ಅನಧಿಕೃತ ಅಂಗಡಿ ತೆರವಿಗೆ ಒತ್ತಾಯ
Team Udayavani, Mar 30, 2022, 4:55 PM IST
ಮಾನ್ವಿ: ಪಟ್ಟಣದಲ್ಲಿ ರಸ್ತೆ ಅತಿಕ್ರಮಿಸಿ ನಿರ್ಮಿಸಿರುವ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಬೇಕು ಎಂದು ತ್ರಿಚಕ್ರ ವಾಹನ ಚಾಲಕರ ಸಂಘದ ತಾಲೂಕು ಸಮಿತಿ ಸಂಚಾಲಕ ರಮೇಶ ಒತ್ತಾಯಿಸಿದರು.
ಪಟ್ಟಣದಲ್ಲಿ ಪುರಸಭೆ ಮುಖ್ಯಾಧಿಕಾರಿ ಗಂಗಾಧರ ಅವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.
ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಪಂಪಾ ಉದ್ಯಾನವನದ ಸುತ್ತಮುತ್ತ ಅನಧಿಕೃತವಾಗಿ ಡಬ್ಟಾ ಅಂಗಡಿಗಳನ್ನು ರಸ್ತೆ ಮೇಲೆ ನಿರ್ಮಿಸಲಾಗಿದೆ. ಇದರಿಂದ ರಸ್ತೆಯಲ್ಲಿ ಪ್ರತಿನಿತ್ಯ ವಾಣಿಜ್ಯ ಅಂಗಡಿಗಳಿಗೆ ಸಾಮಾನು ಸಾಗಿಸುವ ಹಾಗೂ ಲಾರಿ, ಆಟೋಗಳ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ ಸ್ಥಳ ಪರಿಶೀಲಿಸಿ ಕೂಡಲೇ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಈ ವೇಳೆ ಬಿಜೆಪಿ ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಶ್ರೀಕಾಂತ ಪಾಟೀಲ ಗೂಳಿ, ಸಂಚಾಲಕರಾದ ಹನುಮಯ್ಯ, ರುದ್ರಸ್ವಾಮಿ, ಅಯ್ಯಪ್ಪ ನಾಯಕ, ನರಸಪ್ಪ, ತಿಮ್ಮರಾಜ ನಾಯಕ, ಗಂಗಾಧರ, ಬಂದೇನವಾಜ, ವೀರೇಶ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.