ಬೆಳೆ ಪರಿಹಾರದಲ್ಲಿ ಸರ್ಕಾರ ತಾರತಮ್ಯ
Team Udayavani, Nov 29, 2021, 4:25 PM IST
ಸಿರವಾರ: ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯ ರೈತರಿಗೆ ಬೆಳೆ ಪರಿಹಾರ ಅನುದಾನ ನೀಡುವಲ್ಲಿ ಸರ್ಕಾರ ತಾರತಮ್ಯ ಮಾಡಿದೆ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಆರೋಪಿಸಿದರು.
ಚಾಗಭಾವಿ ಕ್ಯಾಂಪ್‌ನಲ್ಲಿ ಹಾನಿಯಾದ ಭತ್ತದ ಬೆಳೆ ವೀಕ್ಷಿಸಿದ ನಂತರ ಮಾತನಾಡಿದ ಅವರು, ರಾಜ್ಯದ ಎಲ್ಲ ಜಿಲ್ಲೆಗೆ ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದೆ. ಆದರೆ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯ ರೈತರಿಗೆ ಪರಿಹಾರದ ಅನುದಾನ ನೀಡುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ತೋರಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಮಾನ್ವಿ ವಿಧಾನಸಭಾ ಕ್ಷೇತ್ರದ ಮಾನ್ವಿ ಮತ್ತು ಸಿರವಾರ ತಾಲೂಕಿನ ರೈತರ ಬಹಳಷ್ಟು ಭತ್ತ, ಹತ್ತಿ ನಷ್ಟವಾಗಿದೆ. ನಷ್ಟವಾದ ಬೆಳೆಗೆ ಸುಮಾರು 1 ಎಕರೆಗೆ 30 ಸಾವಿರ ರೂ.ನಂತೆ ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದರು.
ಈ ವೇಳೆ ರಾಜ್ಯ ಜೆಡಿಎಸ್ ಯುವ ಘಟಕದ ಉಪಾಧ್ಯಕ್ಷ ರಾಜಾ ರಾಮಚಂದ್ರ ನಾಯಕ, ತಹಶೀಲ್ದಾರ್ ವಿಜಯೇಂದ್ರ ಹುಲಿ ನಾಯಕ, ಕಂದಾಯ ನಿರೀಕ್ಷಕ ಶ್ರೀನಾಥ, ಅಯ್ಯನಗೌಡ ಏರಡ್ಡಿ, ಜೆಡಿಎಸ್ ಮುಖಂಡ ನಾಗರಾಜ್ ಬೋಗಾವತಿ, ಗೋಪಾಲ ನಾಯಕ ಹರವಿ, ಸೂಗೂರಯ್ಯ ಸ್ವಾಮಿ ಹಿರೇಮಠ, ಅಮರೇಶ ಗೌಡ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.