ಮೋದಿಜಿ ಯುವಕರಿಗೆ ಉದ್ಯೋಗ ಕೊಡಿ


Team Udayavani, Feb 12, 2018, 4:30 PM IST

ray-1.jpg

ಸಿಂಧನೂರು: ಬಸವಣ್ಣ ಕಾಯಕವೇ ಕೈಲಾಸ ಎಂದಿದ್ದಾರೆ. ದೇಶದ ಎಲ್ಲ ಯುವಕರು ಬಸವಣ್ಣನ ಸಿದ್ಧಾಂತ ಒಪ್ಪುತ್ತಾರೆ. ದೇಶದ ಪ್ರತಿ ಯುವಕ ಉದ್ಯೋಗ ಮಾಡಲು ಉತ್ಸುಕನಾಗಿದ್ದಾನೆ. ಯುವಕರಿಗೆ ಯಾವುದೇ ಪುಗಸಟ್ಟೆ ಬಹುಮಾನ ಬೇಕಿಲ್ಲ. ಉದ್ಯೋಗಾವಕಾಶ ಬೇಕು. ಮೋದಿಜಿ ಯುವಕರಿಗೆ ಯಾವಾಗ ಉದ್ಯೋಗ ಕೊಡ್ತಿರಿ ಹೇಳಿ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಪ್ರಶ್ನಿಸಿದರು.

ರವಿವಾರ ಸಂಜೆ ನಗರಕ್ಕೆ ರವಿವಾರ ಸಂಜೆ ಆಗಮಿಸಿದ ಜನಾಶೀರ್ವಾದ ಯಾತ್ರೆ ಗಾಂಧಿ ವೃತ್ತದಲ್ಲಿ ಆಯೋಜಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಿ ಹೋದ್ರೂ ಮೇಡ್‌ ಇನ್‌ ಚೈನಾ ಕಾಣುತ್ತಿದೆ. ವಾಚ್‌, ಮೊಬೈಲ್‌ ಏನೇ ಖರೀದಿಸಿದ್ರೂ ಮೇಡ್‌ ಇನ್‌ ಚೈನಾದ್ದೇ 24 ಗಂಟೆಯಲ್ಲಿ ಚೈನಾ 50 ಸಾವಿರ ಉದ್ಯೋಗ ಸೃಷ್ಟಿಸಿದರೆ, ನಮ್ಮ ದೇಶ ಕೇವಲ 450 ಉದ್ಯೋಗ ಸೃಷ್ಟಿಸುತ್ತಿದೆ ಎಂದರು.

ಪ್ರಧಾನಿ ಮೋದಿಜಿ ಕೇವಲ ಕಾಂಗ್ರೆಸ್‌ ಬಗ್ಗೆ, ಗಾಂಧಿ ಕುಟುಂಬದ ಬಗ್ಗೆ ಮಾತನಾಡುತ್ತಿದ್ದಾರೆ. ದೇಶದ ಯುವಕರು ಉದ್ಯೋಗ ಕೇಳುತ್ತಿದ್ದಾರೆ. ಕೇಂದ್ರ ಸರ್ಕಾರ ಇನ್ನುಳಿದ ಒಂದು ವರ್ಷದ ಅವಧಿಯಲ್ಲಿಯಾದರೂ ಉತ್ತಮ ಕಾರ್ಯ ಮಾಡಲಿ. ಬಸವಣ್ಣನವರ ಕಾಯಕವೇ ಕೈಲಾಸ ಪರಿಕಲ್ಪನೆ ಮೈಗೂಡಿಸಿಕೊಳ್ಳಲಿ ಎಂದು ಸಲಹೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ, ರಾಜ್ಯ ಕಾಂಗ್ರೆಸ್‌ ಸರ್ಕಾರ ಐದು ವರ್ಷಗಳಲ್ಲಿ ಯಾವುದೇ ಭ್ರಷ್ಟಾಚಾರ ಮಾಡಿಲ್ಲ ಎಂದರು. 

ರಾಹುಲ್‌ ಬಸ್‌ಗೆ ಅಡ್ಡಿ: ಸಿಂಧನೂರಿಗೆ ಆಗಮಿಸಿದ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಸಂಚರಿಸುತ್ತಿದ್ದ ಬಸ್‌ಗೆ ರೈತರು ಅಡ್ಡ ಬಂದ ಮತ್ತು ಸದಾಶಿವ ವರದಿ ಅಂಗೀಕಾರಕ್ಕೆ ಆಗ್ರಹಿಸಿ ಹೋರಾಟಗಾರರು ಪ್ರತಿಭಟನೆ ನಡೆಸಿದರು. ಗೊರೇಬಾಳ ಬಳಿ 15 ಜನ ರೈತರು ಅಡ್ಡ ಬಂದು ಬಸ್‌ ತಡೆ ಹಿಡಿದ ಘಟನೆ ನಡೆಯಿತು. ಬಳಿಕ ಭದ್ರತಾ ಸಿಬ್ಬಂದಿ ಪ್ರತಿಭಟನಾಕಾರರನ್ನು ನಿಯಂತ್ರಿಸಿದ ಬಳಿಕ ಬಸ್‌ ಮುಂದೆ ಸಾಗಿತು.
 
ರಾಜ್ಯ ಯುವ ಕಾಂಗ್ರೆಸ್‌ ಅಧ್ಯಕ್ಷ ಬಸನಗೌಡ ಬಾದರ್ಲಿ ಸ್ವಾಗತಿಸಿದರು. ಕೆಪಿಸಿಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭೆ ಕಾಂಗ್ರೆಸ್‌ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಸದಸ್ಯ ಕೆ.ಎಚ್‌. ಮುನಿಯಪ್ಪ, ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌, ಸಚಿವ, ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಎಂ. ರೇವಣ್ಣ, ಶಾಸಕರಾದ ಹಂಪನಗೌಡ ಬಾದರ್ಲಿ, ಎನ್‌.ಎಸ್‌. ಬೋಸರಾಜ್‌, ಎಸ್‌.ಆರ್‌. ಪಾಟೀಲ್‌, ಸೇರಿದಂತೆ ಅನೇಕರು
ವೇದಿಕೆಯಲ್ಲಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಸಾವಿರಾರು ಕಾಂಗ್ರೆಸ್‌ ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಿದ್ದರು. 

ಪ್ರಧಾನಿ ಮೋದಿ ಅವರು ಹೋದಲ್ಲೆಲ್ಲ 35 ವರ್ಷದ ಹಿಂದಿನ ವಿಷಯ ಹೇಳುವುದನ್ನು ಬಿಟ್ಟು ಮುಂದೆ ನೋಡುವ ಜವಾಬ್ದಾರಿ ತೋರಬೇಕು. ಭೂತ ಕಾಲ ಮುಖ್ಯವಲ್ಲ, ಭವಿಷ್ಯ ನೋಡಬೇಕು. ವಿಕೆಟ್‌ ಕೀಪರ್‌ನನ್ನು ನೋಡಿ ಬ್ಯಾಟಿಂಗ್‌ ಮಾಡಿದ್ರೆ ಔಟ್‌ ಆಗ್ತಾರೆ.
 ರಾಹುಲ್‌ ಗಾಂಧಿ ಎಐಸಿಸಿ ಅಧ್ಯಕ 

ಟಾಪ್ ನ್ಯೂಸ್

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.