ಸಮಾನ ಕೆಲಸಕ್ಕೆ ಸಮಾನ ವೇತನ ಕೊಡಿ


Team Udayavani, Oct 26, 2018, 10:47 AM IST

ray-1.jpg

ರಾಯಚೂರು: ಆರೋಗ್ಯ ಇಲಾಖೆ ನೌಕರರಿಗೆ ಸೇವಾ ಭದ್ರತೆ, ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದು, ಆರೋಗ್ಯ ಕ್ಷೇತ್ರದ ಬಜೆಟ್‌ ಶೇ.1ರಷ್ಟು ಹೆಚ್ಚಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಒಡ್ಡಿ ಗುರುವಾರ ಜಿಲ್ಲಾ ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ವೇದಿಕೆ ಸದಸ್ಯರು ಪ್ರತಿಭಟನೆ ನಡೆಸಿದರು.

ಗುರುವಾರ ಬೆಳಗ್ಗೆ ಜಿಲ್ಲಾ ಆರೋಗ್ಯ ಇಲಾಖೆ ಕಚೇರಿಯಿಂದ ಶುರುವಾದ ಪ್ರತಿಭಟನಾ ರ್ಯಾಲಿ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆಸಲಾಯಿತು. ನಂತರ ಜಿಲ್ಲಾಧಿಕಾರಿ ಮೂಲಕ ಪ್ರಧಾನಿ, ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಆರೋಗ್ಯ ಇಲಾಖೆ ನೌಕರರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಆತಂಕದಲ್ಲೇ ಸೇವೆ ನೀಡುವಂತಾಗಿದೆ. ಕೆಲಸಕ್ಕೆ ತಕ್ಕ ವೇತನ ಸಿಗದೆ, ಅತ್ತ ಭದ್ರತೆ ಇಲ್ಲದೆ ಕೆಲಸ ಮಾಡುವ ಸ್ಥಿತಿ ಇದೆ. ಹೀಗಾಗಿ ಸಿಬ್ಬಂದಿ ಬೇಡಿಕೆಗಳಿಗೆ ಸ್ಪಂದಿಸುವ ಮೂಲಕ ಸರ್ಕಾರ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬಲಪಡಿಸಲು ಒತ್ತು ನೀಡಬೇಕು ಎಂದು ಆಗ್ರಹಿಸಿದರು.

ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವಂಥವರು ಕಾಯಂ ನೌಕರರಿಗಿಂತ ಹೆಚ್ಚಿನ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಎಲ್ಲ ನೌಕರರಿಗೆ ಸೇವಾ ಭದ್ರತೆ ಖಾತರಿ ಪಡಿಸಬೇಕು. ಗುತ್ತಿಗೆ ನೌಕರರು ನಿವೃತ್ತಿಯಾಗುವವರೆಗೆ ಸೇವಾ ಭದ್ರತೆ ಕಲ್ಪಿಸಬೇಕು. ವೇತನ ಮತ್ತು ಭತ್ಯೆಗಳು, ವೇತನ ಶ್ರೇಣಿ ನೀಡಲು ಹರಿಯಾಣ ರಾಜ್ಯದ ಮಾದರಿ ಅನುಸರಿಸಬೇಕು ಎಂದು ಒತ್ತಾಯಿಸಿದರು. 

ಕರ್ನಾಟಕ ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಕಾಯ್ದೆ ಪ್ರಕಾರ ಗುತ್ತಿಗೆ ನೌಕರರ ಕ್ಷೇಮಾಭಿವೃದ್ಧಿ ಕಾಯ್ದೆ ಜಾರಿಗೊಳಿಸಿ ಭದ್ರತೆ ಕಲ್ಪಿಸಬೇಕು. ಕಾನೂನು ತೊಡಕುಗಳು ಇಲ್ಲದಂತೆ ಸಂಸತ್ತಿನಲ್ಲಿ ನಿರ್ಣಯ ಕೈಗೊಂಡು ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಹೊರಗುತ್ತಿಯಲ್ಲಿರುವ ಎಲ್ಲ ನೌಕರರಿಗೆ ಗುತ್ತಿಗೆದಾರರ ಹಾಗೂ ಮಧ್ಯವರ್ತಿಗಳಿಲ್ಲದೇ ನೇರವಾಗಿ ಇಲಾಖೆಯಿಂದಲೇ ವೇತನ ಪಾವತಿಸಬೇಕು. ಒಳಗುತ್ತಿಗೆ ಆಧಾರದಡಿ ಕೆಲಸ ಮಾಡುವ ನೌಕರರಿಗೆ ಸೌಲಭ್ಯ ಕಲ್ಪಿಸಬೇಕು. ಸರ್ಕಾರಿ ನೌಕರರಿಗೆ ನೀಡುವ ಜ್ಯೋತಿ ಸಂಜೀವಿನಿ ವೈದ್ಯಕೀಯ ಯೋಜನೆಯನ್ನು ಆರೋಗ್ಯ ಇಲಾಖೆ ಗುತ್ತಿಗೆ ನೌಕರರಿಗೆ ಅನ್ವಯಿಸಬೇಕು.

ಗುತ್ತಿಗೆ ನೌಕರರಿಗೆ ಸರ್ಕಾರಿ ನೇಮಕಾತಿಯಲ್ಲಿ ವಯಸ್ಸಿನ ಮಿತಿ ಹೆಚ್ಚಿಸಬೇಕು. ಸೇವಾನುಭವಕ್ಕೆ ತಕ್ಕಂತೆ ಸೇವಾಂಕ ನೀಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು.

ವೇದಿಕೆ ಸದಸ್ಯರಾದ ವೆಂಕೋಬ ಸರ್ಜಾಪುರ, ಮಂಜುನಾಥ ಸ್ವಾಮಿ, ಪ್ರವೀಣಕುಮಾರ ಹಿರೇಮಠ, ಗುರುಪ್ರಸಾದ ಹಿರೇಮಠ, ಸಂಧ್ಯಾ, ಡಾ| ಜೀವನೇಶ ಹಿರೇಮಠ, ಮಹಾಂತೇಶ ಬ್ಯಾಳಿ, ಡಾ| ನಾಗರಾಜ, ರವಿ ಶುಕ್ಲಾ, ಕೃಷ್ಣವೇಣಿ, ನಬಿಸಾಬ್‌, ನಾಗರಾಜ ವರ್ಮಾ ಸೇರಿ ನೂರಾರು ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

prithvi shaw

Mumbai Cricket: ಸಚಿನ್‌ ತೆಂಡೂಲ್ಕರ್‌ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

ಸಿಎಸ್‌ ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್‌ ವಿರುದ್ದ ಫಿಕ್ಸಿಂಗ್‌ ಆರೋಪ ಮಾಡಿದ ಲಲಿತ್ ಮೋದಿ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

prithvi shaw

Mumbai Cricket: ಸಚಿನ್‌ ತೆಂಡೂಲ್ಕರ್‌ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Teacher: ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.