ಚರಂಡಿ ವಿಚಾರಕ್ಕೆ ಭಾರಿ ವಾಕ್ಸಮರ!
Team Udayavani, Aug 3, 2022, 3:49 PM IST
ಸಿಂಧನೂರು: ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣದ ಸ್ಥಳದಲ್ಲಿ ಚರಂಡಿ ಅಗೆಯಲಾಗುತ್ತಿದೆ ಎಂದು ಶಾಸಕ ವೆಂಕಟರಾವ್ ನಾಡಗೌಡರ ಪುತ್ರ ಅಭಿಷೇಕ್ ನಾಡಗೌಡ ಆಕ್ಷೇಪಿಸಿದ ಹಿನ್ನೆಲೆಯಲ್ಲಿ ಮಂಗಳವಾರ ನಗರದ ಪಿಡಬ್ಲ್ಯುಡಿ ಕ್ಯಾಂಪಿನಲ್ಲಿ ಕಾಂಗ್ರೆಸ್ ಆಡಳಿತ ಮಂಡಳಿ ಸದಸ್ಯರೊಂದಿಗೆ ತೀವ್ರ ವಾಗ್ವಾದ ನಡೆಯಿತು.
ಮಳೆಯಾಗಿದ್ದರಿಂದ ಪಿಡಬ್ಲ್ಯುಡಿ ಕ್ಯಾಂಪಿನಲ್ಲಿ ಬರುವ ಲಕ್ಷ್ಮೀಕ್ಯಾಂಪಿನ ಪ್ರದೇಶದಲ್ಲಿನ ನೀರು ಹರಿಯಲು ಅವಕಾಶ ಇಲ್ಲವಾಗಿದೆ ಎಂದು ನಗರಸಭೆಯಿಂದ ಜೆಸಿಬಿ ಬಳಸಿ ನೀರಾವರಿ ಇಲಾಖೆ ಜಾಗದಲ್ಲಿ ಚರಂಡಿ ತೆಗೆಯಲು ಆರಂಭಿಸಲಾಗಿತ್ತು. ಆದರೆ, ಈ ಜಾಗದಲ್ಲಿ ಈಗಾಗಲೇ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಿಸುತ್ತಿರುವುದರಿಂದ ಕಾಮಗಾರಿಗೆ ಅಡ್ಡಿಯಾಗುತ್ತದೆ ಎಂದು ಶಾಸಕರ ಪುತ್ರ ವಿರೋಧ ವ್ಯಕ್ತಪಡಿಸಿದರು.
ಈ ನಡುವೆಯೂ ಜೆಸಿಬಿ ಅಗೆತ ಮುಂದುವರಿದ ಹಿನ್ನೆಲೆಯಲ್ಲಿ ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ, ಮುರ್ತುಜಾಹುಸೇನ್ ಅವರೊಂದಿಗೆ ವಾಗ್ವಾದ ನಡೆಸಿ, ಜೆಸಿಬಿಯನ್ನು ನಿಲ್ಲಿಸಿದರು. ವಾದ-ವಿವಾದ: ಲಕ್ಷ್ಮೀಕ್ಯಾಂಪಿನಿಂದ ನೀರು ಹೋಗಬೇಕಾದರೆ, ಅದನ್ನು ನೇರವಾಗಿ ಸಿಂಧನೂರಿನ ಹಳ್ಳಕ್ಕೆ ಸಂಪರ್ಕ ಕಲ್ಪಿಸಬೇಕು. ಆದರೆ, ಮುನ್ನೆಚ್ಚರಿಕೆ ಇಲ್ಲದೇ ಚರಂಡಿ ಅಗೆಯುತ್ತಿದ್ದಾರೆ ಎಂದು ಜೆಡಿಎಸ್ ನವರು ಅಪಾದಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನವರು, ಕಲ್ವರ್ಟ್ ಕಿತ್ತು ಹಾಕಿ ತಾಯಿ-ಮಕ್ಕಳ ಆಸ್ಪತ್ರೆ ಕಾಮಗಾರಿಗಾಗಿ ಜನರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ದೂರಿದರು. ನಗರಸಭೆ ಆಡಳಿತ ಮಂಡಳಿ ಹಾಗೂ ಶಾಸಕರ ಪುತ್ರನ ವಾಗ್ವಾದ ಸಾರ್ವಜನಿಕವಾಗಿ ಚರ್ಚೆಗೆ ಗ್ರಾಸವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.