ಮೂಲ ಸೌಲಭ್ಯ ಒದಗಿಸಲು ಒತ್ತಾಯ
Team Udayavani, Feb 12, 2019, 10:52 AM IST
ದೇವದುರ್ಗ: ಮೂಲ ಸೌಲಭ್ಯ ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ಮುಖಂಡರು ಗಬ್ಬೂರು ನಾಡಕಚೇರಿ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮಂಜುನಾಥ ಅವರಿಗೆ ಮನವಿ ಸಲ್ಲಿಸಿದರು.
ಗಬ್ಬೂರು ಗ್ರಾಮಕ್ಕೆ ಸರ್ಕಾರಿ ಕನ್ಯಾ ಪ್ರೌಢಶಾಲೆ ಮಂಜೂರಿ ಮಾಡಬೇಕು. ಮೊರಾರ್ಜಿ ದೇಸಾಯಿ ಶಾಲಾ ಕಟ್ಟಡ ಕಾಮಗಾರಿ ಕೂಡಲೇ ಪ್ರಾರಂಭಿಸಬೇಕು. ಹೊನ್ನಟಗಿ ಗ್ರಾಮದ ನಿವೇಶನ ರಹಿತ ಫಲಾನುಭವಿಗಳನ್ನು ಆಯ್ಕೆ ಮಾಡಿ ಹಕ್ಕುಪತ್ರ ನೀಡಬೇಕು. ಎಸ್‌ಸಿ ಕಾಲೋನಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಬೇಕು. ಗಬ್ಬೂರಿನಿಂದ ಮದರಕಲ್‌ಗೆ ಸಂಪರ್ಕ ಕಲ್ಪಿಸುವ ರಸ್ತೆ ಡಾಂಬರೀಕರಣ ಮಾಡಬೇಕು. ಗಬ್ಬೂರು ಹೋಬಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ ಕಾರ್ಮಿಕರಿಗೆ ಕೂಲಿ ಪಾವತಿಸಬೇಕು. ಗಬ್ಬೂರು ಗ್ರಾಮದಲ್ಲಿ ಪ್ರಮುಖ ರಸ್ತೆ ಅಗಲೀಕರಣ ಮಾಡಿ ಸಿಸಿ ರಸ್ತೆ, ಚರಂಡಿ ನಿರ್ಮಿಸಬೇಕು. ಅಕ್ರಮ ಮದ್ಯ ಮಾರಾಟ ತಡೆಯಬೇಕು. ಎಸ್‌ಸಿ ಜನಾಂಗಕ್ಕೆ ರುದ್ರಭೂಮಿ ಮಂಜೂರು ಮಾಡಬೇಕು. ಗಬ್ಬೂರು, ಹೇಮನಾಳ, ಮಲದಕಲ್, ರಾಮದುರ್ಗ, ಶಾವಂತಗೇರಾ, ಹಿರೇಬೂದೂರು ಹಾಗೂ ನಾಗಡದಿನ್ನಿ, ಗ್ರಾಪಂ ವ್ಯಾಪ್ತಿಯ ಸರಕಾರಿ ಶಾಲೆಗಳಲ್ಲಿ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಮಲದಕಲ್ ಗ್ರಾಪಂ ವ್ಯಾಪ್ತಿಯ ಕರಡಿಗುಡ್ಡ ಶಾಲೆಗೆ ಜಾಗೆ ಲಭ್ಯವಿದ್ದು, ಕಟ್ಟಡ ನಿರ್ಮಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿದರು.
ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಮಂಜುನಾಥ ಮನವಿ ಸ್ವೀಕರಿಸಿ, ಅಧಿಕಾರಿಗಳ ಸಭೆ ನಡೆಸಿ ಬೇಡಿಕೆ ಈಡೇರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.
ಮೇಲಪ್ಪ ಭಾವಿಮನಿ, ಶಾಂತಕುಮಾರ ಹೊನ್ನಟಗಿ, ಹೇಮರಾಜ ಅಸ್ಕಿಹಾಳ, ರವಿಕುಮಾರ, ರಾಜಪ್ಪ ಸಿರವಾರಕರ್, ಬಸವರಾಜ, ಸೂರಿ, ಮರಿಯಪ್ಪ ಮಲದಕಲ್, ಬಸವರಾಜ, ಜಾಕೋಬ್, ಪ್ರಭು, ಮಲ್ಲಿಕಾರ್ಜನ ಸಿಂಗ್ರಿ, ಶಿವಪ್ಪ ಬಲ್ಲಿದವ, ಹನುಮಂತ ಎನ್.ಗಣೇಕಲ್, ಶಾಂತರಾಜ, ಶರಣಪ್ಪ ನೀಲಗಲ್, ಭೀಮಣ್ಣ, ಬಸವಂತ, ಬಸವರಾಜ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ʼಭಾರತೀಯ ಸಂಸ್ಕೃತಿ, ಭಗವದ್ಗೀತೆʼ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.