ಟಿಬಿ ಡ್ಯಾಂ ವಿಚಾರಕ್ಕೆ ಬಂದರೆ ಕಾನೂನು ಹೋರಾಟ


Team Udayavani, Jan 5, 2018, 3:30 PM IST

Rahul-1.jpg

ರಾಯಚೂರು: ತುಂಗಭದ್ರಾ ಜಲಾಶಯ ದಿಂದ ಪಾವಗಡಕ್ಕೆ ನೀರು ಪೂರೈಸಲು ರಾಜ್ಯ ಸಚಿವ ಸಂಪುಟ ಕೈಗೊಂಡ ನಿರ್ಧಾರ ಈ ಭಾಗಕ್ಕೆ ದೊಡ್ಡ ದ್ರೋಹ ಎಸಗಲಿದೆ. ಈ ಕೂಡಲೇ ಯೋಜನೆ ಕೈಬಿಡಬೇಕು. ಇಲ್ಲವಾದರೆ ಕಾನೂನು
ಹೋರಾಟಕ್ಕೂ ಸಿದ್ಧ ಎಂದು ವಾಣಿಜ್ಯೋದ್ಯಮ ಸಂಘದ ಜಿಲ್ಲಾಧ್ಯಕ್ಷ ತ್ರಿವಿಕ್ರಮ ಜೋಶಿ ಎಚ್ಚರಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಯ ರೈತರ ಜೀವನಾಡಿಯಾದ ಈ ಜಲಾಶಯ ಲಕ್ಷಾಂತರ ಜನರಿಗೆ ಕುಡಿಯುವ ನೀರೊದಗಿಸುತ್ತಿದೆ. ಆದರೆ, ಈಗ ಕೇವಲ
2.5 ಟಿಎಂಸಿ ಅಡಿ ನೀರು ಪಡೆಯುವುದಾಗಿ ಹೇಳುವ ಸರ್ಕಾರ ಮುಂದೆ ಒತ್ತಡ ಬಂದು ಯೋಜನೆ ವಿಸ್ತರಿಸಿದರೂ ಅಚ್ಚರಿಯಿಲ್ಲ. ಹೀಗಾಗಿ ಅದಕ್ಕೆ ಈಗಲೇ ಕಡಿವಾಣ ಹಾಕಬೇಕು. ಇದು ಬೇರೆ ಬೇರೆ ತಾಲೂಕುಗಳಿಗೆ ನೀರೊದಗಿಸುವ ಹುನ್ನಾರವಾಗಿದೆ ಎಂದರು.

ಇಂಥ ನಿರ್ಧಾರದ ಬಗ್ಗೆ ಸಚಿವ ಸಂಪುಟ ಸದಸ್ಯರಿಗೆ ಹೊರತಾಗಿಸಿ ಮತ್ಯಾವ ಜನಪ್ರತಿನಿಧಿಗಳಿಗೆ ಮಾಹಿತಿ ಇರಲಿಕ್ಕಿಲ್ಲ. ಇಲ್ಲವಾದಲ್ಲಿ ಅದಕ್ಕೆ ವಿರೋಧ ವ್ಯಕ್ತವಾಗುತ್ತಿತ್ತು.
 
ಈ ಕೂಡಲೇ ನಿರ್ಣಯ ಕೈಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜನಪ್ರತಿನಿಧಿಗಳ ನಿಯೋಗ ಮನವಿ ಸಲ್ಲಿಸಲಿದ್ದು, ಇಲ್ಲವಾದಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ತಿಳಿಸಿದರು.

ಜಲಾಶಯದ ಹಿನ್ನೀರಿನಲ್ಲಿ 2.3 ಟಿಎಂಸಿ ಅಡಿ ನೀರನ್ನು ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸಲು ಸಚಿವ ಸಂಪುಟ 2,350 ಕೋಟಿ ರೂ. ಯೋಜನೆಗೆ ಸಮ್ಮತಿ ನೀಡಿದೆ. ಜಲಾಶಯದಲ್ಲಿ ಕುದುರೆಮುಖ, ಬಳ್ಳಾರಿ ಸೇರಿ ವಿವಿಧೆಡೆ ನಡೆಸಿದ ಗಣಿಗಾರಿಕೆಯಿಂದ ಸುಮಾರು 30ರಿಂದ 35 ಟಿಎಂಸಿ ಅಡಿ ಹೂಳು ತುಂಬಿದೆ. ಜತೆಗೆ 20 ಟಿಎಂಸಿ ಅಡಿ ನೀರು ಆವಿಯಾಗುತ್ತಿದೆ ಎಂದು ಹೇಳಲಾಗುತ್ತಿದೆ. ಈ ಕಾರಣದಿಂದ ಮೂರು ಜಿಲ್ಲೆಗಳ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು ಅಸಮರ್ಪಕವಾಗಿ ಲಭ್ಯವಾಗುತ್ತಿದ್ದು, ಇನ್ನು ಯೋಜನೆ ಜಾರಿಗೊಂಡಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿ ಸಂಕಷ್ಟ ಎದುರಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಸಂಘದ ಸದಸ್ಯರಾದ ಹರವಿ ನಾಗನಗೌಡ, ಜಗದೀಶ ಗುಪ್ತಾ, ಎಂ.ಎನ್‌.ಮೂರ್ತಿ, ಜಂಬಣ್ಣ ಯಕ್ಲಾಸಪುರ ಇದ್ದರು.

ಪಾವಗಡಕ್ಕೆ ತುಂಗಭದ್ರಾ ನೀರು; ಮೂರು ಜಿಲ್ಲೆಗಳಿಗೆ ಅನ್ಯಾಯ ಸಿಂಧನೂರು: ತುಂಗಭದ್ರಾ ನೀರನ್ನು ಪಾವಗಡಕ್ಕೆ
ಬಿಡಲು ಸಚಿವ ಸಂಪುಟ ತೀರ್ಮಾನ ತೆಗೆದುಕೊಂಡಿದ್ದು, ಇದರಿಂದ ಮೂರು ಜಿಲ್ಲೆಗಳ ಜನತೆಗೆ ಅನ್ಯಾಯವಾಗಿದೆ ಎಂದು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹೇಳಿದರು.

ನಗರದ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂಮೂರು ವರ್ಷಗಳಿಂದ
ಮಳೆ ಬರದೆ ಇರುವುದರಿಂದ ತುಂಗಭದ್ರಾ ಜಲಾಶಯ ತುಂಬಿಲ್ಲ. ಇದರಿಂದ ರೈತರು ಬೆಳೆ ಇಲ್ಲದೆ ಕಷ್ಟದಲ್ಲಿರುವಾಗ
ಪಾವಗಡಕ್ಕೆ ನೀರು ಬಿಡಲು ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿದ್ದು ಸರಿಯಲ್ಲ. ತುಂಗಭದ್ರಾ ಎಡದಂಡೆ ಹಾಗೂ ಬಲದಂಡೆ ನಾಲೆಗಳಿಗೆ ಅಧಿಕೃತವಾಗಿ ನೀರು ಬಾರದ ಪರಿಸ್ಥಿತಿ ಉಂಟಾಗಿದೆ. ಜಲಾಶಯದ ಹಿನ್ನೀರನ್ನು ಬೇರೆ ಜಿಲ್ಲೆಗೆ ಕೊಡುವುದು ವೈಜ್ಞಾನಿಕವಾಗಿ ಸರಿಯುಲ್ಲ ಎಂದರು.

ಸಚಿವ ಸಂಪುಟ ಸಭೆಯಲ್ಲಿ ನೀರು ಬಿಡುವ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳುವಾಗ ಮೂರು ಜಿಲ್ಲೆಗಳ ಸಚಿವರ,
ಶಾಸಕರು ವಿರೋಧಿಸದೇ ಮೌನ ವಹಿಸಿರುವುದು ರೈತ ವಿರೋಧಿ ಧೋರಣೆ ಆಗಿದೆ. ಶಿಂಗಟಾಲೂರು ಹಾಗೂ ತುಂಗಾ ಯೋಜನೆಯಿಂದಾಗಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ನೀರು ಕಡಿಮೆಯಾಗಿದೆ. ಅಂಥದ್ದರಲ್ಲಿ ಪಾವಗಡಕ್ಕೆ ನೀರು ಬಿಡುವುದು ರೈತರಿಗೆ ಬರೆ ಎಳೆದಂತಾಗಿದೆ. ಕೂಡಲೇ ರಾಜ್ಯ ಸರ್ಕಾರ ಈ ತೀರ್ಮಾನ ಕೈಬಿಡದಿದ್ದರೆ ಮೂರು ಜಿಲ್ಲೆಗಳ ರೈತರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಬಿಜೆಪಿ ಮುಖಂಡರಾದ ಅಮರೇಗೌಡ ವಿರೂಪಾಪುರ, ಕೊಲ್ಲಾ ಶೇಷಗಿರಿರಾವ್‌, ಈರೇಶ ಇಲ್ಲೂರು, ಅಡಿವೆಪ್ಪ, ಮಧ್ವರಾಜಾಚಾರ್ಯ ಇತರರು ಇದ್ದರು.

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.