ಸಮರ್ಪಕ ಪಡಿತರ ವಿತರಿಸಲು ಜಿಲ್ಲಾಧಿಕಾರಿಗೆ ಗ್ರಾಮಸ್ಥರ ಆಗ್ರಹ
Team Udayavani, Dec 31, 2017, 1:11 PM IST
ಕವಿತಾಳ: ರಾಯಚೂರಿ ನಿಂದ ಮಸ್ಕಿಗೆ ತೆರಳುತ್ತಿದ್ದ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ಅವರನ್ನು ರಸ್ತೆ ಮಧ್ಯದಲ್ಲಿ
ತೆಡೆದ ಬಸಾಪುರ ಗ್ರಾಮಸ್ಥರು, ನ್ಯಾಯಬೆಲೆ ಅಂಗಡಿಗಳಲ್ಲಿ ಸಮರ್ಪಕ ಪಡಿತರ ಧಾನ್ಯ ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಕಳೆದ ನಾಲ್ಕು ತಿಂಗಳಿಂದ ಪಡಿತರ ಆಹಾರಧಾನ್ಯವನ್ನು ಅಸಮರ್ಪಕವಾಗಿ ವಿತರಿಸುತ್ತಿದ್ದಾರೆ. ಈ ಕುರಿತು ಹಲವು
ಬಾರಿ ಆಹಾರ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ, ಯಾವುದೆ ಕ್ರಮ ಕೈಗೊಂಡಿಲ್ಲ. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.
ಜಿಲ್ಲಾಧಿಕಾರಿಗಳು ಆಹಾರ ಇಲಾಖೆ ಶಿರಸ್ತೇದಾರ ಅಮರೇಶ ಅವರಿಗೆ ಮೊಬೈಲ್ ಕರೆ ಮಾಡಿ ತಕ್ಷಣ ಸ್ಥಳಕ್ಕೆ ಆಗಮಿಸುವಂತೆ ಸೂಚಿಸಿದರು. ಎರಡು ತಾಸು ತಡವಾಗಿ ಆಗಮಿಸಿದ ಶಿರಸ್ತೇದಾರ ಅಮರೇಶ ಮತ್ತು ಗ್ರಾಮ
ಲೆಕ್ಕಾಧಿಕಾರಿ ಸದಾಕಲಿ ಅವರನ್ನು ಜಿಲ್ಲಾಧಿಕಾರಿಗಳು ತೀವ್ರ ತರಾಟೆಗೆ ತೆಗೆದುಕೊಂಡರು.
ಪಡಿತರ ವಿತರಣಾ ಕೇಂದ್ರದ ಪರವಾನಗಿಯನ್ನು ಕೂಡಲೇ ರದ್ದುಗೊಳಿಸಿ, ವ್ಯವಸ್ಥಾಪಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಈ ಕುರಿತು ತಕ್ಷಣ ತಮಗೆ ಲಿಖೀತ ವರದಿ ನೀಡುವಂತೆ ಕಟ್ಟುನಿಟ್ಟಿನ ಆದೇಶ ನೀಡಿದರು. ಜಿಲ್ಲಾಧಿಕಾರಿ ತೆರಳಿದ ನಂತರ ಸ್ಥಳಕ್ಕೆ ಆಗಮಿಸಿದ ಆಹಾರ ಇಲಾಖೆ ಉಪನಿರ್ದೇಶಕ ಪ್ರಭಾಕರ ವಾಲ್ಗದ್ ಪರಿಶೀಲಿಸಿದರು. ಸಾರ್ವಜನಿಕರು ಅಧಿಕಾರಿಗಳ ಮಧ್ಯ ವಾಗ್ವಾದ ನಡೆಯಿತು. ಗ್ರಾಮದ ಮುಖಂಡರು, ಯುವಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.