ಕೋತಿಗುಡ್ಡದ 38 ಜನ ಹೋಂ ಕ್ವಾರಂಟೈನ್
Team Udayavani, Jun 2, 2020, 7:08 AM IST
ದೇವದುರ್ಗ: ತಾಲೂಕಿನ ಕೋತಿಗುಡ್ಡ ಗ್ರಾಮದ ವ್ಯಕ್ತಿ ಅನಾರೋಗ್ಯದಿಂದ ಮೃತಪಟ್ಟ ಅಂತ್ಯ ಸಂಸ್ಕಾರದ ನಂತರ ಪಾಸಿಟಿವ್ ವರದಿ ಬಂದ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಮುಂಜಾಗೃತಾ ಕ್ರಮವಾಗಿ ಸಂಬಂಧಿಕರು ಸೇರಿ 38 ಜನರನ್ನು ಹೋಂ ಕ್ವಾರಂಟೈನ್ ಮಾಡಿದೆ ತಹಶೀಲ್ದಾರ್ ಮಧುರಾಜ ಯಾಳಗಿ ತಿಳಿಸಿದ್ದಾರೆ.
ಕೈಯಿಗಳಿಗೆ ಶೀಲು ಹಾಕಿದ್ದು, ಹೊರಗಡೆ ಬರಲಾರದಂತೆ ಕರ್ತವ್ಯಕ್ಕೆ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಪಾಸಿಟಿವ್ ಕಂಡು ಬಂದ ವ್ಯಕ್ತಿ ಪ್ರಾಥಮಿಕ ಹಂತದಲ್ಲಿದ್ದ 38 ಜನಕ್ಕೆ ಹೋಂ ಕ್ವಾರಂಟೈನ್ ಮಾಡಲಾಗಿದೆ. ಗ್ರಾಪಂನಿಂದ ಗ್ರಾಮದಲ್ಲಿ ಡಂಗೂರ ಮೂಲಕ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಾಗಿದೆ. ಮೃತ ವ್ಯಕ್ತಿ ಕುಟುಂಬಸ್ಥರನ್ನು ತೋಟದ ಮನೆಯಲ್ಲಿ ಹೋಂ ಕ್ವಾರಂಟೈನ್ ಮಾಡಲಾಗಿದೆ. ಅಂತ್ಯ ಸಂಸ್ಕಾರಕ್ಕೆ ಬಂದು ಖಾಸಗಿ ಕೊಳವೆಬಾವಿಯಲ್ಲಿ ಮುಖ ತೊಳೆದುಕೊಂಡಿರುವ ಹಿನ್ನೆಲೆಯಲ್ಲಿ ಅದರನ್ನು ಸಹ ಬಂದ್ ಮಾಡಲಾಗಿದೆ. ಇದರಿಂದಾಗಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿತ್ತು. ಆದರೆ ಇದೀಗ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಗ್ರಾಪಂನಿಂದ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ.
ಗ್ರಾಮದಲ್ಲಿ ಎಂದಿನಂತೆ ವಾತಾವರಣ ಬರಲು ತಿಂಗಳ ಕಾಲ ಬೇಕಾಗಬಹುದು. ಮೃತ ವ್ಯಕ್ತಿ ಪ್ರಾಥಮಿಕ ಸಂಪರ್ಕದಲ್ಲಿದ್ದ ಸಂಬಂಧಿ ಕರು ಸೇರಿದಂತೆ 38 ಜನರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ. ಹೊರಗಡೆ ಬರಲಾರದಂತೆ ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಗ್ರಾಪಂ ಮೂಲಕ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಯಾಳಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.