ಅಡಿಗಲ್ಲು ಹಾಕಿದ್ರು, ಕೆಲಸ ಮಾಡೋದು ಮರೆತ್ರು!
Team Udayavani, Aug 13, 2018, 4:00 PM IST
ಲಿಂಗಸುಗೂರು: ಕಾಮಗಾರಿಗೆ ಅಡಿಗಲ್ಲು ಹಾಕೋದು ಬೇಗ ಕೆಲಸ ಶುರು ಮಾಡಲಿ ಅಂತ. ಆದರೆ ಪಟ್ಟಣದಲ್ಲಿ ಕಾಮಗಾರಿವೊಂದಕ್ಕೆ ಅಡಿಗಲ್ಲು ಹಾಕಿ ಎರಡು ತಿಂಗಳು ಗತಿಸುತ್ತಿದ್ದರೂ ಇನ್ನೂ ಕೆಲಸ ಆರಂಭವಾಗಿಲ್ಲ..
ಪಟ್ಟಣದ ಲಕ್ಷ್ಮೀದೇವಿ ದೇವಸ್ಥಾನದ ಬಳಿ ನಗರೋತ್ಥಾನ ಎರಡನೇ ಹಂತದಲ್ಲಿ 90 ಲಕ್ಷ ರೂ/ ಅನುದಾನದಡಿ
ಸಿಸಿ ಚರಂಡಿ ಕಾಮಗಾರಿಗೆ ಗುತ್ತಿಗೆ ನೀಡಲಾಗಿದೆ. ಈ ಕಾಮಗಾರಿಗೆ ಕಳೆದ ಜೂನ್ ತಿಂಗಳಲ್ಲಿ ಶಾಸಕ ಡಿ.ಎಸ್.
ಹೂಲಗೇರಿ ಅಡಿಗಲ್ಲು ನೆರವೇರಿಸಿದ್ದರು. ಆದರೆ ಈವರೆಗೂ ಕಾಮಗಾರಿ ಆರಂಭವಾಗದೇ ಇರುವುದು ವಿಪರ್ಯಾಸದ ಸಂಗತಿಯಾಗಿದೆ.
ತೊಂದರೆ: ಪಟ್ಟಣದ ರಾಯಚೂರು ರಸ್ತೆಯಲ್ಲಿ ಚರಂಡಿ ವ್ಯವಸ್ಥೆ ಇಲ್ಲದೇ, ಸುತ್ತಮುತ್ತಲಿನ ಮನೆಗಳಲ್ಲಿ ಬಳಸಿದ
ನೀರು ಹಾಗೂ ಮಳೆ ಬಂದಾಗ ನೀರು ಬೆಳಗಾವಿ-ಹೈದರಾಬಾದ್ ರಾಜ್ಯ ಹೆದ್ದಾರಿ ಮೇಲೆ ನಿಲ್ಲುತ್ತಿದೆ. ಈ
ನೀರಿನ ಮೇಲೆ ನಿತ್ಯವೂ ಸಾವಿರಾರು ವಾಹನಗಳು ಸಂಚರಿಸುವುದರಿಂದ ರಸ್ತೆಯಲ್ಲಿ ದೊಡ್ಡ ಗುಂಡಿ ಬಿದ್ದು ಮತ್ತಷ್ಟು ನೀರು ನಿಲ್ಲಲು ಕಾರಣವಾಗಿದೆ. ಇದರಿಂದ ರಸ್ತೆ ಸಂಪೂರ್ಣ ಹಾಳಾಗಿದೆ. ಗುಂಡಿಯಲ್ಲಿ ನೀರು ತುಂಬಿರುವುದರಿಂದ ಇದನ್ನು ತಿಳಿಯದೇ ಬೈಕ್ ಸವಾರರು ಅವಘಡಕ್ಕೆ ಸಿಲುಕಿ ಕೈ-ಕಾಲು ಮುರಿದುಕೊಂಡ ಉದಾಹರಣೆಗಳು ಸಾಕಷ್ಟಿವೆ. ಸಾರ್ವಜನಿಕರು ಮೂಗು ಮುಚ್ಚಿಕೊಂಡು ತಿರುಗಾಡಬೇಕಾಗಿದೆ.
ಇಲ್ಲಿನ ನಿವಾಸಿಗಳು ಚರಂಡಿ ವ್ಯವಸ್ಥೆ ಕಲ್ಪಿಸುವಂತೆ ಬಹುದಿನಗಳಿಂದ ಪುರಸಭೆಗೆ ಒತ್ತಾಯಿಸಿದ್ದರಿಂದ ಪುರಸಭೆ
ನಗರೋತ್ಥಾನ ಯೋಜನೆಯಡಿ ಚರಂಡಿ ನಿರ್ಮಿಸಿಲು ಅನುದಾನ ಒದಗಿಸಿದೆ. ಆದರೆ ಗುತ್ತಿಗೆದಾರರು
ಮಾತ್ರ ಇನ್ನೂ ಕಾಮಗಾರಿ ಆರಂಭಿಸಿಲ್ಲ. ಇದರಿಂದ ಜನರು ನಿತ್ಯ ತೊಂದರೆ ಅನುಭವಿಸುವುದು ತಪ್ಪುತ್ತಿಲ್ಲ. ಈ
ಸಮಸ್ಯೆ ಪರಿಹರಿಸಲು ಪುರಸಭೆ ಆಡಳಿತಾಧಿಕಾರಿಯಾದ ತಹಶೀಲ್ದಾರ್ ಹಾಗೂ ಶಾಸಕರು ಈ ಬಗ್ಗೆ ಗಮನ ಹರಿಸಿ
ಕೂಡಲೇ ಕಾಮಗಾರಿ ಆರಂಭಿಸಲು ಗುತ್ತಿಗೆದಾರರಿಗೆ ಸೂಚಿಸಬೇಕಾಗಿದೆ.
ಚರಂಡಿ ಕಾಮಗಾರಿಗೆ ಟೆಂಡರ್ ಕರೆದು ಶಾಸಕರೇ ಅಡಿಗಲ್ಲು ಹಾಕಿದರೂ ಇನ್ನೂ ಕಾಮಗಾರಿ ಆರಂಭಗೊಳಿಸದ
ಗುತ್ತಿಗೆದಾರರ ವಿರುದ್ಧ ಕ್ರಮ ಜರಗಿಸಬೇಕೆಂದು ನಿವಾಸಿ ಹನುಮೇಶ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.