ತ್ವರಿತಗತಿಯಲ್ಲಿ ಕಾಮಗಾರಿ ಮುಗಿಸಲು ಸೂಚನೆ
Team Udayavani, Dec 21, 2019, 1:22 PM IST
ರಾಯಚೂರು: ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿ.ಕುಮಾರ ನಾಯಕ ಶುಕ್ರವಾರ ನೆರೆ ಪೀಡಿತ ಪ್ರದೇಶಗಳಾದ ದೇವದುರ್ಗ ತಾಲೂಕಿನ ಗಬ್ಬೂರು, ಹೂವಿನಹೆಡಗಿ ಹಾಗೂ ಲಿಂಗದಹಳ್ಳಿಗೆ ಭೇಟಿ ನೀಡಿ ವಿವಿಧ ಕಟ್ಟಡ ಕಾಮಗಾರಿ ಹಾಗೂ ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ಕೈಗೊಂಡಿರುವ ಕಾಮಗಾರಿ ಪರಿಶೀಲಿಸಿದರು.
ಗಬ್ಬೂರಿನಲ್ಲಿ ನಿರ್ಮಾಣ ಹಂತದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಾಮಗಾರಿ ಪರಿಶೀಲಿಸಿದ ಅವರು ನಿಗದಿತ ಅವಧಿಯಲ್ಲಿ ನಿರ್ಮಾಣ ಕಾರ್ಯ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನಂತರ ದೇವದುರ್ಗ ತಾಲೂಕಿನನಿರ್ಮಾಣ ಹಂತದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಕಟ್ಟಡಕ್ಕೆ ಭೇಟಿ ನೀಡಿ ತ್ವರಿತಗತಿಯಲ್ಲಿ ಕೆಲಸ ಮುಗಿಸುವಂತೆ ಸೂಚಿಸಿದರು. ಇತ್ತೀಚೆಗೆ ಜಿಲ್ಲೆಯಲ್ಲಿ ಉಂಟಾದ ನೆರೆಹಾವಳಿಯಿಂದ ಮುಳುಗಡೆಯಾದ ಹೂವಿನಹೆಡಗಿ ಸೇತುವೆಗೆ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಅಲ್ಲಿ ಮನೆ ನಿರ್ಮಾಣಕ್ಕೆ ಸರ್ಕಾರದಿಂದ ಒದಗಿಸಿದ ಸೌಲಭ್ಯಗಳ ಕುರಿತು ಪರಿಶೀಲಿಸಿದರು.
ನಂತರ ಲಿಂಗದಳ್ಳಿಯಲ್ಲಿ ಆಯೋಜಿಸಿದ್ದ ಕರ್ನಾಟಕ ಹಾಲು ಒಕ್ಕೂಟ ಸಂಘದ ಸಭೆಯಲ್ಲಿ ಸದಸ್ಯರೊಂದಿಗೆ ಮಾತುಕತೆ ನಡೆಸಿದರು. ನೆರೆ ಹಾವಳಿಯಿಂದ ಹಾನಿಗೊಳಗಾದ ಸಾರ್ವಜನಿಕ ಆಸ್ತಿಗಳನ್ನು ಪುನರ್ ನಿರ್ಮಿಸುವ ಕುರಿತು ಮಾಹಿತಿ ಪಡೆದು ಬಾಕಿ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ, ಜಿಪಂ ಸಿಇಒ ಲಕ್ಷ್ಮೀಕಾಂತ ರೆಡ್ಡಿ, ಯತೀಶಕುಮಾರ, ದೇವದುರ್ಗ ತಹಶೀಲ್ದಾರ್ ಮಂಜುನಾಥ ಭೋಗಾವತಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸುಬ್ರಮಣ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.