತಬ್ಧಚಿತ್ರ ರಥಯಾತ್ರೆ ಸಿಂಧನೂರು ನಗರಕ್ಕೆ ಪ್ರವೇಶಿಸುತ್ತಲೇ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಅದ್ಧೂರಿಯಾಗಿ ಸ್ವಾಗತಿಸಿದರು. ಮಹಾತ್ಮ ಗಾಂಧಿಧೀಜಿ ಅವರಿಗೆ ಪ್ರಿಯವಾದ ರಘುಪತಿ ರಾಘವ ರಾಜಾರಾಮ, ವೈಷ್ಣವಿ ಜನತೋ…
ಸೇರಿದಂತೆ ವಿವಿಧ ಭಜನೆಗಳನ್ನು ಹಾಡಲಾಯಿತು. ಗಾಂಧಿಧೀಜಿ ಪರ ಜೈಘೋಷ ಕೂಗಲಾಯಿತು.

ತಹಶೀಲ್ದಾರ್‌ ಶಿವಾನಂದ ಸಾಗರ, ನಗರಸಭೆ ಪೌರಾಯುಕ್ತ ವಿರೂಪಾಕ್ಷ ಮೂರ್ತಿ ಅವರು ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಚಾಲನೆ ನೀಡಿದರು.

ಸಿಂಧನೂರು ತಹಶೀಲ್ದಾರ್‌ ಶಿವಾನಂದ ಸಾಗರ ಮಾತನಾಡಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮ ವರ್ಷಾಚರಣೆ ಹೊತ್ತಿನಲ್ಲಿ ಅವರ ವಿಚಾರಧಾರೆಗಳು ಮತ್ತು ಸಂದೇಶಗಳನ್ನು ಇಡೀ ನಾಡಿನ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಎರಡು ಮಾರ್ಗಗಳಲ್ಲಿ ಈ ರಥಯಾತ್ರೆಗಳು ರಾಜ್ಯಾದ್ಯಂತ ಸಂಚರಿಸುತ್ತಿವೆ. ಶಾಂತಿ ಮಾರ್ಗ ಎನ್ನುವ ಸ್ತಬ್ಧಚಿತ್ರ ರಥಯಾತ್ರೆಯು ಬಳ್ಳಾರಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಸಂಚರಿಸಿ ಸಿಂಧನೂರಿಗೆ ಆಗಮಿಸಿದೆ ಎಂದರು.

ಮಹಾತ್ಮರ ವಿಚಾರಧಾರೆಗಳು ಮತ್ತು ಅವರ ಸಂದೇಶಗಳನ್ನು ಸಾರ್ವಜನಿಕರು ಅರಿತು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಬಳಿಕ ಸ್ತಬ್ಧಚಿತ್ರ ರಥ ಯಾತ್ರೆಯು ಸಿಂಧನೂರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಜಿಪಂ ಸದಸ್ಯರಾದ ಅಮರೇಗೌಡ ವಿರುಪಾಪುರ, ಬಸವರಾಜ ನಾಡಗೌಡ, ತಾಪಂ ಕಾ.ನಿ. ಅಧಿಕಾರಿ ಬಾಬು ರಾಠೊಡ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

3(1)

Naturopathy: ಉತ್ತಮ ಆರೋಗ್ಯಕ್ಕಾಗಿ ಪ್ರಕೃತಿ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.