ಅಧಿಕಾರಿಗಳಿಂದ 13 ಜನರ ಮಾಹಿತಿ ಸಂಗ್ರಹ
Team Udayavani, Apr 4, 2020, 5:59 PM IST
ಸಿಂಧನೂರು: ದೆಹಲಿ ಧರ್ಮಸಭೆಗೆ ಹೋಗಿ ಬಂದಂತಹ ತಾಲೂಕಿನ ವಿವಿಧ ಗ್ರಾಮಗಳಲ್ಲಿನ 13 ಜನರನ್ನು ಅಧಿಕಾರಿಗಳು ತೀವ್ರ ತನಿಖೆ ನಡೆಸುತ್ತಿದ್ದಾರೆ.
ತುರ್ವಿಹಾಳ, ಕಲ್ಮಂಗಿಯಲ್ಲಿ 2 ಜನ, ಗುಂಜಳ್ಳಿ ಹಾಗೂ ಗುಂಜಳ್ಳಿಕ್ಯಾಂಪ್‌ನಿಂದ 11 ಜನರು ದೆಹಲಿಯ ನಿಜಾಮುದ್ದೀನ್ ಧರ್ಮಸಭೆಗೆ ಹೋಗಿ ಬಂದಿರುವುದು ತಿಳಿದು ಬಂದಿದೆ. ಆದರೆ ಇವರೆಲ್ಲರೂ ಕಳೆದ ಒಂದೂವರೆ ತಿಂಗಳ ಹಿಂದೆ ಹೋಗಿ ಬಂದಿರುವುದಾಗಿ ಅಧಿ ಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಇದೇ ತರಹ ಹಂಚಿನಾಳಕ್ಯಾಂಪ್‌ಗೆ ಗುಜರಾತಿನಿಂದ ವ್ಯಕ್ತಿಯೋರ್ವನು ಬಂದು ಇಲ್ಲಿಯೇ ಎಗ್‌ರೈಸ್ ವ್ಯಾಪಾರ ಮಾಡುತ್ತಿದ್ದಾನೆ. ಇತನು ಗುಜರಾತಿನಲ್ಲಿ ನಡೆದ ಧರ್ಮಸಭೆಗೆ ಹೋಗಿ ಬಂದಿರುವುದಾಗಿ ಖಚಿತ ಮಾಹಿತಿ ನೀಡಿದ್ದಾನೆ. 13 ಜನರನ್ನು ಸೇರಿಸಿ ಇತನನ್ನು ಅಧಿಕಾರಿಗಳು ತನಿಖೆ ಕೈಗೊಂಡು ಹೋಂಕ್ವಾರಂಟೈನ್‌ನಲ್ಲಿ ಇರಿಸಲಾಗಿದ್ದು, ವೈದ್ಯಾಧಿಕಾರಿಗಳು ಇವರ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ.
ಕೋವಿಡ್ 19 ಮುಂಜಾಗ್ರತಾ ಕ್ರಮವಾಗಿ ತಾಲೂಕಿನಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಈ ಹಿಂದೆ ತಾಲೂಕಿನ ವಿವಿಧ ಗ್ರಾಮಗಳಿಂದ ದೆಹಲಿಯ ನಿಜಾಮುದ್ದೀನ್ ಧರ್ಮಸಭೆಯಲ್ಲಿ 13 ಜನರು ಒಂದೂವರೆ ತಿಂಗಳ ಹಿಂದೆ ಹೋಗಿ ಬಂದಿರುವುದಾಗಿ ತಿಳಿದು ಬಂದಿದೆ. ಇನ್ನೂ ಗುಜರಾತಿನಿಂದ ಹಂಚಿನಾಳಕ್ಯಾಂಪ್‌ಗೆ ಬಬ್ಬ ವ್ಯಕ್ತಿ ಬಂದು ಇಲ್ಲಿಯೇ ಎಗ್‌ರೈಸ್ ವ್ಯಾಪಾರ ನಡೆಸುತ್ತಿರುವುದಾಗಿ ತಿಳಿದು ಬಂದಿದ್ದು, ಇವರೆಲ್ಲರನ್ನು ಹೋಂಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. –ಮಂಜುನಾಥ ಭೋಗಾವತಿ, ತಹಶೀಲ್ದಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
Maski ಅಕ್ರಮ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ
Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ
ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು
Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್
Yuzi Chahal: ಡಿವೋರ್ಸ್ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್; ಯಾರೀಕೆ?
Kuchuku Movie: ಟೀಸರ್‌ನಲ್ಲಿ ಕುಚುಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.