ನಂಬಿಕೆಗೆ ಪರ್ಯಾಯ ಹೆಸರೇ ಗಂಗಾಮತ
Team Udayavani, Jan 22, 2018, 4:07 PM IST
ರಾಯಚೂರು: ಗಂಗಾಮತ ಸಮಾಜ ನಂಬಿಕೆಗೆ ಪರ್ಯಾಯ ಹೆಸರು ಎನ್ನುವಂತಿದ್ದು, ನಂಬಿದವರನ್ನು ದಡ ಸೇರಿಸುವಂಥ ಇತಿಹಾಸ ಹೊಂದಿದೆ ಎಂದು ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಹೇಳಿದರು.
ಜಿಲ್ಲಾಡಳಿತ, ಜಿಪಂ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗಂಗಾಮತ ಸಮಾಜದ ಸಹಯೋಗದಲ್ಲಿ ರವಿವಾರ ನಗರದ ಪಂ. ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ಶ್ರೀ ನಿಜಶರಣ
ಅಂಬಿಗರ ಚೌಡಯ್ಯನವರ ಜಯಂತ್ಯುತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 12ನೇ ಶತಮಾನದ ಪ್ರಮುಖ ಶರಣರಲ್ಲಿ ಅಂಬಿಗರ ಚೌಡಯ್ಯನವರು ಒಬ್ಬರು. ಅವರ ರಚಿಸಿದ ವಚನಗಳು ಇಂದಿಗೂ ಪ್ರಸ್ತುತ ಎಂದರು.
ಗಂಗಾಮತಸ್ಥರು ಶ್ರಮಜೀವನಕ್ಕೆ ಹೆಸರುವಾಸಿ. ಯಾವಾಗಲೂ ತುಂಬಾ ಅಪಾಯದ ಅಂಚಿನಲ್ಲಿಯೇ ಕೆಲಸ ಮಾಡುತ್ತಾರೆ. ಇಂದಿಗೂ ಕುಲವೃತ್ತಿಯನ್ನೇ ನೆಚ್ಚಿಕೊಂಡಿದ್ದಾರೆ. ಶಿಕ್ಷಣಕ್ಕೆ ಆದ್ಯತೆ ನೀಡುವ ಮೂಲಕ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಬೇಕು ಎಂದರು.
ಎಂಎಲ್‌ಸಿ ಎನ್.ಎಸ್.ಬೋಸರಾಜ್ ಮಾತನಾಡಿ, ಸರ್ಕಾರ ಪ್ರತ್ಯೇಕ ನಿಗಮ ಸ್ಥಾಪಿಸಿ ನೂರು ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿದೆ. ಜಿಲ್ಲೆಯವರನ್ನೇ ನಿಗಮದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಸರ್ಕಾರದ ಮೇಲೆ ಒತ್ತಡ ಹಾಕಲಾಗುವುದು ಎಂದರು.
ಶಾಸಕ ತಿಪ್ಪರಾಜ ಹವಾಲ್ದಾರ್ ಮಾತನಾಡಿ, ಸಮಾಜದ ಪ್ರಗತಿಗಾಗಿ ಸರ್ಕಾರ ಸ್ಥಾಪಿಸಿರುವ ಅಭಿವೃದ್ಧಿ ನಿಗಮಕ್ಕೆ ಜಿಲ್ಲೆಯ ಗಂಗಾಮತಸ್ಥ ಸಮಾಜದ ವ್ಯಕ್ತಿಯ ಹೆಸರು ಸೂಚಿಸಿದ್ದಲ್ಲಿ ಸರ್ಕಾರದ ಮೇಲೆ ಒತ್ತಡ ಹಾಕುವುದಾಗಿ
ಹೇಳಿದರು. ಸಮಾಜದ ಜಿಲ್ಲಾಧ್ಯಕ್ಷ ಕೆ.ಶಾಂತಪ್ಪ ಮಾತನಾಡಿದರು. ತಾಳಿಕೋಟೆ ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ| ಎಸ್. ಎಂ.ಪಾಟೀಲ್ ಉಪನ್ಯಾಸ ನೀಡಿದರು.
ನಗರಸಭೆ ಅಧ್ಯಕ್ಷೆ ಹೇಮಲತಾ ಬೂದೆಪ್ಪ, ಉಪಾಧ್ಯಕ್ಷ ಜಯಣ್ಣ, ಪ್ರೊಬೇಶನರ್ ತಹಶೀಲ್ದಾರ್ ವಿಶ್ವನಾಥ ರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ನೀಲಮ್ಮ, ಎಪಿಎಂಸಿ ಅಧ್ಯಕ್ಷ ಅಮರೇಗೌಡ ಹಂಚಿನಾಳ, ಆರ್‌ಡಿಎ ಅಧ್ಯಕ್ಷ ಕರೀಂಸಾಬ್, ನಗರಸಭೆ ಸದಸ್ಯರಾದ ಮಹಾಲಿಂಗ ರಾಂಪುರ, ಹರೀಶ ನಾಡಗೌಡ, ಸಮಾಜದ ಮುಖಂಡರಾದ ಶರಣಪ್ಪ ಕಲ್ಮಲಾ, ಕಡಗೋಲ ಆಂಜನೇಯ, ಕಡಗೋಲ ಶರಣಪ್ಪ, ರಾಜೇಶ್ವರಿ, ಕಡಗೋಲ
ರಾಮಚಂದ್ರ ಇತರರಿದ್ದರು.
ವೈಭವದ ಮೆರವಣಿಗೆ: ಕಾರ್ಯಕ್ರಮಕ್ಕೂ ಮುನ್ನ ನಗರದ ಪ್ರಮುಖ ಬೀದಿಗಳಲ್ಲಿ ಅಂಬಿಗರ ಚೌಡಯ್ಯನವರ ಭಾವಚಿತ್ರ ಮೆರವಣಿಗೆ ಸಕಲ ವಾದ್ಯ ವೈಭವದೊಂದಿಗೆ ನಡೆಸಲಾಯಿತು. ಜಿಲ್ಲಾ ಗಂಗಾಮತಸ್ಥರ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ರವಿವಾರ ಬೆಳಗ್ಗೆ ನಗರದ ಅಂಬಿಗರ ಚೌಡಯ್ಯ ವೃತ್ತದಲ್ಲಿರುವ ಪ್ರತಿಮೆಗೆ ಗಣ್ಯರಿಂದ ಪೂಜೆ ನೆರವೇರಿಸಲಾಯಿತು. ನಂತರ ಅಂಬಿಗರ ಚೌಡಯ್ಯರ ಭಾವಚಿತ್ರ ಮೆರವಣಿಗೆಗೆ ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಚಾಲನೆ ನೀಡಿದರು. ಚೌಡಯ್ಯ ವೃತ್ತದಿಂದ ಶುರುವಾದ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ
ರಂಗಮಂದಿರಕ್ಕೆ ತಲುಪಿತು.
ವಿವಿಧ ವಾದ್ಯಮೇಳಗಳು, ಕಲಾ ತಂಡಗಳು ಮೆರವಣಿಗೆ ಮೆರುಗು ಹೆಚ್ಚಿಸಿದವು. ಗಂಗಾಮತ ಸಮಾಜದ ಜಿಲ್ಲಾಧ್ಯಕ್ಷ ಕೆ.ಶಾಂತಪ್ಪ ಸೇರಿ ಸಮಾಜದ ಮುಖಂಡರು ಉಪಸ್ಥಿತರಿದ್ದರು. ಮಹಿಳೆಯರು, ಯುವತಿಯರು ಕುಂಭ-ಕಳಸಗಳೊಂದಿಗೆ ಹೆಜ್ಜೆ ಹಾಕಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.