ಪತ್ರಕರ್ತರ ಕಡೆಗಣನೆ ದುರದೃಷ್ಟಕರ
Team Udayavani, May 4, 2020, 4:22 PM IST
ಗೊರೇಬಾಳ: ಪತ್ರಕರ್ತರು ಮತ್ತು ಪತ್ರಿಕಾ ವಿತರಕರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಿಸಲಾಯಿತು.
ಗೊರೇಬಾಳ: ಕೋವಿಡ್ ವೈರಸ್ ಭೀತಿಯಲ್ಲೂ ಜೀವದ ಹಂಗು ತೊರೆದು ಹಗಲಿರುಳು ಸರ್ಕಾರ ಮತ್ತು ಜನರ ನಡುವೆ ಸೇತುವೆಯಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಪತ್ರಕರ್ತರನ್ನು ಆಳುವ ಸರ್ಕಾರಗಳೇ ಕಡೆಗಣಿಸುತ್ತಿರುವುದು ದುರದೃಷ್ಟಕರ ಸಂಗತಿ ಎಂದು ಹಿರಿಯ ಪತ್ರಕರ್ತ ಪ್ರಹ್ಲಾದಗುಡಿ ವಕೀಲ ವಿಷಾದ ವ್ಯಕ್ತಪಡಿಸಿದರು.
ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮರೇಗೌಡ ವಿರುಪಾಪುರ ನಿವಾಸದಲ್ಲಿ ರವಿವಾರ ನಡೆದ ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನಾಚರಣೆ ಹಾಗೂ ಪತ್ರಕರ್ತರು ಮತ್ತು ಪತ್ರಿಕಾ ವಿತರಕರಿಗೆ ಆಹಾರದ ದಿನಸಿ ಸಾಮಗ್ರಿಗಳ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಲಾಕ್‌ಡೌನ್ ಪರಿಣಾಮದಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಸ್ಥಳೀಯ ಪತ್ರಿಕೆಗಳು ಮುದ್ರಣವಾಗದೆ ಸ್ಥಗಿತಗೊಂಡಿವೆ. ಸಿಬ್ಬಂದಿಗೆ ಸಂಬಳ ಕೊಡಲಾಗುತ್ತಿಲ್ಲ. ಕೋವಿಡ್ ವೈರಸ್ ಕುರಿತು ಗಂಟೆಗಟ್ಟಲೇ ಭಾಷಣ ಬಿಗಿಯುವ ಪ್ರಧಾನಿ ಮೋದಿ ಪತ್ರಕರ್ತರಿಗೆ ಕನಿಷ್ಠ ವಿಮೆ ಸೌಲಭ್ಯ ಘೋಷಿಸಿಲ್ಲ. ಬರೀ ಭಾಷಣದಿಂದ ಹೊಟ್ಟೆ ತುಂಬುವುದಿಲ್ಲ ಎಂಬುದನ್ನು ಅರಿತುಕೊಳ್ಳಬೇಕು. ಆದ್ದರಿಂದ ಪತ್ರಕರ್ತರ ನೋವನ್ನು ವಿವಿಧ ರಾಜಕೀಯ ಪಕ್ಷಗಳ ನಾಯಕರು ಸರ್ಕಾರದ ಗಮನಕ್ಕೆ ತರಬೇಕು ಎಂದು ಒತ್ತಾಯಿಸಿದರು.
ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮರೇಗೌಡ ವಿರುಪಾಪುರ ಮಾತನಾಡಿ, ಕೋವಿಡ್ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಕಠಿಣ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಜನರು ಸಹ ಸರ್ಕಾರದ ಆದೇಶ ಪಾಲನೆ ಮಾಡುವ ಮೂಲಕ ಕೋವಿಡ್ ವೈರಸ್ ವಿರುದ್ಧ ಹೋರಾಡಬೇಕು ಎಂದು ಹೇಳಿದರು.
ಕಾಡಾ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ, ಬಿಜೆಪಿ ಮುಖಂಡರಾದ ದೇವೇಂದ್ರಪ್ಪ ಯಾಪಲಪರ್ವಿ, ಪರಮೇಶಪ್ಪ ದಢೇಸುಗೂರು, ರುದ್ರಗೌಡ, ಈರೇಶ ಇಲ್ಲೂರು, ಜಡಿಯಪ್ಪ ವಕೀಲ, ಮಲ್ಲಿಕಾರ್ಜುನ, ರಾಮನಗೌಡ, ಮಲ್ಲಿಕಾರ್ಜುನ ಜೀನೂರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.