ಟಿನ್ ಶೆಡ್‌ನಲ್ಲಿ ಇಂದಿರಾ ವಸತಿ ಶಾಲೆ
• ಶಿಕ್ಷಕರ ಕೊರತೆ-ಅತಿಥಿ ಶಿಕ್ಷಕರೇ ಆಧಾರ • ಮಕ್ಕಳಿಗಿಲ್ಲ ಆಸನ ವ್ಯವಸ್ಥೆ • ತರಗತಿ-ವಸತಿ ಗೃಹಗಳಲ್ಲಿ ಜಾಗದ ಕೊರತೆ
Team Udayavani, Aug 6, 2019, 3:41 PM IST
ಸಿರವಾರ: ಕಲ್ಲೂರು ಹೊರವಲಯದ ಬಾಲಾಜಿ ಕ್ಯಾಂಪ್‌ನಲ್ಲಿರುವ ಇಂದಿರಾ ಗಾಂಧಿ ವಸತಿ ಶಾಲೆ.
ಸಿರವಾರ: ತಾಲೂಕಿನ ಕಲ್ಲೂರು ಗ್ರಾಮದ ಹೊರವಲಯದ ಬಾಲಾಜಿ ಕ್ಯಾಂಪ್‌ನಲ್ಲಿರುವ ಇಂದಿರಾ ಗಾಂಧಿ ವಸತಿ ಶಾಲೆ ಟಿನ್ ಶೆಡ್‌ನಲ್ಲಿ ನಡೆಯುತ್ತಿದ್ದು, ಕಾಯಂ ಶಿಕ್ಷಕರಿಲ್ಲದ್ದರಿಂದ ಅತಿಥಿ ಶಿಕ್ಷಕರೇ ಶಾಲೆಗೆ ಆಸರೆಯಾಗಿದ್ದಾರೆ.
ರಾಜ್ಯ ಸರ್ಕಾರ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ನೆನಪಿಗಾಗಿ 2017-18ನೇ ಸಾಲಿನಲ್ಲಿ ಕೋಟ್ಯಂತರ ಅನುದಾನ ಬಿಡುಗಡೆ ಮಾಡಿ ಪ್ರತಿ ಹೋಬಳಿಯಲ್ಲಿ ಇಂದಿರಾ ಗಾಂಧಿ ವಸತಿ ಶಾಲೆಗಳನ್ನು ಆರಂಭಿಸಿದೆ. ಆದರೆ ಶಾಲೆಗಳಿಗೆ ಸರಿಯಾದ ಕಟ್ಟಡ ಸೌಲಭ್ಯ ಇಲ್ಲ. ಶಿಕ್ಷಕರು, ಸಿಬ್ಬಂದಿಗಳನ್ನು ನೇಮಕ ಮಾಡಿಲ್ಲ. ಹೀಗಾಗಿ ಟಿನ್ ಶೆಡ್‌ನಲ್ಲೇ ಶಾಲೆ ನಡೆಸಲಾಗುತ್ತಿದೆ. ಅತಿಥಿ ಶಿಕ್ಷಕರಿಂದಲೇ ಮಕ್ಕಳಿಗೆ ಪಾಠ ಮಾಡಿಸಲಾಗುತ್ತಿದೆ.
ಟಿನ್‌ಶೆಡ್‌ನಲ್ಲಿ ಶಾಲೆ: ಇಂದಿರಾ ಗಾಂಧಿ ವಸತಿ ಶಾಲೆ ಕಳೆದ 3 ವರ್ಷಗಳಿಂದ ಟಿನ್‌ಶೆಡ್‌ನಲ್ಲಿ ನಡೆಯುತ್ತಿದೆ. ಬೇಸಿಗೆಯಲ್ಲಿ ಬಿಸಿಲಿನ ತಾಪಕ್ಕೆ ಮಕ್ಕಳು ಬೆಂದರೆ, ಮಳೆಗಾಲದಲ್ಲಿ ಮಳೆ ರಭಸದ ಶಬ್ಧ ಮತ್ತು ಚಳಿಗೆ ಮಕ್ಕಳು ನಲುಗುವಂತಾಗಿದೆ.
ಅತಿಥಿ ಶಿಕ್ಷಕರೇ ಆಧಾರ: ಶಾಲೆಯಲ್ಲಿ ಒಟ್ಟು 8 ಜನ ಶಿಕ್ಷಕರಿದ್ದು ಕಾಯಂ ಮುಖ್ಯ ಶಿಕ್ಷಕರನ್ನು ಹೊರತುಪಡಿದರೆ ಉಳಿದ 7 ಜನ ಅತಿಥಿ ಶಿಕ್ಷಕರಿದ್ದಾರೆ. ರಾಜ್ಯ ಸರ್ಕಾರ ಕಾಯಂ ಶಿಕ್ಷಕರ ನೇಮಕಾತಿ ಮಾಡಬೇಕೆಂದು ಶಿಕ್ಷಣ ಪ್ರೇಮಿಗಳು ಆಗ್ರಹಿಸಿದ್ದಾರೆ.
ಕೊಠಡಿಗಳ ಕೊರತೆ: ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಒಟ್ಟು 150 ವಿದ್ಯಾರ್ಥಿಗಳಿದ್ದು ಒಂದೊಂದು ತರಗತಿಗೆ 50 ವಿದ್ಯಾರ್ಥಿಗಳಿದ್ದಾರೆ. ಇರುವ ದೊಡ್ಡ ಟಿನ್ ಶೆಡ್‌ನಲ್ಲಿ ತರಗತಿಗಳಿಗೆ ಹಾಗೂ ವಸತಿ ನಿಲಯಕ್ಕೆ ಭಾಗಗಳನ್ನು ಮಾಡಿರಿಂದ ಕೊಠಡಿಗಳು ಚಿಕ್ಕದಾಗಿವೆ. ವಿದ್ಯಾರ್ಥಿಗಳು ಕುಳಿತುಕೊಳ್ಳುತ್ತಿದ್ದಾರೆ. ವಸತಿ ನಿಲಯದಲ್ಲಿ ಟ್ರಂಕ್‌ಗಳು, ಹಾಸಿಗೆಗಳು ಇರುವುದರಿಂದ ಮಲಗಲು ಸ್ಥಳವಿಲ್ಲದೆ ಇರುವುದರಲ್ಲಿ ವಾಸಿಸಬೇಕಾದ ಅನಿವಾರ್ಯತೆ ವಿದ್ಯಾರ್ಥಿಗಳದ್ದಾಗಿದೆ.
ಸಾಂಕ್ರಾಮಿಕ ಕಾಯಿಲೆ ಭೀತಿ: ವಸತಿ ಶಾಲೆ ಕ್ಯಾಂಪ್‌ನಲ್ಲಿದ್ದು ಸುತ್ತಲೂ ಹೊಲಗದ್ದೆಗಳಿವೆ, ಜಾಲಿಗಿಡಗಳು ಬೆಳೆದಿವೆ. ಇನ್ನು ಮಳೆಗಾಲ ಇರುವುದರಿಂದ ಗದ್ದೆಯಲ್ಲಿ ನೀರು ನಿಂತು ಕ್ರಿಮಿ ಕೀಟಗಳು ಹೆಚ್ಚಾಗಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯಲ್ಲಿ ವಿದ್ಯಾರ್ಥಿಗಳಿದ್ದಾರೆ.
ಬಿರುಕು ಬಿಟ್ಟ ಶೌಚಾಲಯ: ಇನ್ನು ಈ ಶಾಲೆಯಲ್ಲಿನ ಶೌಚಾಲಯಗಳು ಬಿರುಕು ಬಿಟ್ಟಿದ್ದು, ವಿದ್ಯಾರ್ಥಿಗಳು ಶೌಚಕ್ಕೆ ತೆರಳಲು ಹಿಂದೇಟು ಹಾಕುವಂತಾಗಿದೆ. ಇದರಿಂದಾಗಿ ಹೊರಗಡೆ ಶೌಚಕ್ಕೆ ತೆರಳುತ್ತೇವೆ ಎನ್ನುತ್ತಾರೆ ವಸತಿ ನಿಲಯದ ವಿದ್ಯಾರ್ಥಿಗಳು. ಇನ್ನಾದರೂ ಸಂಬಂಧಿಸಿದ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಗಮನಹರಿಸಿ ವಿದ್ಯಾರ್ಥಿಗಳಿಗೆ ಸೂಕ್ತ ಕಟ್ಟಡದ ವ್ಯವಸ್ಥೆ ಮಾಡಿಕೊಡಬೇಕಾಗಿದೆ.
ಸರ್ಕಾರ ವಸತಿ ಶಾಲೆಯನ್ನು ಇಲ್ಲಿಯೇ ನಡೆಸಲು ಆದೇಶಿಸಿದ್ದರಿಂಧ 3 ವರ್ಷಗಳಿಂದ ಟಿನ್ ಶೆಡ್‌ನಲ್ಲೇ ಶಾಲೆಯನ್ನು ನಡೆಸಲಾಗುತ್ತಿದೆ. ಒಂದು ವೇಳೆ ಸರ್ಕಾರ ಬೇರೆಡೆಗೆ ವರ್ಗಾವಣೆ ಮಾಡಿದಲ್ಲಿ ಶಾಲೆಯನ್ನು ಅಲ್ಲಿಗೆ ಸ್ಥಳಾಂತರಿಸಲಾಗುವುದು.•ಕವಿತಾ, ಮುಖ್ಯ ಶಿಕ್ಷಕಿ, ಇಂದಿರಾಗಾಂಧಿ ವಸತಿ ಶಾಲೆ, ಕಲ್ಲೂರು.
ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿನ ಸಮಸ್ಯೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಯೋಜನೆ ರೂಪಿಸಲಾಗುವುದು.•ರಾಜಾ ವೆಂಕಟಪ್ಪ ನಾಯಕ,ಶಾಸಕರು ಮಾನ್ವಿ
•ಮಹೇಶ ಪಾಟೀಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.