ಆಶಾ ಕಾರ್ಯಕರ್ತೆಯರ ಕುಟುಂಬಕ್ಕೆ ಪರಿಹಾರ ನೀಡಿ
Team Udayavani, Feb 15, 2022, 2:36 PM IST
ಲಿಂಗಸುಗೂರು: ಇತ್ತೀಚೆಗೆ ಹಾವೇರಿ ಜಿಲ್ಲೆ ಶಿಗ್ಗಾವಿಯ ಆಶಾ ಕಾರ್ಯಕರ್ತೆಯ ಪತಿಯು ವ್ಯಾಕ್ಸಿನ್ ಕ್ಯಾರಿಯರ್ ತರುವ ಸಂದರ್ಭದಲ್ಲಿ ಅಪಘಾತಕ್ಕೀಡಾಗಿ ಮೃತಪಟ್ಟಿದ್ದು, ನೊಂದ ಆಶಾ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಆಶಾ ಕಾರ್ಯಕರ್ತೆಯರಿಗೆ ತಮ್ಮದಲ್ಲದ ಮತ್ತು ಯಾವುದೇ ಇಲಾಖೆಯೇತರ ಕೆಲಸಗಳನ್ನು ಒತ್ತಾಯ ಪೂರ್ವಕವಾಗಿ ವಹಿಸಬಾರದು. ವ್ಯಾಕ್ಸಿನ್ ಕ್ಯಾರಿಯರ್ ತಲುಪಿಸುವ ಸಂದರ್ಭದಲ್ಲಿ ಪತಿಯನ್ನು ಕಳೆದುಕೊಂಡ ಆಶಾ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಈ ಪ್ರಕರಣದ ಬಗ್ಗೆ ನಿಸ್ಪಕ್ಷಪಾತ ತನಿಖೆ ನಡೆಸಿ, ವ್ಯಾಕ್ಸಿನ್ ಕ್ಯಾರಿಯರ್ ತರಲು ಒತ್ತಡ ಹೇರಿ ಈ ಘಟನೆಗೆ ಕಾರಣರಾದ ಸಿಬ್ಬಂದಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ. ಭವಿಷ್ಯದಲ್ಲಿ ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಿ. ಈ ಎಲ್ಲ ಸಮಸ್ಯೆಗಳ ಪರಿಹಾರಕ್ಕಾಗಿ ಅಧಿಕೃತ ಜ್ಞಾಪನಾ ಪತ್ರ, ನಡಾವಳಿಗಳನ್ನು ಜಿಲ್ಲೆಯ ಪ್ರತಿ ಪಿಎಚ್ ಸಿಗಳಲ್ಲಿ ಜಾರಿಗೆ ತರುವಂತೆ ಆಗ್ರಹಿಸಿದರು.
ಆಶಾ ಸಂಘದ ತಾಲೂಕು ಗೌರವ ಅಧ್ಯಕ್ಷ ಶರಣಪ್ಪ ಉದಾºಳ, ತಾಲೂಕು ಅಧ್ಯಕ್ಷ ನಗುಮಿ, ದೇವಮ್ಮ ಮಸ್ಕಿ, ಮಹಾಂತಮ್ಮ ಮಸ್ಕಿ, ಶೋಭ ಸಂತೆಕೆಲ್ಲೂರು, ಶೈಲಜಾ ಮುದ್ಗಲ್, ಗಂಗಮ್ಮ, ಉದಾಸಮ್ಮ ಮಾಕಪುರ, ನಾಗರತ್ನ ಮಾಕಪುರ, ನಾಗಮ್ಮ ಸಜ್ಜಲಗುಡ್ಡು, ಶೋಭ ಈಚನಾಳ, ಜಯಮ್ಮ ಈಚನಾಳ, ನಾಗಮ್ಮ ಈಚನಾಳ, ಶಾಂತ ಹಟ್ಟಿ, ಬಸಮ್ಮ ಹಟ್ಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.