ಲಾಕ್‌ಡೌನ್ ದಿನವೂ 10 ಮಂದಿಗೆ ಸೋಂಕು
Team Udayavani, Jul 6, 2020, 9:40 AM IST
ರಾಯಚೂರು: ಜಿಲ್ಲೆಯಲ್ಲಿ ರವಿವಾರ 10 ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಇದರಿಂದ ಸೋಂಕಿತರ ಸಂಖ್ಯೆ 569ಕ್ಕೆ ಏರಿದೆ. ಚಿಕಿತ್ಸೆ ಪಡೆದ 422 ಜನರು ಸಂಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಇನ್ನೂ 141 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯ ದೇವದುರ್ಗ ತಾಲೂಕಿನಿಂದ 60, ಲಿಂಗಸುಗೂರು 6, ಮಾನ್ವಿ 17, ಸಿಂಧನೂರು 44 ಮತ್ತು ರಾಯಚೂರು 146 ಸೇರಿದಂತೆ ಒಟ್ಟು 273 ಜನರ ಗಂಟಲಿನ ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಹಿಂದೆ ಕಳುಹಿಸಿದ ವರದಿಗಳಲ್ಲಿ 299 ನೆಗೆಟಿವ್ ಆಗಿವೆ. ಒಟ್ಟಾರೆ ಜಿಲ್ಲೆಯಿಂದ ಈವರೆಗೆ 25,044 ಜನರ ಗಂಟಲಿನ ದ್ರವ ಮಾದರಿಯನ್ನು ಕೋವಿಡ್ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಅವುಗಳಲ್ಲಿ 22,763 ವರದಿಗಳು ನೆಗೆಟಿವ್ ಆಗಿವೆ. ಉಳಿದ 1,706 ಮಾದರಿಗಳ ಫಲಿತಾಂಶ ಬರಬೇಕಿದೆ. ಫೀವರ್ ಕ್ಲಿನಿಕ್‌ಗಳಲ್ಲಿಂದು 241 ಜನರನ್ನು ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಸ್ ನಿಲ್ದಾಣದಲ್ಲಿ ಕಾದು ಕುಳಿತ ಸೋಂಕಿತ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಕೋವಿಡ್ ಸೋಂಕಿತ ಕಾದು ಕುಳಿತ ಘಟನೆ ರವಿವಾರ ನಡೆದಿದೆ. ಪಾಸಿಟಿವ್ ಇರುವುದು ದೃಢಪಟ್ಟ ಕಾರಣ ಕರೆ ಮಾಡಿ ವಿಚಾರಿಸಿದ ಆರೋಗ್ಯ ಇಲಾಖೆ ಸಿಬ್ಬಂದಿ ಮೂರ್ನಾಲ್ಕು ಗಂಟೆ ತಡವಾಗಿ ಬಂದಿದ್ದಾರೆ. ಆಂಬ್ಯುಲೆನ್ಸ್‌ನಲ್ಲಿ ಕರೆದುಕೊಂಡು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯ ಸಿಂಧನೂರಿನ ಬ್ಯಾಂಕ್ ಆಫ್ ಬರೋಡಾದ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು.
ಹೀಗಾಗಿ ಆತನೊಂದಿಗೆ ಸಂಪರ್ಕದಲ್ಲಿದ್ದ ಸಿಬ್ಬಂದಿಗಳ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಹೋಂ ಕ್ವಾರಂಟೈನ್‌ನಲ್ಲಿರಲು ಸೂಚಿಸಲಾಗಿತ್ತು. ಪಾಸಿಟಿವ್ ಇರುವುದು ದೃಢಪಟ್ಟ ಕಾರಣ ಆರೋಗ್ಯ ಇಲಾಖೆ ಸಿಬ್ಬಂದಿ ಮೊಬೈಲ್‌ಗೆ ಕರೆ ಮಾಡಿದ್ದರು. ಅಲ್ಲಿಯೇ ಇರಿ ಬರುತ್ತೇವೆ ಎಂದು ತಿಳಿಸಿದ್ದರು. ಆದರೆ ಮೂರ್ನಾಲ್ಕು ಗಂಟೆ ತಡವಾಗಿ ಬಂದಿದ್ದು ಸೋಂಕಿತ ಕಾದು ಕೂರುವಂತಾಗಿತ್ತು. ಆದರೆ, ಸಿಂಧನೂರಿನಿಂದ ನಗರಕ್ಕೆ ಹೇಗೆ ಬಂದರು ಎಂಬ ಬಗ್ಗೆ ನಿಖರ ಮಾಹಿತಿ ಸಿಕ್ಕಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.