ಹೆಕ್ಟೇರ್‌ಗೆ 13,500 ಪರಿಹಾರ: ಸಂಗಣ್ಣ
Team Udayavani, Apr 19, 2020, 1:55 PM IST
ಗೊರೇಬಾಳ: ಬೆಳೆ ಹಾನಿ ಜಮೀನಿಗೆ ಸಂಸದ ಕರಡಿ ಸಂಗಣ್ಣ ಭೇಟಿ ನೀಡಿ ಪರಿಶೀಲಿಸಿದರು
ಗೊರೇಬಾಳ: ರಾಯಚೂರು-ಕೊಪ್ಪಳ ಜಿಲ್ಲೆಯಲ್ಲಿ ಭತ್ತದ ಬೆಳೆ ಹಾನಿಗೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿಗಳು 45 ಕೋಟಿ ರೂ. ಘೋಷಣೆ ಮಾಡಿದ್ದಾರೆ. ಅದರಂತೆ ಪ್ರತಿ ಹೆಕ್ಟೇರ್‌ಗೆ 13,500 ಸಾವಿರ ರೂ. ಪರಿಹಾರ ಸಿಗಲಿದೆ ಎಂದು ಸಂಸದ ಕರಡಿ ಸಂಗಣ್ಣ ತಿಳಿಸಿದರು.
ಬಸ್ಸಾಪುರದ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು. ಸರ್ಕಾರ ರೈತಪರವಾಗಿದೆ ಎಂದರು. ಅಧಿಕಾರಿಗಳು ಕೂಡಲೇ ಸರ್ವೆ ಕಾರ್ಯ ನಡೆಸಿ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕು. ಕಳೆದ 15 ದಿನಗಳ ಹಿಂದೆ ಸುರಿದ ಅಕಾಲಿಕ ಮಳೆಯಿಂದಾಗಿ ಹಾನಿಗೊಳಗಾದ ಪ್ರದೇಶಗಳ ಸಿದ್ಧಪಡಿಸಲಾದ ವರದಿಯಲ್ಲಿ ಈಗ ಹಾನಿಯಾದ ಪ್ರದೇಶದ ಮಾಹಿತಿ ಸೇರ್ಪಡೆ ಮಾಡಿ ರೈತರಿಗೆ ಪರಿಹಾರ ಕೊಡಿಸುವಲ್ಲಿ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಶಾಸಕ ವೆಂಕಟರಾವ್ ನಾಡಗೌಡ, ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ, ಕಾಡಾ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ಜಿಪಂ ಸದಸ್ಯಅಮರೇಗೌಡ ವಿರುಪಾಪುರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.