ನರೇಗಾದಡಿ ಕೆಲಸ ನೀಡಲು ಆಗ್ರಹಿಸಿ ಪ್ರತಿಭಟನೆ
Team Udayavani, Jul 5, 2020, 5:06 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹಟ್ಟಿ ಚಿನ್ನದ ಗಣಿ: ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲು ಆಗ್ರಹಿಸಿ ವಿವಿಧ ಗ್ರಾಮಗಳ ಕೂಲಿಕಾರ್ಮಿಕರು ಗೆಜ್ಜಲಗಟ್ಟಾ ಗ್ರಾಪಂ ಎದುರು ಧರಣಿ ನಡೆಸಿದರು.
ಕೋವಿಡ್ ಲಾಕ್‌ಡೌನ್‌ನಿಂದಾಗಿ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಮರಳಿದ್ದಾರೆ. ಬಡವರು ಮತ್ತು ಕೂಲಿಕಾರ್ಮಿಕರು ಊರಲ್ಲಿ ಕೆಲಸವೂ ಇಲ್ಲದೇ, ಕೈಯಲ್ಲಿ ಕಾಸೂ ಇಲ್ಲದೇ ಜೀವನ ನಿರ್ವಹಣೆಗೆ ತೊಂದರೆ ಆಗಿದೆ. ನರೇಗಾದಡಿ ಕೆಲಸ ನೀಡಲು ಅರ್ಜಿ ಸಲ್ಲಿಸಿದ್ದು, 15 ದಿನದಲ್ಲಿ ಕೆಲಸ ನೀಡಬೇಕಿತ್ತು. ಆದರೆ ಪಿಡಿಒ ಉದ್ಯೋಗ ನೀಡದೇ ನಿರ್ಲಕ್ಷಿಸಿದ್ದಾರೆ. ಉದ್ಯೋಗ ನೀಡಲಾಗದಿದ್ದರೆ ನಿರುದ್ಯೋಗ ಭತ್ಯೆಯನ್ನಾದರೂ ನೀಡಬೇಕೆಂದು ಆಗ್ರಹಿಸಿದರು.
ಪಂಚಾಯಿತಿ ಪಿಡಿಒ ನಜೀರ್‌ಸಾಬ್ ಹಾಗೂ ಕಾರ್ಯದರ್ಶಿ ಗುಂಡುರಾವ್ ಕೂಲಿಕಾರರನ್ನು ಸಮಾಧಾನ ಪಡಿಸಲು ಮುಂದಾದರೂ ಒಪ್ಪದ ಜನತೆ ತಾಪಂ ಇಒ ಸ್ಥಳಕ್ಕೆ ಆಗಮಿಸಬೇಕೆಂದು ಪಟ್ಟು ಹಿಡಿದರು. ಗೆಜ್ಜಲಗಟ್ಟಾ, ನಿಲೋಗಲ್, ಚಿಕ್ಕನಗನೂರು ಸೇರಿದಂತೆ ಇತರ ಗ್ರಾಮಗಳ ಕೂಲಿ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.