ಕೊವಿಡ್ ಪರೀಕ್ಷಾ ಕೇಂದ್ರ ಆರಂಭಿಸಿ: ಪಾಟೀಲ
Team Udayavani, Apr 29, 2020, 4:31 PM IST
ಹುಮನಾಬಾದ: ಕೋವಿಡ್ ಕುರಿತು ಶಾಸಕ ರಾಜಶೇಖರ ಪಾಟೀಲ ಸಭೆ ನಡೆಸಿದರು.
ಹುಮನಾಬಾದ: ಕೊವಿಡ್-19 ಸೋಂಕು ಪತ್ತೆ ಹಚ್ಚುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಶೀಘ್ರದಲ್ಲಿಯೇ ಪರೀಕ್ಷಾ ಕೇಂದ್ರ ಆರಂಭಿಸುವ ಭರವಸೆ ನೀಡಿದ್ದು, ಇಂದಿಗೂ ಭರವಸೆ ಈಡೇರಿಲ್ಲ. ಕೂಡಲೇ ಮುತುವರ್ಜಿ ವಹಿಸಿ ಲ್ಯಾಬ್ ಆರಂಭಿಸುವಂತೆ ಶಾಸಕ ರಾಜಶೇಖರ ಪಾಟೀಲ ಆಗ್ರಹಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕರೆದ ಸಭೆಯಲ್ಲಿ ಮಾತನಾಡಿದ ಅವರು, ದೆಹಲಿ ಪ್ರಕರಣ ಬಿಟ್ಟರೆ ಬೇರೆಯಾವುದೇ ಪ್ರಕರಣ ಕಂಡು ಬಂದಿಲ್ಲ. ಪತ್ತೆಯಾದ ಪ್ರಕರಣಗಳಿಗೆ ಸಂಬಂಧಿಸಿದಂತೆ ಇನ್ನೂ ಅನೇಕರ ಪರೀಕ್ಷೆ ನಡೆಯಬೇಕು ಎಂಬ ಮಾಹಿತಿ ಇದ್ದು, ಕೂಡಲೇ ಜಿಲ್ಲೆಯಲ್ಲಿ ಲ್ಯಾಬ್ ಸ್ಥಾಪನೆ ಮಾಡಿ ಬಾಕಿ ಇರುವ ಎಲ್ಲಾ ಶಂಕಿತರ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು.
ಕೊರೊನಾ ವೈರಸ್ ತಡೆಗಟುವ ನಿಟ್ಟಿನಲ್ಲಿ ಇಲ್ಲಿನ ಅ ಧಿಕಾರಿಗಳು ಸೂಕ್ತ ಕಾರ್ಯ ನಿರ್ವಹಣೆ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಕೂಡ ರೋಗ ಹರಡದಂತೆ ಎಚ್ಚರಿಕೆ ವಹಿಸಬೇಕಾಗಿದೆ. ಸದ್ಯ ಎಲ್ಲ ಅಧಿ ಕಾರಿಗಳು ಹಗಳಿರುಳು ಶ್ರಮಿಸುತ್ತಿದ್ದು, ಇದೇ ರೀತಿ ಮುಂದಿನ ದಿನಗಳಲ್ಲಿ ಕೂಡ ಕೆಲಸ ಮಾಡಬೇಕು. ಕಳೆದ ಕೆಲ ದಿನಗಳಿಂದ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿದ್ದು, ಮುಂದಿನ ದಿನಗಳಲ್ಲಿ ಬೀದರ್ ಜಿಲ್ಲೆ ಹಸಿರು ವ್ಯಾಪ್ತಿಗೆ ಬರಬೇಕು ಎಂದು ತಿಳಿಸಿದರು.
ಕ್ರಿಯಾ ಯೋಜನೆ ತಯಾರಿಸಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅಭಿವೃದ್ಧಿ ಯೋಜನೆ ಅಡಿಯಲ್ಲಿ ನಡೆಯಬೇಕಿರುವ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಅಧಿಕಾರಿಗಳು ಕ್ರಿಯಾ ಯೋಜನೆ ತಯಾರಿಸುವಂತೆ ಶಾಸಕ ರಾಜಶೇಖರ ಪಾಟೀಲ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
Maski ಅಕ್ರಮ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!
Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.