ಬೆಳೆ ವಿಮೆ ನೀತಿ ಬದಲಿಗೆ ಒತ್ತಡ

Team Udayavani, Feb 12, 2018, 4:46 PM IST

ray-3.jpg

ಗಂಗಾವತಿ (ಸಿಂಧನೂರು): ಬೆಂಬಲ ಬೆಳೆ ನೀತಿ ಮತ್ತು ಬೆಳೆ ವಿಮಾ ಕುರಿತು ಸಂಸತ್‌ ಅಧಿ ವೇಶನದಲ್ಲಿ ಕೂಲಂಕುಷವಾಗಿ ವಿಷಯ ಮಂಡಿಸಿ ರೈತರಿಗೆ ಅನುಕೂಲ ಮಾಡಲು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ  ಹೇಳಿದರು.

ಕಾಂಗ್ರೆಸ್‌ ಜನಾಶೀರ್ವಾದ ಯಾತ್ರೆಯ ಭಾಗವಾಗಿ ಸಿಂಧನೂರಿನಲ್ಲಿ ಆಯೋಜಿಸಿದ್ದ ರೈತ-ರೈತ ಮಹಿಳೆಯರ ಜತೆ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭಾರತ ಕೃಷಿ ಪ್ರಧಾನ ದೇಶ. ಪ್ರಸ್ತುತ ಕೃಷಿ ಮಾಡಲು ಸರಕಾರದ ನೆರವು ಅತ್ಯಗತ್ಯವಾಗಿ ಬೇಕು. ರೈತ ಸಾಲ ಮುಕ್ತನಾಗಲು ಸಾಲ ಮನ್ನಾ ಮಾಡುವ ಮೂಲಕ ಅವರನ್ನು  ಸ್ವಾವಲಂಬಿಯಾಗಿಸಬೇಕು. 

ಕೇಂದ್ರ ಸರಕಾರ 12 ಸಾವಿರ ಕೋಟಿ ಉದ್ಯಮಿಗಳ ಸಾಲ ಮನ್ನಾ ಮಾಡಿದೆ. ರೈತರ ಸಾಲ ಮನ್ನಾ ಮಾಡಲು ಮನಸು ಮಾಡುತ್ತಿಲ್ಲ. ಸಾಲಮನ್ನಾ ಸೇರಿ ರೈತರಿಗೆ ಸೌಲಭ್ಯ ನೀಡಿದರೆ ಅವರು ಸೋಮಾರಿಗಳಾಗುತ್ತಾರೆ ಎಂದು ಮಾಧ್ಯಮಗಳು ಬಿಂಬಿಸುತ್ತಿವೆ. ಉದ್ಯಮಿಗಳ ಸಾಲ ಮನ್ನಾ ಬಗ್ಗೆ ಯಾಕೆ ಪ್ರಶ್ನೆ ಮಾಡುತ್ತಿಲ್ಲ. ರೈತರಿಗೆ ಸಾಲ ಮನ್ನಾ ಎಷ್ಟು ಮುಖ್ಯವೋ ಸಬ್ಸಿಡಿಯೂ ಪ್ರಮುಖವಾಗಿದೆ. ಕೇಂದ್ರ ಸರಕಾರ ಸಬ್ಸಿಡಿ ನೀಡಲು ಆಗುವುದಿಲ್ಲ ಎಂದು ಹೇಳುವ ಮೂಲಕ ರೈತ ವಿರೋಧಿಯಾಗಿದೆ. ಕರ್ನಾಟಕ ಹಾಗೂ ಪಂಜಾಬ ರಾಜ್ಯಗಳಲ್ಲಿ ರೈತರ ಸಾಲ ಮನ್ನಾ ಮಾಡುವಂತೆ ತಾವು ನೀಡಿದ ಸಲಹೆಗೆ ಅಲ್ಲಿಯ ಸರಕಾರಗಳು ಸ್ಪಂದಿಸಿವೆ.
ಅದರಂತೆ ಕೇಂದ್ರ ಸರಕಾರ ಕೂಡ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ ರೈತರ ಸಾಲ ಮನ್ನಾ ಮಾಡುವಂತೆ ರಾಹುಲ್‌ ಆಗ್ರಹಿಸಿದರು.

ದೇಶದ ವಿವಿಧ ಭಾಗದಲ್ಲಿ ಸಂಚಾರ ಮಾಡಿ ರೈತ ಕೃಷಿಗೆ ಸಂಬಂಧಿಸಿದ ತೊಂದರೆ ಅಧ್ಯಯನ ನಡೆಸಿ ಕಾಂಗ್ರೆಸ್‌ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಅಳವಡಿಸಿಕೊಳ್ಳಲು ಈಗಾಗಲೇ ತಯಾರಿ ನಡೆಸಿದೆ ಎಂದರು. 

ಮದ್ಯ ನಿಷೇಧ ಮಾಡಿ: ರೈತ ಮಹಿಳೆಯೊರ್ವಳು ರಾಜ್ಯದಲ್ಲಿ ಮದ್ಯ ನಿಷೇಧ ಮಾಡುವಂತೆ ಕೇಳಿದ ಪ್ರಶ್ನೆಗೆ ರಾಹುಲ್‌ ಉತ್ತರಿಸಿ ಸಮಗ್ರವಾಗಿ ದೇಶದಲ್ಲಿ ಮದ್ಯ ನಿಷೇಧ ಮಾಡಿದರೆ ಮಾತ್ರ ಸಾರ್ಥಕ ವಾಗುತ್ತದೆ. ಒಂದು ರಾಜ್ಯ ನಿಷೇಧ ಮಾಡಿದರೆ ಯಶಸ್ವಿಯಾಗುವುದಿಲ್ಲ. ಪಕ್ಕದ ರಾಜ್ಯಗಳ ಮೂಲಕ ಕಳ್ಳದಾರಿಯಲ್ಲಿ ಮದ್ಯ ಸರಬರಾಜು ಆಗುತ್ತದೆ. ಅಕ್ರಮ ಹೆಚ್ಚಾಗುತ್ತದೆ ಎಂದರು. 

ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಪ್ರಶ್ನೆಗಳಿಗೆ ಉತ್ತರಿಸಿ ಮಾತನಾಡಿ, ತುಂಗಭದ್ರಾ ಜಲಾಶಯದಲ್ಲಿ ಸುಮಾರು 32 ಟಿಎಂಸಿಯಷ್ಟು ಹೂಳು ತುಂಬಿದೆ. ಆದ್ದರಿಂದ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆ ಯಾಗಿದೆ. ರೈತರಿಗೆ ಎರಡು ಬೆಳೆಗಳಿಗೆ ಪೂರ್ಣ ನೀರು ಹರಿಸಲು ಆಗುತ್ತಿಲ್ಲ. ಹೂಳು ತೆಗೆಯಲು ಅಸಾಧ್ಯ ಎಂದು ತಜ್ಞರ ವರದಿ ಪ್ರಕಾರ ತಿಳಿದಿದೆ.

ಅವೈಜ್ಞಾನಿಕವಾಗಿದ್ದು ಮಳೆಗಾಲದಲ್ಲಿ ನೀರು ಹರಿದು ಪೋಲಾಗದಂತೆ ತಡೆಯಲು ಸಮನಾಂತರ ಜಲಾಶಯ ನಿರ್ಮಾಣ ನೀರನ್ನು ಸಂಪೂರ್ಣವಾಗಿ ಬಳಕೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.  1000ಕ್ಕೂ ಹೆಚ್ಚು ರೈತ -ರೈತ ಮಹಿಳೆಯರು ಕೃಷಿ ಪದವೀಧರರಿದ್ದರು.

ಆಧಾರ್‌ ಇಲ್ಲದ ರೈತರಿಗಿಲ್ಲ ಎಂಟ್ರಿ ಸಿಂಧನೂರಿನ ಸ್ತ್ರೀ ಶಕ್ತಿ ಭವನದಲ್ಲಿ ರಾಹುಲ್‌ ಗಾಂಧಿ ಅವರು ನಡೆಸಿದ ರೈತರೊಂದಿಗೆ ಸಂವಾದಕ್ಕೆ ಪಾಸ್‌ ಜೊತೆಗೆ ಆಧಾರ್‌ ಕಾರ್ಡ್‌ ತರದ ರೈತರನ್ನು ಪೊಲೀಸರು ವಾಪಸ್‌ ಕಳುಹಿಸಿದ ಘಟನೆ ಜರುಗಿತು. ಸಂವಾದದಲ್ಲಿ ಪಾಲ್ಗೊಳ್ಳಲು ಆಯ್ಕೆಯಾದ ರೈತರಿಗೆ ಪಾಸ್‌ ನೀಡಲಾಗಿತ್ತು. ಜೊತೆಗೆ ಆಧಾರ್‌ ಕಾರ್ಡ್‌ ತರುವಂತೆ ಸೂಚಿಸಲಾಗಿತ್ತು. ಆದರೆ ಆಧಾರ್‌ ಕಾರ್ಡ್‌ ತರಲು ಮರೆತ ರೈತರಿಗೆ ಸಂವಾದದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡದೇ ಪೊಲೀಸರು ವಾಪಸ್‌ ಕಳುಹಿಸುತ್ತಿದ್ದರು. 

ಟಾಪ್ ನ್ಯೂಸ್

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

war alert in sweden and finland

ಯುದ್ಧ ಸನ್ನದ್ಧರಾಗಿ: ನಾಗರಿಕರಿಗೆ ಸ್ವೀಡನ್‌, ಫಿನ್‌ ಲ್ಯಾಂಡ್‌ ಎಚ್ಚರಿಕೆ!

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯKarnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್‌ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

war alert in sweden and finland

ಯುದ್ಧ ಸನ್ನದ್ಧರಾಗಿ: ನಾಗರಿಕರಿಗೆ ಸ್ವೀಡನ್‌, ಫಿನ್‌ ಲ್ಯಾಂಡ್‌ ಎಚ್ಚರಿಕೆ!

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.