ಸಿಎಂ ರೈತ ವಿರೋಧಿ ಹೇಳಿಕೆಗೆ ಗರಂ
Team Udayavani, Nov 22, 2018, 12:35 PM IST
ರಾಯಚೂರು: ಕಬ್ಬು ಬೆಳೆ ಬಾಕಿ ಹಣ ಪಾವತಿಸುವಂತೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾದ ರೈತರು ಹಾಗೂ ರೈತ ಮಹಿಳೆ ಬಗ್ಗೆ ತುತ್ಛವಾಗಿ ಮಾತನಾಡಿದ ಸಿಎಂ ಎಚ್.ಡಿ.ಕುಮಾರಸ್ವಾಮಿ ಕೂಡಲೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಉದ್ಯಾನವನದಲ್ಲಿ ಬುಧವಾರ ಧರಣಿ ನಡೆಸಿದ ಬಿಜೆಪಿ ಮುಖಂಡರು, ಕಾರ್ಯಕರ್ತರು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಸಮ್ಮಿಶ್ರ ಸರ್ಕಾರ ರೈತ ವಿರೋಧಿ ಯಾಗಿದೆ. ಕಬ್ಬು ಬೆಳೆಗಾರರು ತಮ್ಮ ಹಕ್ಕುಗಳಿಗಾಗಿ ನ್ಯಾಯಯುತವಾಗಿ ಹೋರಾಟಕ್ಕೆ ಮುಂದಾದರೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರೈತರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ರಾಜ್ಯ ಬರಕ್ಕೆ ತುತ್ತಾಗಿದ್ದು, ರೈತರು ಕಷ್ಟದಲ್ಲಿದ್ದಾರೆ. ರೈತರ ಸಮಸ್ಯೆ ಇತ್ಯರ್ಥಪಡಿಸಲು ಚಿಂತಿಸದ ಸಿಎಂ, ರೈತರ ಬಗ್ಗೆಯೇ ಮನಬಂದಂತೆ ಮಾತನಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ, ಅದೇ ರೈತರು ಕಷ್ಟ ಎಂದು ಬಂದಾಗ ಕಡೆಗಣಿಸುತ್ತಿದ್ದಾರೆ. ಅವರು ಮೊದಲು ರೈತರ ಹಿತ ಕಾಪಾಡಲು ಮುಂದಾಗಬೇಕು. ಸಾಲ ಮನ್ನಾ ಎಂದರೂ ಬ್ಯಾಂಕ್‌ನವರು ರೈತರ ಮನೆ ಬಾಗಿಲಿಗೆ ಅಲೆಯುತ್ತಿದ್ದಾರೆ. ಈ ಕೂಡಲೇ ರೈತರ ಹಿತ ಕಾಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು. ರಾಜ್ಯದ ರೈತರ ಕ್ಷಮೆಯಾಚಿಸಬೇಕು. ಕಬ್ಬು ಬೆಳಗಾರರಿಗೆ ಬಾಕಿ ಮೊತ್ತವನ್ನು ಕೂಡಲೇ ಪಾವತಿಸಬೇಕು. ಬರ ಪರಿಹಾರ ಕಾಮಗಾರಿ ತ್ವರಿತವಾಗಿ ಆರಂಭಿಸಬೇಕು. ಇಲ್ಲವಾದಲ್ಲಿ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಶರಣಪ್ಪಗೌಡ ಜಾಡಲದಿನ್ನಿ, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ಮುಖಂಡರಾದ ಎನ್.ಶಂಕ್ರಪ್ಪ, ತಿಪ್ಪರಾಜ ಹವಾಲ್ದಾರ್, ಆರ್.ತಿಮ್ಮಯ್ಯ, ಅಶೋಕ ಗಸ್ತಿ, ಬಂಡೇಶ ವಲ್ಕಂದಿನ್ನಿ, ಪರಮೇಶಪ್ಪ, ಎ.ಚಂದ್ರಶೇಖರ, ಶಶಿರಾಜ ಮಸ್ಕಿ ಸೇರಿ ವಿವಿಧ ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.