ವಿಪತ್ತು ನಿರ್ವಹಣೆ ಸಮರ್ಥವಾಗಿ ನಿಭಾಯಿಸಿ
Team Udayavani, Apr 26, 2022, 2:29 PM IST
ರಾಯಚೂರು: ಕೆಲ ತಿಂಗಳಲ್ಲಿ ಮತ್ತೆ ಮಳೆಗಾಲು ಶುರುವಾಗಲಿದ್ದು, ಉಭಯ ನದಿಗಳಲ್ಲಿ ಎದುರಾಗುವ ನೆರೆ ಸೇರಿದಂತೆ ಇನ್ನಿತರ ವಿಪತ್ತು ನಿರ್ವಹಣೆಯನ್ನು ಸಮರ್ಥವಾಗಿ ನಿರ್ವಹಣೆ ಮಾಡುವಂತೆ ಜಿಪಂ ಸಿಇಒ ನೂರ್‌ಜಹಾರ್ ಖಾನ್ ಸೂಚಿಸಿದರು.
ಜಿಪಂ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಕುಡಿಯುವ ನೀರು, ಆರೋಗ್ಯ ಕ್ಷೇತ್ರಕ್ಕೆ ವಿಶೇಷ ಒತ್ತು ನೀಡಬೇಕು. ಕಳೆದ ಬಾರಿ ಕೃಷ್ಣಾ ನದಿಯಲ್ಲಿ ಭೀಕರ ಪ್ರವಾಹ ಹಾಗೂ ಅತಿವೃಷ್ಟಿ ಎದುರಾಗಿತ್ತು. ಆಗ ಜನ ಜಾನುವಾರು ಸಾಕಷ್ಟು ಸಂಕಷ್ಟಕ್ಕೆ ಸಿಲುಕಿದ್ದರು. ನದಿಪಾತ್ರಗಳಲ್ಲಿ, ನಡುಗಡ್ಡೆಗಳಲ್ಲಿ ವಾಸಿಸುವ ಜನರಿಗೆ ಸಮಸ್ಯೆ ಎದುರಾಗುವ ಕಾರಣ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು ಎಂದರು.
ಕಳೆದ ಬಾರಿ ಅತಿವೃಷ್ಟಿ ವೇಳೆ ಕೃಷ್ಣಾ, ತುಂಗಭದ್ರಾ ನದಿ ಪಾತ್ರಗಳಲ್ಲಿ ಎದುರಾದ ಸವಾಲುಗಳನ್ನು ಗಮನದಲ್ಲಿ ಇರಿಸಿಕೊಳ್ಳಬೇಕು. ಹಿಂದೆ ಎದುರಾದ ಸಂಕಷ್ಟಗಳನ್ನು ಸಮರ್ಥವಾಗಿ ಎದುರಿಸಲು ಕೈಗೊಂಡ ಕ್ರಮಗಳನ್ನು ಆಧರಿಸಿ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಕುಡಿಯುವ ನೀರು, ಆರೋಗ್ಯ ಹಾಗೂ ಮೇವು ಸಂಗ್ರಹಣೆಗೆ ಹೆಚ್ಚಿನ ಒತ್ತು ನೀಡಬೇಕು. ಮೇವಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು. ತಾಲೂಕು ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸಮರ್ಪಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿರುವ ಎಲ್ಲ ಆಸ್ಪತ್ರೆಗಳ ಸ್ವಚ್ಛಗೊಳಿಸಬೇಕು. ಉತ್ತಮ ಪರಿಸರದ ಬಗ್ಗೆ ಅಗತ್ಯ ಕಾರ್ಯಕ್ರಮ ಕೈಗೊಳ್ಳುವ ಬಗ್ಗೆ ಯಾವುದೆ ಸಮಸ್ಯೆ ಇದ್ದರೂ ಕೂಡಲೇ ಮೇಲಧಿಕಾರಿಗಳ ಗಮನಕ್ಕೆ ತರಬೇಕು. ಅಲ್ಲದೇ, ಸಾರ್ವಜನಿಕರೊಂದಿಗೆ ಸಿಬ್ಬಂದಿ ಉತ್ತಮ ಬಾಂಧವ್ಯ ಹೊಂದಿರಬೇಕು. ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸ್ವತ್ಛತೆಗೆ ವಿಶೇಷ ಆದ್ಯತೆ ನೀಡುವಂತೆ ನಿರ್ದೇಶನ ನೀಡಿದರು.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯದರ್ಶಿ ಡಾ| ಕೆ.ಆರ್.ದುರುಗೇಶ್, ಸಹಾಯಕ ಆಯುಕ್ತ ರಂಜನಿಕಾಂತ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್., ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಇ ಮೋನಿಕಾ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ|ಸುರೇಂದ್ರ ಬಾಬು, ಜಿಲ್ಲಾ ನಗರಾಭಿವೃದ್ಧಿ ಕೋಶ ಅಧಿಕಾರಿ ಮಹೇಂದ್ರ, ಪಶು ಸಂಗೋಪನಾ ಇಲಾಖೆಯ ಉಪ ನಿರ್ದೇಶಕ ಶಿವಣ್ಣ, ನಗರಸಭೆಯ ಪೌರಾಯುಕ್ತ ಕೆ.ಮುನಿಸ್ವಾಮಿ ಸೇರಿದಂತೆ ಇತರರು ಸಭೆಯಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.