ತೋಟಗಾರಿಕೆ ಬೆಳೆಗಾರರಿಗೆ ಪರಿಹಾರ ನೀಡಲು ಸಿಎಂಗೆ ಮನವಿ
Team Udayavani, May 3, 2020, 4:33 PM IST
ಇಂಡಿ: ಆವರ್ತ ನಿಧಿಯಲ್ಲಿ ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ, ಕಲ್ಲಂಗಡಿ, ಲಿಂಬೆ, ಕರಬೂಜ್ ಬೆಳೆಗಾರರಿಗೆ ಪರಿಹಾರ ನೀಡಬೇಕೆಂದು ವಿಡಿಯೋ ಕಾನ್ಫರೆನ್ಸ್‌ನಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾಗಿ ಶಾಸಕ ಯಶವಂತ್ರಾಯಗೌಡ ಪಾಟೀಲ ಹೇಳಿದರು.
ಪಟ್ಟಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಮ್ಮ ಜಿಲ್ಲೆಯಲ್ಲಿ ಅತೀ ಹೆಚ್ಚಾಗಿ ತೋಟಗಾರಿಕೆ ಬೆಳೆ ಬೆಳೆಯಲಾಗುತ್ತಿದೆ. ಕೋವಿಡ್-19ರಿಂದಾಗಿ ತೋಟಗಾರಿಕೆ ಬೆಳೆ ಮಾರಾಟವಾಗದೇ ಹಾನಿಗೀಡಾಗಿದ್ದು, ರೈತ ಸಾಲಗಾರನಾಗಿದ್ದಾನೆ. ಆದ್ದರಿಂದ ರೈತರಿಗೆ ಪರಿಹಾರ ನೀಡಬೇಕೆಂದು ಮನವಿ ಮಾಡಿಕೊಂಡಿದ್ದೇನೆ. ಕಲ್ಲಂಗಡಿ ಬೆಳೆಗಾರರಿಗೆ ಎಕರೆಗೆ 40 ಸಾವಿರ ರೂ. ಪರಿಹಾರ ನೀಡುವಂತೆ ಸರಕಾರಕ್ಕೆ ಒತ್ತಾಯಿಸಲಾಗಿದ್ದು ಸರಕಾರ ಸ್ಪಂದಿಸಿದೆ. ಮುಂದಿನ ಮೂರು ತಿಂಗಳ ಒಳಗಾಗಿ ಈ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಲಿ ಕಾರ್ಮಿಕರಿಗೆ ತಮ್ಮ ಊರುಗಳಿಗೆ ತೆರಳಲು ಅನುಮತಿ ನೀಡಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದ ಅವರು ನಮ್ಮ ಜಿಲ್ಲೆಯ ಅನೇಕ ಕಾರ್ಮಿಕರು ಗೋವಾ ರಾಜ್ಯಕ್ಕೆ ಕೆಲಸಕ್ಕೆ ಹೋಗಿ ಸಾಕಷ್ಟು ಕಷ್ಟ ಅನುಭವಿಸಿದ್ದಾರೆ. ಈಗ ಮರಳಿ ತವರಿಗೆ ಬರಲು ಅವಕಾಶ ಕೊಟ್ಟಿದ್ದಕ್ಕಾಗಿ ಸರಕಾರಕ್ಕೆ ಕೈತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.