ಪ್ರವಾಸಿ ತಾಣವಾಗಲಿದೆ ಭೈರಪ್ಪನ ಬೆಟ್ಟ-ಕೋಟೆ

ಪ್ರವಾಸಿ ತಾಣವಾಗಲಿದೆ ಭೈರಪ್ಪನ ಬೆಟ್ಟ-ಕೋಟೆ ರೋಪ್‌ ವೇ ಮತ್ತು ಕೇಬಲ್‌ ಕಾರ್‌ ವ್ಯವಸ್ಥೆ ಮಾಡಬೇಕೆಂಬ ಉದ್ದೇಶ

Team Udayavani, Feb 24, 2020, 1:06 PM IST

24-February-12′

ಹೊಸದುರ್ಗ: ಹೊಸದುರ್ಗ ಪಟ್ಟಣಕ್ಕೆ ಹೊಂದಿಕೊಂಡಿರುವ ಶ್ರೀ ಭೈರವೇಶ್ವರ ಬೆಟ್ಟ ಅಲ್ಲಿರುವ ಕೋಟೆ ಚಿತ್ರದುರ್ಗ ಕೋಟೆಗಿಂತ ಮುಂಚಿತವಾಗಿ ಕಟ್ಟಿರುವ ಮೂಲ ಎಂದರೆ ಅದು ಹೊಸದುರ್ಗ ಕೋಟೆ ಎಂದು ಶಾಸಕ ಗೂಳಿಹಟ್ಟಿ ಶೇಖರ್‌ ತಿಳಿಸಿದರು.

ಪಟ್ಟಣದ ಭೈರಪ್ಪನ ಬೆಟ್ಟದಲ್ಲಿ ಭಾನುವಾರ ನಡೆದ ಸ್ವತ್ಛತಾ ಕಾರ್ಯಕ್ರಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು ಹೊಸದುರ್ಗ ಪಟ್ಟಣದ ಕೋಟೆ ಪ್ರದೇಶದ ಮಾರ್ಗವಾಗಿ ಭೈರಪ್ಪನ ಬೆಟ್ಟಕ್ಕೆ ತಲುಪುವ ಈ ಕೋಟೆ ಇತಿಹಾಸದಲ್ಲಿ ಹೆಚ್ಚು ಪ್ರಚಾರವಾಗದೇ ಇದ್ದುದರಿಂದ ಇದರ ಕಡೆ ಯಾರಿಗೂ ಸಹಾ ಹೆಚ್ಚು ಆಸಕ್ತಿ ಇರಲಿಲ್ಲ. ಯಾರ ಕಣ್ಣಿಗೂ ಸಹಾ ಕಾಣಲಿಲ್ಲ ಎನಿಸುತ್ತದೆ ಎಂಬ ಮಾತುಗಳನ್ನಾಡಿದ ಅವರು ನಾನೂ ಕೂಡ ಬೆಟ್ಟ ಹತ್ತುತ್ತಿರವುದು ಇದೇ ಮೊದಲು ಇದರ ಸಂಪೂರ್ಣ ಅಭಿವೃ  ದ್ಧಿಗೆ ಸರ್ಕಾರದಿಂದ ನೆರವು ತಗೆದುಕೊಂಡು ವಿಶೇಷವಾಗಿ ಭೈರವೇಶ್ವರ ದೇವಸ್ಥಾನದ ಅಭಿವೃದ್ಧಿ ಹಾಗೂ ಕೋಟೆಯನ್ನ ಸಂಪೂರ್ಣ ಅಭಿವೃದ್ಧಿ ಪಡಿಸುವುದರ ಜೊತೆಗೆ ನನ್ನ ಕನಸಿನ ಪ್ರಾಜೆಕ್ಟ್ ಅಂದರೆ ರೋಪ್‌ ವೇ ಮತ್ತು ಕೇಬಲ್‌ ಕಾರ್‌ ವ್ಯವಸ್ಥೆ ಮಾಡಬೇಕೆಂಬ ಉದ್ದೇಶವಿದೆ ಎಂದರು.

ಕೋಟೆಯ ಮೇಲ್ಭಾಗದಲ್ಲಿ ನಾಗದೇವರ ದೇಗುಲ, ವಿಶಾಲ ಹುಲ್ಲುಹಾಸಿನ ಮೈದಾನವಿದ್ದು, ಮೇಲೆ ಬರಲು ಕಷ್ಟವಾಗಿರುವುದರಿಂದ ಪ್ರವಾಸಿಗರಿಗೆ ಕಷ್ಟಕರವಾಗಿದೆ. ಇಂತಹ ಸುಂದರ ಅದ್ಭುತ ಪ್ರದೇಶವನ್ನು ಎಲ್ಲರೂ ನೋಡುವಂತಾಗಬೇಕು. ಕೋಟೆ ತಲುಪಲು ಕಷ್ಟಕರವಾಗಿರುವುದರಿಂದ ಚಿತ್ರದುರ್ಗ ಕೋಟೆಗೂ ಮೊದಲು ಹೊಸದುರ್ಗದ ಕೋಟೆಗೆ ಕೇಬಲ್‌ ಕಾರ್‌ ವ್ಯವಸ್ಥೆಯನ್ನ ಸರ್ಕಾರದಿಂದ ಮಾಡುವ ಚಿಂತನೆ ಮಾಡಲಾಗುವುದು. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಅನುದಾನ ಪಡೆದು ಈ ವರ್ಷ ಅಥವಾ ಮುಂದಿನ ವರ್ಷ ಹೊಸದುರ್ಗ ಕೋಟೆಗೆ ಕೇಬಲ್‌ ಕಾರ್‌ ಮತ್ತಿತರೆ ಅಭಿವೃದ್ಧಿ ಪಡಿಸುವ ಮೂಲಕ ಇದೊಂದು ಪ್ರವಾಸಿ ತಾಣವನ್ನಾಗಿ ಮಾಡಲಾಗುವುದು ಎಂದರು.

ಇದರ ಇತಿಹಾಸವನ್ನು ನಾಡಿಗೆ ತಿಳಿಸುವ ಸಂದರ್ಭ ಬಂದೋದಗಿದ್ದು, ಈ ನಿಟ್ಟಿನಲ್ಲಿ ಹೆಚ್ಚು ಅಭಿವೃದ್ಧಿ ಪಡಿಸುವ ಮೂಲಕ ಜನರು ನೋಡುವಂತಹ ಸ್ಥಳವಾಗಬೇಕು ಎಂಬುದು ನಮ್ಮ ಅಭಿಲಾಷೆ ಎಂದರು.

ಈ ಸಂದರ್ಭದಲ್ಲಿ ಸಿಪಿಐ ಫೈಜುಲ್ಲಾ, ಬಿಜೆಪಿ ಮುಖಂಡ ಆನಂದ್‌ಮೇದಾರ್‌, ತುಂಬಿನಕೆರೆ ಬಸವರಾಜು, ರಘು ರಾಜಾಹುಲಿ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್‌ ಮಗುಚಿ ಇಬ್ಬರು ನಟಿಯರ ಸಾವು

3

Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.