ಗ್ರಾಮದಲ್ಲೇ ಉದ್ಯೋಗ ಖಾತ್ರಿ ಕೆಲಸ ಕೊಡಿ

Team Udayavani, Jul 7, 2017, 11:25 AM IST

RAI-3.jpg

ಗೊರೇಬಾಳ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮದಲ್ಲಿಯೇ ಕೆಲಸ ಕೊಡಲು ಆಗ್ರಹಿಸಿ
ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು, ಕಾರ್ಮಿಕರು ಗುರುವಾರ ಜಾಲಿಹಾಳ ಗ್ರಾಮ ಪಂಚಾಯತಿ ಎದುರು ಧರಣಿ ನಡೆಸಿದರು.

ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ಬಸವರಾಜ ಹಂಚಿನಾಳ, ರೈತರು, ಕೂಲಿಕಾರ್ಮಿಕರು ಗುಳೆ ಹೋಗುವುದನ್ನು
ತಡೆಯಲು ಮತ್ತು ಗ್ರಾಮದಲ್ಲಿಯೇ ಕೆಲಸ ಒದಗಿಸಲು ಕೇಂದ್ರ ಸರ್ಕಾರ ನರೇಗಾ ಯೋಜನೆ ಜಾರಿ ಮಾಡಿದೆ. ಆದರೆ ಗ್ರಾಪಂ
ಅಧಿಕಾರಿಗಳು ಸ್ವಗ್ರಾಮದಲ್ಲಿ ಕೆಲಸ ನೀಡದೇ, ಬೇರೆ ಗ್ರಾಮಗಳಿಗೆ ಕಳಿಸುತ್ತಿದ್ದು, ಪಿಡಿಒ ಮೇಲೆ ಕ್ರಮ ಕೈಗೊಳ್ಳಬೇಕೆಂದು
ಆಗ್ರಹಿಸಿದರು.

ಜನಪ್ರತಿನಿಧಿಗಳು, ಅಧಿಕಾರಿಗಳು ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕ ಜಾರಿ ಮಾಡುತ್ತಿಲ್ಲ, ಗ್ರಾಮದಲ್ಲಿರುವ ಹಳ್ಳದ ಹೂಳು ಎತ್ತುವ ಕೆಲಸವನ್ನಾದರೂ ನೀಡಬೇಕಿತ್ತು. ಆದರೆ ದೂರದ ಗುಡದೂರು ಗ್ರಾಮ ಪಂಚಾಯತಿಗೆ ಕಾರ್ಮಿಕರನ್ನು ಕಳುಹಿಸಿ
ಜನರ ಜೀವ ಹಿಂಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.  ಸಂಘದ ಮಾನ್ವಿ ತಾಲೂಕು ಕಾರ್ಯಾಧ್ಯಕ್ಷ ಪ್ರಹ್ಲಾದ ಮಾಲಿಪಾಟೀಲ ಮಾತನಾಡಿ, ನರೇಗಾ ಯೋಜನೆ ಅಧಿಕಾರಿಗಳು, ಜನಪ್ರತಿನಿಧಿಗಳ ಸ್ವಾರ್ಥಕ್ಕೆ ಬಲಿಯಾಗುತ್ತಿದೆ.
ಕೂಲಿಕಾರ್ಮಿಕರು, ರೈತರನ್ನು ಅಲಕ್ಷಿಸಿದರೆ ಮುಂದೆ ಅನಾಹುತ ಎದುರಿಸಬೇಕಾಗುತ್ತದೆ. ಸ್ವಂತ ಗ್ರಾಮದಲ್ಲಿ ಕೆಲಸ ನೀಡದಿದ್ದರೆ
ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಸೂಗುರಯ್ಯ ಸ್ವಾಮಿ, ಮುಖಂಡರಾದ ಖಾದರಸಾಬ, ಅಣ್ಣಪ್ಪ ಹುಡೇದ, ವೀರೇಶ, ವಿರುಪಣ್ಣ, ಮೋಹನರೆಡ್ಡಿ, ಆನಂದ, ದೊಡ್ಡಪ್ಪ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: hit for setting firecrackers in front of house

Raichur: ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

10-

Maski ರುದ್ರಭೂಮಿಯಲ್ಲಿ ವಿದ್ಯುತ್ ವ್ಯವಸ್ಥೆ ಮಾಡುವಂತೆ ಸಾರ್ವಜನಿಕರ ಒತ್ತಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

11-kushtagi

Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

10-kodagu

Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್‌ ಮೇಜರ್‌

9–Niveus-Mangalore-Marathon

Niveus Mangalore Marathon 2024: ನ.10: ನೀವಿಯಸ್‌ ಮಂಗಳೂರು ಮ್ಯಾರಥಾನ್‌

Anushka shetty’s upcoming movie Ghaati first look

Ghaati: ಸ್ವೀಟಿ ಅಲ್ಲ ಘಾಟಿ; ಫ‌ಸ್ಟ್‌ಲುಕ್‌ನಲ್ಲಿ ಅನುಷ್ಕಾ ಸಿನಿಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.