ವಿಶೇಷ ಘಟಕ ಯೋಜನೆಯಲ್ಲಿ ಅಕ್ರಮ: ತನಿಖೆಗೆ ಆಗ್ರಹ
Team Udayavani, Aug 3, 2017, 9:19 AM IST
ಲಿಂಗಸುಗೂರು: ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ತಾಲೂಕಿಗೆ ಮಂಜೂರಾದ ಕಾಮಗಾರಿಗಳಲ್ಲಿ ಅಕ್ರಮವಾಗಿದ್ದು ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಸಮತಾ ದಲಿತ ಮಹಾಸಭಾ ಕಾರ್ಯಕರ್ತರು ಬುಧವಾರ
ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
ತಾಲೂಕಿನ ಗೌಡೂರು, ಗುರುಗುಂಟಾ, ಮಾಚನೂರು, ಮಾಚನೂರು ತಾಂಡಾ ಸೇರಿ ಅನೇಕ ಗ್ರಾಮಗಳಲ್ಲಿ ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯಡಿ ಎಸ್‌ಸಿ ಹಾಗೂ ಎಸ್‌ಟಿ ಕಾಲೋನಿಗಳಲ್ಲಿ ಮಾಡಬೇಕಾದ ಕಾಮಗಾರಿಗಳನ್ನು ಬೇರೆ ಕಾಲೋನಿಗಳಲ್ಲಿ ಮಾಡಲಾಗಿದೆ. ಕೂಡಲೇ
ಗುತ್ತಿಗೆದಾರರ ಲೈಸನ್ಸ್ ರದ್ದುಪಡಿಸಬೇಕು. ಇನ್ನೂ ಕೆಲವು ಗ್ರಾಮಗಳಲ್ಲಿ ಕಾಮಗಾರಿಗಳು ಸಂಪೂರ್ಣ ಕಳಪೆಮಟ್ಟದಾಗಿವೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. 2016-17ನೇ ಸಾಲಿನಲ್ಲಿ ಲಿಂಗಸುಗೂರು ಪಟ್ಟಣದ ಪ್ರವಾಸಿಮಂದಿರದಲ್ಲಿ ಉದ್ಯಾನವನ ನಿರ್ಮಿಸಲು ಐದು ಲಕ್ಷ ರೂ. ಮಂಜೂರಾಗಿದ್ದು ಆದರೆ ಅಂದಾಜು ವೆಚ್ಚದ ಪತ್ರಿಕೆಯಂತೆ ಕಾಮಗಾರಿ ಮಾಡದೇ ಸಂಪೂರ್ಣ ಕಳಪೆ ಮಟ್ಟದಾಗಿದೆ. ಗುತ್ತಿಗೆದಾರರ ವಿರುದ್ಧ ಕ್ರಮ ಜರಗಿಸಬೇಕು. ಕಳೆದ ಸಾಲಿನ ಹಿಂಗಾರು ಮತ್ತು ಮುಂಗಾರು ಬೆಳೆ ಪರಿಹಾರ ಹಣ ಶೇ. 30 ರೈತರ ಖಾತೆಗೆ ಜಮೆ ಆಗಿಲ್ಲ. ಇದರಿಂದಾಗಿ ರೈತರು ಕಚೇರಿಗೆ ಅಲೆದಾಡುವಂತಾಗಿದೆ.
ಕೂಡಲೇ ರೈತರ ಖಾತೆಗೆ ಹಣ ಜಮಾ ಮಾಡಬೇಕು. ಗೌಡೂರು ಗ್ರಾಮ ಪಂಚಾಯತಿಯಲ್ಲಿ 2016-17ನೇ ಸಾಲಿನ ವಸತಿ ಯೋಜನೆಯ ಅಂಬೇಡ್ಕರ್, ಬಸವ ವಸತಿ ಯೋಜನೆಯಡಿ 217 ಮನೆಗಳು ಮಂಜೂರಾಗಿದ್ದು, ಮನೆ ಹಂಚಿಕೆಯಲ್ಲಿ ಗ್ರಾಪಂ ಅಧ್ಯಕ್ಷ, ಸದಸ್ಯರು ಹಾಗೂ ಪಿಡಿಒ ಹಣ ನೀಡಿದವರಿಗೆ ಮನೆ ಹಂಚಿಕೆ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು. ಮಹಾಸಭಾ ಅಧ್ಯಕ್ಷ ರೇವಣಸಿದ್ದಪ್ಪ ಗೌಡೂರು, ಚಿದಾನಂದ, ಭೀಮಣ್ಣ, ಬಸವರಾಜ ಗೌಡೂರು, ಯಲ್ಲಾಲಿಂಗ ಕುಣೆಕೆಲ್ಲೂರು, ಚಂದ್ರಶೇಖರ ಭವಾನಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
Maski ಅಕ್ರಮ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ
Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.