ಅಸಮರ್ಪಕ ನೀರು ಪೂರೈಕೆ; ಜನರ ಪರದಾಟ

Team Udayavani, Sep 24, 2018, 1:32 PM IST

ray-2.jpg

ಮುದಗಲ್ಲ: ಸ್ಥಳೀಯ ಪುರಸಭೆ ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ನಾಲ್ಕೈದು ದಿನಕ್ಕೊಮ್ಮೆ ನೀರು ಸರಬರಾಜು ಮಾಡುತ್ತಿರುವುದರಿಂದ ಸಾರ್ವಜನಿಕರು ನೀರಿಗಾಗಿ ಪರದಾಡುವಂತಾಗಿದೆ. ಶಾಶ್ವತ ಕುಡಿಯುವ ನೀರು ಯೋಜನೆಯಡಿ ಕೃಷ್ಣಾ ನದಿಯ ಜಡಿಶಂಕರಲಿಂಗೇಶ್ವರ ಬಳಿ ನಿರ್ಮಿಸಿದ ರಾಂಪುರ ಏತ ನೀರಾವರಿ ಜಾಕ್‌ವೆಲ್‌ನಿಂದ ಪಟ್ಟಣದ ಕನ್ನಾಪುರಹಟ್ಟಿ ಸೀಮಾರದ ಶ್ರೀ ಸಂಗಮೇಶ್ವರ ದೇವಸ್ಥಾನದ ಬಳಿ ನಿರ್ಮಿಸಿದ ನೀರು ಶುದ್ಧೀಕರಣ ಘಟಕಕ್ಕೆ ನೀರು ಪೂರೈಸಿ, ಅಲ್ಲಿ ನೀರು ಶುದ್ಧೀಕರಿಸಿ ಮುದಗಲ್ಲ ಪಟ್ಟಣಕ್ಕೆ ಸರಬರಾಜು ಮಾಡಲಾಗುತ್ತಿದೆ. 

ಮೊದಲಿಗೆ 7-8 ವರ್ಷ ಚೆನ್ನಾಗಿಯೇ ನೀರು ಸರಬರಾಜು ಮಾಡಲಾಯಿತು. ಆದರೆ ಈ ವರ್ಷ ಮಾತ್ರ ನೀರು ಸರಬರಾಜಿನಲ್ಲಿ ಭಾರೀ ವ್ಯತ್ಯಯ ಉಂಟಾಗುತ್ತಿದೆ. ಪಟ್ಟಣ ಬೆಳೆದಂತೆ ಜನಸಂಖ್ಯೆ ಹೆಚ್ಚಿದ್ದು, ಪಟ್ಟಣವನ್ನು 23 ವಾರ್ಡಗಳಾಗಿ ವಿಭಜಿಸಲಾಗಿದೆ. ಆದರೆ ನೀರಿನ ಯೋಜನೆಯಲ್ಲಿ ಯಾವುದೇ ಬದಲಾವಣೆ ಕಂಡುಬರುತ್ತಿಲ್ಲ ಹೀಗಾಗಿ ನಿತ್ಯ ನೀರಿನ ಸಮಸ್ಯೆ ಎದುರಾಗುತ್ತಿದೆ. ಪ್ರತಿದಿನ ಪೈಪ್‌ ಲೈನ್‌ ದುರಸ್ತಿ, ವಾಲ್‌ ರಿಪೇರಿ, ಮೋಟಾರು ರಿಪೇರಿ ಸೇರಿ ಹಲವು ಸಮಸ್ಯೆಗಳ ನೆಪದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ.

ಮೊದಲಿಗೆ ಎರಡು ದಿನಕ್ಕೊಮ್ಮೆ ನಿತ್ಯ ಬೆಳಗ್ಗೆ ನೀರು ಸರಬರಾಜು ಮಾಡಲಾಗುತ್ತಿತ್ತು. ಈಗ ನಾಲ್ಕೈದು ದಿನಕ್ಕೊಮ್ಮೆ ರಾತ್ರಿ 11 ಗಂಟೆಗೆ ನೀರು ಒದಗಿಸಲಾಗುತ್ತಿದೆ. ಹೀಗಾಗಿ ಪಟ್ಟಣದ ಜನತೆ ನೀರಿಗಾಗಿ ಚಾತಕ ಪಕ್ಷಿಯಂತೆ ಕಾದು ಕುಳಿತುಕೊಳ್ಳವಂತಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.  ಕಳೆದ 2-3 ತಿಂಗಳಿಂದ ಸಮರ್ಪಕ ನೀರು ಬಾರದ್ದರಿಂದ ನಿವಾಸಿಗಳು ಟ್ಯಾಂಕರ್‌ ನೀರು ಹಾಕಿಸಿಕೊಳ್ಳುವುದು, ಇಲ್ಲವೇ ಸ್ವಂತ ಕೊಳವೆಬಾವಿ ಕೊರೆಸುವುದು, ತಳ್ಳುಬಂಡಿ, ಸೈಕಲ್‌, ಬೈಕ್‌, ಆಟೋರಿಕ್ಷಾ, ಟಾಟಾ ಏಸ್‌ನಲ್ಲಿ ಕೊಡ, ಬ್ಯಾರಲ್‌ಗ‌ಳನ್ನು ಹಾಕಿಕೊಂಡು ನೀರು ತರುತ್ತಿರುವುದು ಸಾಮಾನ್ಯವಾಗಿದೆ. ನಿತ್ಯ ಕೆಲಸ ಬಿಟ್ಟು ನೀರಿಗಾಗಿ ಅಲೆದಾಡುವಂತಾಗಿದ್ದು, ಜನ ಪುರಸಭೆಗೆ ಹಿಡಿ ಶಾಪ ಹಾಕುತ್ತಿದ್ದಾರೆ. 

ಪಟ್ಟಣದಲ್ಲಿ ಸ್ವಲ್ಪ ಮಟ್ಟಿಗೆ ನೀರು ಸರಬರಾಜಿನಲ್ಲಿ ತೊಂದರೆಯಾಗಿದೆ. 24/7 ಶಾಸ್ವತ ಕುಡಿಯುವ ನೀರಿನ ಯೋಜನೆ ಕಾಮಗಾರಿ ಆರಂಭವಾಗಿದೆ. ಕೆಲವೇ ದಿನಗಳಲ್ಲಿ ನೀರಿನ ಸಮಸ್ಯೆಗೆ ಬ್ರೇಕ್‌ ಬೀಳುತ್ತದೆ.
 ಹಾಜಿಬಾಬು, ಪುರಸಭೆ ಮುಖ್ಯಾಧಿಕಾರಿ

ಟಾಪ್ ನ್ಯೂಸ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.